ರೇಷ್ಮೆ ನಗರಿಯಲ್ಲಿ ಸಡಗರ, ಸಂಭ್ರಮದಿಂದ ಶ್ರೀರಾಮ ಶೋಭಾಯಾತ್ರೆ ಆಚರಣೆ
ಶಿಡ್ಲಘಟ್ಟ : ದಿಬ್ಬೂರಹಳ್ಳಿ ರಸ್ತೆಯ ಹನುಮಂತಪುರ ಗೇಟ್‌ನ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾದ ಯಾತ್ರೆಯು ರೇಷ್ಮೆನಗರಿ ಶಿಡ್ಲಘಟ್ಟ ನಗರದಲ್ಲಿ ಶ್ರೀರಾಮ ಶೋಭಾಯಾತ್ರೆ ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಪೂರ್ವಕವಾಗಿ ನಡೆಯಿತು.
ಹನುಮಂತಪುರ ಗೇಟ್‌ನಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು.
ಶೋಬಾಯಾತ್ರೆಯು ಸಾರಿಗೆ ಬಸ್ ನಿಲ್ದಾಣದವರೆಗೆ ಸಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.
ಯಾತ್ರೆಯಲ್ಲಿ ಕೇರಳದ ಚಂಡೆ ವಾದ್ಯ, ಸ್ಥಳೀಯ ಟಮಟೆ ಸೇರಿದಂತೆ ವಿವಿಧ ಕಲಾ ತಂಡಗಳ ಪ್ರದರ್ಶನವು ಭಕ್ತರಲ್ಲಿ ಉತ್ಸಾಹವನ್ನು ಹೆಚ್ಚಿಸಿತು, ಕೈಯಲ್ಲಿ ಭಗವಾಧ್ವಜ ಹಿಡಿದ ಭಕ್ತರು ‘ಜೈ ಶ್ರೀರಾಮ್’ ಎಂಬ ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕುತ್ತಾ ಸಾಗಿದರು ,12 ಅಡಿ ಎತ್ತರದ ಶ್ರೀ ಕೋದಂಡರಾಮನ ಮೂರ್ತಿ ಮತ್ತು 12 ಅಡಿ ಎತ್ತರದ ಶಿವನ ವಿಗ್ರಹದ ರಥಗಳು ವಿಶೇಷ ಆಕರ್ಷಣೆಯಾಗಿದ್ದವು.
ಯಾತ್ರೆಯಲ್ಲಿ ಬಾಗವಸಿದ ಭಕ್ತರಿಗಾಗಿ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಮಜ್ಜಿಗೆ, ನೀರು ಮತ್ತು ತಂಪು ಪಾನೀಯವನ್ನು ವಿತರಿಸಿ ಸೇವೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್ಟ್‌ನ ಅಧ್ಯಕ್ಷ ಬಿ.ವೆಂಕಟೇಶ್, ಗೌರವಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಿ.ಕೆ. ಅನಿಲ್‌ಕುಮಾರ್ ,ಭರತ್,ನಾಗೇಶ್, ರವಿಚಂದ್ರ,ಕಿರಣ್, ಲಕ್ಷ್ಮೀಪತಿ,ರಾಮಾಂಜಿನೇಯ ಹಾಗು ವಿವಿಧ ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಶ್ರೀರಾಮ ಭಕ್ತರು ಭಾಗವಹಿಸಿದ್ದರು.