--Ads--

ಸೂರಜ್ ಹೆಗಡೆ ನಿಧನಕ್ಕೆ ಸಂತಾಪ

On: June 10, 2026 2:12 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸೂರಜ್ ಹೆಗಡೆ ನಿಧನಕ್ಕೆ ಸಂತಾಪ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.10:

ರಾಜ್ಯ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ರವರ ಮೊಮ್ಮಗರಾದ ಶ್ರೀ ಸೂರಜ್ ಹೆಗಡೆ ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಂತಾಪ ವ್ಯಕ್ತಪಡಿಸಿದೆ.

ಬುಧವಾರ ಜಿಲ್ಲಾಡಳಿತ ಭವನದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರ ಕಛೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಿ ಸೂರಜ್ ಹೆಗಡೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಬಿ ರಾಜಣ್ಣ “ಸೂರಜ್ ಹೆಗಡೆ ಅವರು ಅತ್ಯಂತ ಸರಳ ಹಾಗೂ ಸಜ್ಜನ ರಾಜಕಾರಣಿಯಾಗಿದ್ದರು. ದೇವರಾಜ ಅರಸು ಅವರ ರಾಜಕೀಯ ತತ್ವಗಳನ್ನು ಅಳವಡಿಸಿಕೊಂಡಿದ್ದ ಅವರ ಪಕ್ಷ ನಿಷ್ಠೆ ಹಾಗೂ ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಪಕ್ಷಕ್ಕೆ, ರಾಜ್ಯಕ್ಕೆ ತುಂಬಲಾರದ ನಷ್ಟ.

ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಸ್ಮರಿಸಿದರು.

ನಮ್ಮ ಹಾಗೂ ಸೂರಜ್ ಹೆಗಡೆ ಅವರ ಒಡನಾಟ ಚೆನ್ನಾಗಿತ್ತು. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಾಕಷ್ಟು ಸಲಹೆ, ಸೂಚನೆಗಳನ್ನು ನೀಡುತ್ತಿದ್ದರು.
ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂಧರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.

ಜೂ.12 ಕ್ಕೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.10 :

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ, ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂನ್ 12 ರಂದು ಆಚರಿಸಲಾಗುತ್ತಿದೆ.

ಜೂ.12 ರಂದು ಬೆಳಗ್ಗೆ 9.30ಕ್ಕೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್ ಬಳಿ “ಜಾಗೃತಿ ಜಾಥಾ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ.

ನಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಶ್ರೀಮತಿ ಕುಂಬ್ಳೆ ಶಾರದಮ್ಮ ಶ್ರೀ ಕುಂಬ್ಳೆ ನಂಜುಂಡಯ್ಯನವರ ಸಭಾಂಗಣದಲ್ಲಿ ಬೆಳಗ್ಗೆ 10: 30ಕ್ಕೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬಿ.ಎಸ್ ರೇಖಾ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ -2026 ರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿ ಅಧ್ಯಕ್ಷರಾಗಿರುವ ಡಾ. ಕೆ. ಎನ್. ಅನುರಾಧ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ ಭೀಮಸೇನ ಬಾಗಡಿ, 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ತಾಲ್ಲೂಕು ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ನಿರ್ಮಲ ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು, ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಡಿ. ಕ್ರಾಂತಿ ಕಿರಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಾಸಂತಿ ಅಮರ್, ಜಿಲ್ಲಾ ಪೋಲೀಸ್ ಅಧೀಕ್ಷಕ ಚಂದ್ರಕಾಂತ್ ಎಂ.ವಿ, ಅಪರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯಾದ ಸೈಯಿದ್ ಆಯಿಷಾ, ಮಕ್ಕಳ ಕಲ್ಯಾಣ ಸಮಿತಿಯ ಕೆ. ಚಿತ್ರಾವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ಎಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಬೈಲಾಂಜಿನಪ್ಪ ಪಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಡಾ|| ಲಕ್ಕಾ ಕೃಷ್ಣಾ ರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಅನಿತಾಲಕ್ಷ್ಮೀ ಎಸ್., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮೋಹನ್ ಕುಮಾರ್ ಎನ್., ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ. ಎಂ. ರೇಣುಕಾ ಮೂರ್ತಿ, ವೋವ್ಯೂ ಇಂಡಿಯಾ ಪ್ರೈ. ಲಿ., ಸಿ.ಎಸ್.ಆರ್. ಹೆಡ್ ಜಿ.ವಿ. ರಾವ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲೆಯ ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಮುಕುಂದ ಕೆ. ಜಿ., ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್ ಯು., ದೊಡ್ಡಬಳ್ಳಾಪುರ ತಾಲ್ಲೂಕಿನ ಪುಟ್ಟರಾಜು ಡಿ. ಆರ್., ನೆಲಮಂಗಲ ತಾಲ್ಲೂಕಿನ ದಯಾನಂದ ಸಾಗರ್ ಡಿ. ಹೆಚ್., ದೇವನಹಳ್ಳಿ ತಾಲ್ಲೂಕಿನ ರಾಜಶೇಖರಯ್ಯ ಬಿ ಎಂ ಉಪಸ್ಥಿತರಿರಲಿದ್ದಾರೆ.

 

WhatsApp

Join Now

Telegram

Join Now

Instagram

Join Now