--Ads--

ಆಯುರ್ವೇದ ಆರೋಗ್ಯಕರ ಜೀವನ ಶೈಲಿ: ರಾಜ್ಯಪಾಲ ಥಾವರ್ ಚಂದ್ ಗೆಹೋಟ್

On: June 15, 2026 6:01 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಆಯುರ್ವೇದ ಆರೋಗ್ಯಕರ ಜೀವನ ಶೈಲಿ: ರಾಜ್ಯಪಾಲ ಥಾವರ್ ಚಂದ್ ಗೆಹೋಟ್

ದಾವಣಗೆರೆ: ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ತಿಳಿಸಿದರು.

ಅವರು ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (೦೫) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ದಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ. ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶ್ವಿನಿ ಕೆ.ಆರ್.ಡಾ.ಸುಮನ ಭಟ್ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now