ವಿಜಯ ದರ್ಪಣ ನ್ಯೂಸ್…
ಪಬ್ ನಲ್ಲಿ ನಡೆದ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತ್ತಿಗೆ ಶಿಫಾರಸ್ಸು: ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ

ತಾಂಡವಪುರ,ಜೂ.16: ನಿನ್ನೆ ಮೈಸೂರಿನ ದಟ್ಟಗಳ್ಳಿಯ ರಿಂಗ್ ರಸ್ತೆ ಬಳ ಇರುವ ಫಾಕ್ಸ್ ಡೆನ್ ಪಬ್ ನಲ್ಲಿ ನಿನ್ನೆ ನಡೆದ ಬೆಂಕಿ ಅವಘಡದಲ್ಲಿ ಇಬ್ಬರು ಸಾವಿಗೀಡಾದ ಹಿನ್ನೆಲೆಯಲ್ಲಿ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತ್ತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.
ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮಂಗಳವಾರ ಭೇಟಿ ನೀಡಿ, ನಿನ್ನೆ ಬೆಂಕಿ ಅವಘಡದಲ್ಲಿ ಸಾವಿಗೀಡಾದ ಇಬ್ಬರ ಅಂತಿಮ ದರ್ಶನಪಡೆದು ಮೃತ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲೆಯಲ್ಲಿ ಅಲ್ಲದೆ ಮೈಸೂರು ನಗರದಲ್ಲಿ ಯಾವುದೇ ಲೈಸೆನ್ಸ್ ಇಲ್ಲದೆ ಈ ಪಬ್ ನಡೆಸಲಾಗುತ್ತಿತ್ತು, ಹಾಗಾಗಿ ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ.ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.









