--Ads--

ಜಿಲ್ಲೆಯಲ್ಲಿ ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

On: June 4, 2026 6:27 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಿಲ್ಲೆಯಲ್ಲಿ ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.04,:

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂಧರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ ವೇದಿಕೆಯಲ್ಲಿ ವಿವಿಧ ತಳಿಯ “ಮಾವು ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ” ವನ್ನು ಜೂನ್ 05 ರಿಂದ 07 ವರೆಗೆ ದೇವನಹಳ್ಳಿ, ಟೌನ್ ನ ರಾಣಿ ಕ್ರಾಸ್ (ಹೋಟೆಲ್ ನಂದಿ ಉಪಚಾರ್ ಮುಂಬಾಗ, ನಂದಿ ಬೆಟ್ಟಕ್ಕೆ ಹೋಗುವ ರಸ್ತೆ ) ಬಳಿ ಆಯೋಜಿಸಲಾಗಿದೆ ಎಂದು ಜಿ.ಪಂ ಸಿಇಒ ಡಾ. ವಾಸಂತಿ ಅಮರ್ ತಿಳಿಸಿದ್ದಾರೆ.

ಮಾವು ಮತ್ತು ಹಲಸು ಒಂದು ಋತುಮಾನ ಆಧಾರಿತ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು, ಮಾವು ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸಿಗುವಂತೆ ಮಾಡಲು ದಿನಾಂಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಬೆಂಗಳೂರು ಗ್ರಾಮಾಂತರ ರವರ ಸಹಯೋಗದೊಂದಿಗೆ ಮೇಳ ಏರ್ಪಡಿಸಲಾಗಿದೆ.

ಈ ಮೇಳದಲ್ಲಿ 50ಕ್ಕೂ ಹೆಚ್ಚು ವಿವಿಧ ತಳಿಗಳ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಕಲ್ಪಿಸಲಾಗುವುದು. ಜಿಲ್ಲೆಯ ಸಾರ್ವಜನಿಕರು ಮೂರು ದಿನಗಳ ಈ ಮೇಳದಲ್ಲಿ ಭಾಗವಹಿಸಿ ರೈತರಿಂದ ನೇರವಾಗಿ ತಮಗಿಷ್ಟವಾದ ಹಣ್ಣುಗಳು ಖರೀದಿಸಬಹುದಾಗಿದ್ದು ಮೇಳದ ಸದುಪಯೋಗ ಪಡೆದುಕೊಳ್ಳಿ ಎಂದರು.

ಮೇಳವನ್ನು ಜೂನ್ 05 ರ ಬೆಳಿಗ್ಗೆ 10.30 ಗಂಟೆಗೆ ಕೆ.ಹೆಚ್ ಮುನಿಯಪ್ಪ ರವರು ಮಾನ್ಯ ಸಂಪುಟ ದರ್ಜೆ ಸಚಿವರು, ಕರ್ನಾಟಕ ಸರ್ಕಾರ ರವರು ಉದ್ಘಾಟನೆ ನೇರವೇರಿಸಲಿದ್ದಾರೆ, ಶ್ರೀ ಶರತ್ ಕುಮಾರ್ ಬಚ್ಚೇಗೌಡ, ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಶಾಸಕರು, ಹೊಸಕೋಟೆ ವಿಧಾನ ಸಭಾ ಕ್ಷೇತ್ರ ರವರು ಸಸ್ಯ ಸಂತೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ವಿಧಾನ ಸಭೆ,ಶಾಸಕರು ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು ಭಾಗವಹಿಸಲಿದ್ದಾರೆ.

