ವಿಜಯ ದರ್ಪಣ ನ್ಯೂಸ್….
ವಿದ್ಯುತ್ ಖಾಸಗೀಕರಣ ಗೊಳಿಸಿದರೆ ಹೋರಾಟ: ಅರುಣಕುಮಾರ್

ತಾಂಡವಪುರ ಜೂನ್ 18 ರೈತರಿಗೆ ಮರಣ ಶಾಸನವಾಗಲಿರುವ ವಿದ್ಯುತ್ ಇಲಾಖೆ ಖಾಸಗೀಕರಣ ಹಾಗೂ ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಜವಾಬ್ದಾರಿ ನೀಡಿಕೆಗೆ ರಾಜ್ಯ ಸರ್ಕಾರ ಮುಂದಾಗಬಾರದು. ಒಂದು ವೇಳೆ ಅ ರೀತಿ ಮಾಡಿದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಹೋರಾಟ ನಡೆಸಲಿದೆ ಎಂದು ರಾಜ್ಯಾಧ್ಯಕ್ಷ ಅರುಣ್ಕುಮಾರ್ ಎಚ್ಚರಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ವಿದ್ಯುತ್ ಖಾಸಗೀಕರಣದಿಂದ ಜನಸಾಮಾನ್ಯರು ಹಾಗೂ ರೈತಾಪಿ ವರ್ಗದವರಿಗೆ ಆರ್ಥಿಕ ಸಂಕಷ್ಟ ಎದುರಾಗಲಿದೆ. ಉಚಿತ ಪಂಪ್ಸೆಟ್ ವಿದ್ಯುತ್ಗೆ ಕತ್ತರಿ ಬೀಳಲಿದೆ. ನಿಗದಿತ ವೇಳೆಗೆ ಬಿಲ್ ಪಾವತಿಸದಿದ್ದಲ್ಲಿ ಕೂಡಲೇ ವಿದ್ಯುತ್ ಕಡಿತಗೊಳಿಸುವ ಖಾಸಗೀಕರಣದಿಂದ ಜನರ ಬದುಕು ಕತ್ತಲುಮಯವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದಲ್ಲದೆ, ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುವ ಸಾವಿರಾರು ಉದ್ಯೋಗಿಗಳನ್ನು ಬೀದಿಪಾಲು ಮಾಡುವವಂತಾಗುತ್ತದೆ. ಇದು ಎಲ್ಲರಿಗೂ ಮರಣ ಶಾಸನವಾಗುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರೈತ ಸಂಘಟನೆಗಳು ಆಕ್ಷೇಪ ಸಲ್ಲಿಸಿದ್ದು, ಸರ್ಕಾರ ಪುರಸ್ಕರಿಸಬೇಕೆಂದು ಆಗ್ರಹಿಸಿದರು.
ಇನ್ನಿತರ ಪದಾಧಿಕಾರಿಗಳಾದ ಚಾಮರಾಜ ಮಂಡಕಳ್ಳಿ, ಶ್ರೀಧರ್ ನಾಯಕ್, ಭರತ್ ಕಡಕೊಳ, ಮಂಚನಾಯಕ, ಮೀಸೆ ಮಂಜಣ್ಣ ಮುಂತಾದವರು ಹಾಜರಿದ್ದರು
ದೃಶ್ಯ ಕಲಾ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜೂ.18:
ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ಅಥವಾ “ರಾಜ್ಯ ಶಿಕ್ಷಣ ಪದ್ದತಿ’ ಯಂತೆ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ./ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು (UUCMS): https://uucms.karnataka.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಜೂ. 22 ರವರೆಗೆ (ದಂಡ ಶುಲ್ಕದೊಂದಿಗೆ) ಅರ್ಜಿಗಳನ್ನು ಸಲ್ಲಿಸಬಹುದು.
ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಒಳಗೊಂಡಿರುತ್ತದೆ.
ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂ. 23 ರಂದು ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2438931, ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಇಲ್ಲಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿಸಲಾಗಿದೆ.








