--Ads--

ಸುಪ್ರೀಂ ಕೋರ್ಟ್ ‘ಸಮಾಧಾನ್ ಸಮಾರೋಹ್’ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೂಚನೆ

On: June 10, 2026 3:22 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಸುಪ್ರೀಂ ಕೋರ್ಟ್ ‘ಸಮಾಧಾನ್ ಸಮಾರೋಹ್’ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೂಚನೆ

ಬೆಂಗಳೂರು, ಜೂನ್ 10 :

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್) ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‍ಎಲ್‍ಎಸ್‍ಎ) ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳಿಗೆ ಸೂಚಿಸಿರುತ್ತಾರೆ.

ಎಲ್ಲಾ ಇಲಾಖೆಯ ಮುಖ್ಯಸ್ಥರು, ತಮ್ಮ ಇಲಾಖೆಗಳಲ್ಲಿ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಚಿತ ಲೋಕ್ ಅದಾಲತ್ ಮೂಲಕ ಸೌಹಾಧರ್À ಸೌಹಾರ್ದೀತವಾಗಿ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದಾರೆ.

ಅಲ್ಲದೇ, ಈ ಕುರಿತು ಕೈಗೊಂಡ ಕ್ರಮಗಳ ವರದಿಯನ್ನು 3 ದಿನಗಳ ಒಳಗಾಗಿ ನೇರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಿ, ಅದರ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಕಳುಹಿಸಿಕೊಡಬೇಕೆಂದು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.

ಕಂದಾಯ ಇಲಾಖೆ, ಕೆ.ಜಿ.ಐ.ಡಿ, ವಿಮಾ ಕಂಪನಿಗಳು, ಪೊಲೀಸ್ ಇಲಾಖೆ, ಖಾಸಗಿ ಕಾರ್ಪೊರೇಷನ್‍ಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಈ ಎಲ್ಲಾ ಇಲಾಖೆಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇಲಾಖಾ ಮುಖ್ಯಸ್ಥರು ಈ ವಿಷಯದಲ್ಲಿ ವೈಯಕ್ತಿಕ ಗಮನ ಹರಿಸಬೇಕೆಂದು ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಬೆಂಗಳೂರು, ಜೂನ್ 10:

ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ *ವೈಲ್ಡ್ ಪೋಲಿಯೋ ವೈರಸ್* (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

*ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು*. ನಂತರದ *2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ*. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp

Join Now

Telegram

Join Now

Instagram

Join Now