ವಿಜಯ ದರ್ಪಣ ನ್ಯೂಸ್….
ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಜೂನ್ 25 ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ತಿಳಿಸಿದರು
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ಆಯೋಜಿಸಲಾದ ‘ಇ-ಖಾತಾ ಹಾಗೂ ನಗರಾಭಿವೃದ್ಧಿಯಲ್ಲಿನ ಸಮಸ್ಯೆಗಳು’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕೈಗಾರಿಕೋದ್ಯಮಿಗಳು ಹಾಗೂ FKCCI ಪ್ರತಿನಿಧಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು.
ಸಭೆಯಲ್ಲಿ ಇ-ಖಾತಾ ಪ್ರಕ್ರಿಯೆಯಲ್ಲಿನ ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸೇರ್ಪಡೆಯಾದ ಕೈಗಾರಿಕಾ ಪ್ರದೇಶಗಳ ಆಸ್ತಿ ತೆರಿಗೆ ಸಂಬಂಧಿತ ಗೊಂದಲಗಳು, ಕೈಗಾರಿಕೆಗಳಿಗೆ ಅಗತ್ಯವಿರುವ ಮೂಲಸೌಕರ್ಯ, ನೀರಿನ ಸರಬರಾಜು, ಒಳಚರಂಡಿ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ಪರವಾನಗಿ ಪ್ರಕ್ರಿಯೆಯಲ್ಲಿನ ವಿಳಂಬ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಯಲ್ಲಿ ಎಂಎಸ್‌ಎಂಇ ವಲಯದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಇ-ಖಾತಾ ಪ್ರಕ್ರಿಯೆಯನ್ನು ಇನ್ನಷ್ಟು ಸರಳ ಮತ್ತು ಪಾರದರ್ಶಕಗೊಳಿಸುವುದರ ಜೊತೆಗೆ, KIADB ಸೇರಿದಂತೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಉದ್ಯಮಿಗಳ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, FKCCI ಅಧ್ಯಕ್ಷ ಉಮಾ ರೆಡ್ಡಿ ಹಾಗೂ ಸಂಘಟನೆಯ ಪದಾಧಿಕಾರಿಗಳು, ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು
ಕೈಗಾರಿಕೋದ್ಯಮಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸರ್ ಎಂ ವಿಶ್ವೇಶ್ವರಯ್ಯ ರವರಿಗೆ ನೂತನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾಕ್ಟರ್ ಯತಿಂದ ಸಿದ್ರಾಮಯ್ಯನವರು ವಿಶ್ವೇಶ್ವರಿಯ ರವರ ಪ್ರತಿಮೆಗೆ ಮಾದರ್ಪಣ ಮಾಡಿ ನಮಿಸಿ ವಂದಿಸಿದರು











