--Ads--

ಜೂನ್ 12 ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

On: June 3, 2026 5:48 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಜೂನ್ 12 ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಜೂ 03:

ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು 2002 ರಲ್ಲಿ ಜೂನ್ 12 ದಿನವನ್ನು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಎಂದು ಘೋಷಣೆ ಮಾಡಿದೆ ಅಂದಿನಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. “ಬಾಲಕಾರ್ಮಿಕತೆಗೆ ರೆಡ್ ಕಾರ್ಡ್: ಮಕ್ಕಳಿಗೆ ನ್ಯಾಯಯುತ ಬಾಲ್ಯ, ವಯಸ್ಕರಿಗೆ ಘನತೆಯ ಕೆಲಸ” ಎಂಬುದು ಈ ವರ್ಷದ ಘೋಷವಾಕ್ಯ ಎಂದು ಹೇಳಿದರು.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಜೂನ್ 12 ರಂದು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಅಲ್ಲಿ ಸಾಕಷ್ಟು ಕೈಗಾರಿಕೆಗಳು, ಕಾರ್ಮಿಕರು ಇರುವುದರಿಂದ ಅಂದು ಜಾಗೃತಿ ಜಾಥಾ ನಡೆಯಲಿದ್ದು ಕಾರ್ಮಿಕರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದರು.

ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದು ಅವರಿಗೆ ಟಿ-ಶರ್ಟ್ ಮತ್ತು ಟೋಪಿ ವಿತರಿಸಲು, ಕಾರ್ಯಕ್ರಮಕ್ಕೆ ಲಘು ಉಪಹಾರದ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

28 ಬಾಲ ಕಾರ್ಮಿಕರ ರಕ್ಷಣೆ
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಾದ್ಯಂತ ಕೈಗಾರಿಕೆ, ಕಾರ್ಖಾನೆ, ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ಅಧಿಕಾರಿಗಳ ಜಂಟಿ ದಾಳಿ ನಡೆಸಿ 28 ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ ಬಾಲ ಹಾಗೂ ಕಿಶೋರ ಕಾರ್ಮಿಕರಿಗೆ ಪುನರ್ವಸತಿ ಒದಗಿಸಲಾಗಿ ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ, ಜೊತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅವರ ಜೀವನ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

‌ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಶೈಲ ಭೀಮಸೇನ ಬಾಗಡಿ, ನ್ಯಾ. ನಿತೀಶ್, ಕಾರ್ಮಿಕ ಅಧಿಕಾರಿ ಮುಕುಂದ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now