--Ads--

ಮಕ್ಕಳ ಉಜ್ವಲ ಭವಿಷ್ಯಕ್ಕೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

On: June 28, 2026 12:47 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಡಿಸಿ ಚಾಲನೆ

ಮಕ್ಕಳ ಉಜ್ವಲ ಭವಿಷ್ಯಕ್ಕೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.28 :

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಭಾನುವಾರ ದೇವನಹಳ್ಳಿ ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ಎನ್ ಅನುರಾಧ ಅವರು ಪುಟ್ಟ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು “ಮಕ್ಕಳ ಭವಿಷ್ಯ ಸುರಕ್ಷಿತವಾಗಿರಬೇಕು ಎಂಬ ದೂರದೃಷ್ಟಿಯಿಂದ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ದೇಶವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಲಾಗಿದೆ. ಆದಾಗ್ಯೂ ಬೇರೆ ದೇಶದ ಭಾಗಗಳಲ್ಲಿ ಇಂದಿಗೂ ಪೋಲಿಯೋ ಸಮಸ್ಯೆ ಇದೆ. ನಮ್ಮ ದೇಶದಲ್ಲಿ ಮತ್ತೆ ಪೋಲಿಯೋ ಸಮಸ್ಯೆ ಬರಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ ಎಂದರು.

ಪೋಷಕರು ತಮ್ಮ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಡಿಸಿ ಮನವಿ ಮಾಡಿದರು.

ಜಿ.ಪಂ ಸಿಇಒ ಡಾ. ವಾಸಂತಿ ಅಮರ್ ಮಾತನಾಡಿ, 28 ರಿಂದ ಜುಲೈ 01 ರವರೆಗೆ ಅಂದರೆ 5 ದಿನಗಳ ಕಾಲ ಅಭಿಯಾನ ನಡೆಯಲಿದ್ದು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದ ಒಟ್ಟು 1,00,434 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. 479 ಬೂತ್ ಗಳಲ್ಲಿ 2046 ಲಸಿಕಾದಾರರು ಈ ಅಭಿಯಾನದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಕ್ಕಾ ಕೃಷ್ಣ ರೆಡ್ಡಿ, ಅರ್ಸಿಹೆಚ್ ಅಧಿಕಾರಿ ಡಾ. ಸೀಮಾ ಮಾಬಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

WhatsApp

Join Now

Telegram

Join Now

Instagram

Join Now