--Ads--

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು  ಅಭಿನಂದಿಸಿದ ಬಿ.ವಿ.ರಾಜೀವ್‌ಗೌಡ 

On: June 17, 2026 3:07 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.
ಹರಿಪ್ರಸಾದ್ ಅವರನ್ನು  ಅಭಿನಂದಿಸಿದ ಬಿ.ವಿ.ರಾಜೀವ್‌ಗೌಡ 

ಶಿಡ್ಲಘಟ್ಟ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.
ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಮುಖಂಡ ಬಿ.ವಿ.ರಾಜೀವ್‌ಗೌಡ ದೆಹಲಿಯಲ್ಲಿ ಭೇಟಿ
ಮಾಡಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ.

ಭಾಗ್ಯಾನಗರ ಕ್ಷೇತ್ರದ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ, ಗೌರಿಬಿದನೂರು ಮಾಜಿ ಸಚಿವ ಎನ್‌.ಎಚ್‌. ಶಿವಶಂಕರರೆಡ್ಡಿ, ನಂದಿ ಆಂಜಿನಪ್ಪ, ಪಿ.ಎನ್.ಕೇಶವರೆಡ್ಡಿ ಇನ್ನಿತರ ಮುಖಂಡರ ಜತೆ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ.

ನಂತರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ, ರಾಜಕೀಯ
ವಿದ್ಯಮಾನಗಳು ಕುರಿತು ಕೆಲ ಕಾಲ ಚರ್ಚಿಸಿ
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ
ವೇಳೆಗೆ ಪಕ್ಷವನ್ನು ಇನ್ನಷ್ಟು ಸಂಘಟಿಸುವ ಬಗ್ಗೆ
ಸಲಹೆ ಸೂಚನೆಯನ್ನು ಅವರಿಂದ
ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಅಧಿಕಾರ ವಹಿಸಿಕೊಂಡ, ಡಿ.ಕೆ. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅಧಿಕಾರ ವಹಿಸಿಕೊಳ್ಳುವ ಸಂಭ್ರಮಾಚರಣೆಯನ್ನು ಶಿಡ್ಲಘಟ್ಟದಲ್ಲಿ ಹಮ್ಮಿಕೊಳ್ಳಲಿದ್ದು ಕಾರ್ಯಕ್ರಮಕ್ಕೆ ಬರಬೇಕೆಂದು ಅವರು ಮನವಿ ಮಾಡಿದರು.

WhatsApp

Join Now

Telegram

Join Now

Instagram

Join Now