ಮೇಳದಲ್ಲಿ ಸಸ್ಯ ಸಂತೆ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗಧಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು. ಸದರಿ ಸಸ್ಯ ಸಂತೆ ಯಲ್ಲಿ ಮಾವು, ಸೀಬೆ, ತೆಂಗು, ನೆರಳೆ, ಕರಿಬೇವು, ನಿಂಬೆ, ಸಪೋಟ, ಮಲ್ಲಿಗೆ ಹಾಗೂ ಇತ್ಯಾದಿ ಕಸಿ/ಸಸಿಗಳು ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲು ಉದ್ದೇಶಿಸಲಾಗಿದೆ ಎಂದು ಸಿಇಒ ಮಾಹಿತಿ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾವು ಬೆಳೆಯನ್ನು 5081.14 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ, ರಸಪುರಿ, ತೋತಾಪುರಿ, ಮಲ್ಲಿಕಾ, ಸೇಂದೂರಾ ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದ್ದು ವಾರ್ಷಿಕ ಉತ್ಪಾದನೆ 40653.64 ಮೆಟ್ರಿಕ್ ಟನ್ ಗಳೆಂದು ಅಂದಾಜಿಸಲಾಗಿರುತ್ತದೆ. ಹಲಸು ಬೆಳೆಯನ್ನು 60.00 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು ವಾರ್ಷಿಕ ಉತ್ಪಾದನೆ 2762 ಮೆಟ್ರಿಕ್ ಟನ್ ನಷ್ಟು ಅಂದಾಜಿಸಲಾಗಿದೆ.

ತೋಟಗಾರಿಕೆ ಇಲಾಖಾ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಪ್ರದೇಶ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಒಟ್ಟಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಣ್ಣಿನ ಬೆಳೆಗಳ ಸರ್ವತೋಮುಖ ಅಭಿವೃದ್ಧಿಗೆ ತೋಟಗಾರಿಕೆ ಇಲಾಖೆಯು ಜಿಲ್ಲೆಯ ರೈತರಿಗೆ ಹತ್ತು ಹಲವಾರು ಯೋಜನೆಗಳನ್ನು ತಲುಪಿಸಲು ಕಾರ್ಯೋನ್ಮುಖವಾಗಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕರು ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ ಜಿಲ್ಲೆ ಜೂ.04

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ, ಡಾ| ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಕನ್ನಡ, ಇಂಗ್ಲೀಷ್, ಹಿಂದಿ, ಗಣಿತ, ವಿಜ್ಞಾನ, ದೈಹಿಕ ಶಿಕ್ಷಕರು, ಸಮಾಜ ವಿಜ್ಞಾನ ಮತ್ತು ಗಣಕಯಂತ್ರ ವಿಷಯಗಳಲ್ಲಿ ವಿದ್ಯಾರ್ಹತೆ ಹಾಗೂ ಪರಿಣತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂ. 10 ರವರೆಗೆ ಅವಕಾವಿದ್ದು ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 9845308319 ಗೆ ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ಜಿಲ್ಲೆಯ ಕಲಾವಿದರು ಹಾಗೂ ಕಲಾ ತಂಡಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ಅನಾವರಣಕ್ಕೆ ವೇದಿಕೆ

ಬೆಂ.ಗ್ರಾ ಜಿಲ್ಲೆ ಜೂ.04-

ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಸಂಸ್ಥೆಯ ವತಿಯಿಂದ ರಾಜ್ಯದ ಸಾಂಸ್ಕೃತಿಕ ಕಲಾ ತಂಡಗಳು ಹಾಗೂ ಕಲಾವಿದರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸುವ ಮೂಲಕ ಕಲಾವಿದರ ಪ್ರತಿಭೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲು ವೇದಿಕೆ ಕಲ್ಪಿಸುತ್ತಿದೆ.

ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಮತ್ತು ರಾಜ್ಯ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.

ಜಿಲ್ಲೆಯ ಆಸಕ್ತ ಕಲಾವಿದರು ಹಾಗೂ ಕಲಾ ತಂಡಗಳು ನಿಗದಿತ ಅರ್ಜಿ ನಮೂನೆಯನ್ನು
https://kannadasiri.karnataka.gov.in/ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಯಲ್ಲಿ ಜೂ. 12ರೊಳಗೆ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now