--Ads--

ಸಾಧಕರಿಗೆ ಮೈಸೂರು ಜಿಲ್ಲಾ ಪತ್ರಕರ್ತ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ ಪ್ರದಾನ

On: June 18, 2026 3:57 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಾಧಕರಿಗೆ ಮೈಸೂರು ಜಿಲ್ಲಾ ಪತ್ರಕರ್ತ ಭವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ ಪ್ರದಾನ

ತಾಂಡವಪುರ ಜೂನ್ 18: ಕನ್ನಡ ಚಳವಳಿ ಕೇಂದ್ರ ಸಮಿತಿಯು ಜಿಲ್ಲಾ ಪತ್ರಕರ್ತರ ಭವನದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು

ಮೈಸೂರು ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು, ಸಮಾಜ ಸೇವಕ ಬಿ.ಆರ್. ನಟರಾಜ ಜೋಯಿಸ್, ಉದ್ಯಮಿ ದೇವಪ್ರಕಾಶ್, ಶಿಕ್ಷಣ ಕ್ಷೇತ್ರದ ಆದಿಶೇಷಗೌಡ, ಪತ್ರಕರ್ತ ಮಹೇಂದ್ರ ದೇವನೂರುರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ರೈತರು ಹಾಗೂ ಇತರೆ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದೆ. ಆದರೆ ಕನ್ನಡಪರ ಹೋರಾಟಗಾರರ ಪ್ರಕರಣ ಮಾತ್ರ ಹಿಂದಕ್ಕೆ ತೆಗೆದುಕೊಂಡಿಲ್ಲ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಂ. ಚಂದ್ರಶೇಖರ್ ಆಶಯ ಭಾಷಣ ಮಾಡಿದರು

. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿದರು. ರಂಗಕರ್ಮಿ ರಾಜಶೇಖರ ಕದಂಬ, ಎಚ್.ಕೆ. ಅನಂತ, ದಾರಿಪುರ ಚಂದ್ರಶೇಖರ್, ಜೈಪ್ರಕಾಶ್, ನಾರಾಯಣರಾವ್, ರಂಗನಾಥ್ ಮೈಸೂರು ಮೊದಲಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now