ವಿಜಯ ದರ್ಪಣ ನ್ಯೂಸ್…..
ವಿಶ್ವ ತಂಬಾಕು ರಹಿತ ದಿನಾಚರಣೆ: ಕೆ.ಎಸ್.ಆರ್.ಟಿ.ಸಿ.
ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಶಿಡ್ಲಘಟ್ಟ : 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಕಾನೂನುಬಾಹಿರ ಭಾರತ ಸರ್ಕಾರವು ತಂಬಾಕು ಬಳಕೆ ನಿಯಂತ್ರಣಕ್ಕೆ ಹಲವು ಕಾನೂನು ಜಾರಿಗೆ ತಂದಿದೆ
ಹಿರಿಯ ಸಿವಿಲ್ ತಾಲ್ಲೂಕು ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷ ಮೊಹಮ್ಮದ್ ರೋಷನ್ ಷಾ ತಿಳಿಸಿದರು.
ತಾಲ್ಲೂಕಿನ ಬಳಿಯ ಹಿತ್ತಲಹಳ್ಳಿ ಕೆಎಸ್‌ಆರ್‌ಟಿಸಿ ಡಿಪೊ ಅವರಣದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ
ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಹಾಗು ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ತಂಬಾಕು ಸೇವನೆಯು ಕ್ಯಾನ್ಸರ್, ಹೃದಯ ರೋಗ, ಶ್ವಾಸಕೋಶದ ಕಾಯಿಲೆ ಸೇರಿದಂತೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ತಂಬಾಕು ಸೇವಿಸುವ ವ್ಯಕ್ತಿಗೆ ಮಾತ್ರವಲ್ಲ, ಅವರ ಸುತ್ತಮುತ್ತ ಇರುವವರಿಗೂ ಇದರ ಹೊಗೆ ಹಾನಿ ಉಂಟುಮಾಡುತ್ತದೆ ಎಂದು ಹೇಳಿದರು.
ಭಾರತ ಸರ್ಕಾರವು ತಂಬಾಕು ಬಳಕೆ ನಿಯಂತ್ರಣಕ್ಕೆ ಹಲವು ಕಾನೂನು ಜಾರಿಗೆ ತಂದಿದೆ ಕೋಟ್ನಾ ಎಂಬ ಕಾಯ್ದೆ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ ಹಾಗು ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರಂಜಿತಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ
ನಾರಾಯಣಸ್ವಾಮಿ, ಕಾರ್ಯದರ್ಶಿ ಭಾಸ್ಕರ್, ಎಪಿಪಿ ಮೊಹಮ್ಮದ ಖಾಜಾ, ವಕೀಲರಾಘವೇಂದ್ರ, ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕ ಜಗನ್ನಾಥ್, ದಂತವೈದ್ಯ ಡಾ.ಅಂಬಾದಾಸ್, ಡಾ. ನುಸಿಭಾ ಪರ್ಹೀನಾ, ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಹಿತ್ತಲಹಳ್ಳಿ ಸುರೇಶ್, ಮಂಜುನಾಥ, ಆರೋಗ್ಯ ಕೇಂದ್ರ ಹಾಗು ಐ.ಸಿ.ಟಿ.ಸಿ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.









