--Ads--

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ

On: June 30, 2026 4:13 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ

ತಾಂಡವಪುರ ಜೂನ್ 29 ಮೈಸೂರಿನ ಜೆಕೆ ಗ್ರೌಂಡ್ ನಲ್ಲಿ ನಡೆದ ಎಸ್‌ಐಆರ್ ಜಾಗೃತಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಾತನಾಡುತ್ತಾಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ –
ಎಸ್‌ಐಆರ್ ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ ನಾವು ನೋಡಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿ ಉಳಿಯಲು ಏನು ಬೇಕಾದರೂ ಮಾಡಲು ಹೇಸದವರು ಎಂದು ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಅಂದರೆ 2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ.
ಇಡೀ ದೇಶದ 141 ಕೋಟಿ ಜನಸಂಖ್ಯೆಯಲ್ಲಿ 96 ಕೋಟಿ ಮತದಾರರಿದ್ದಾರೆ. ನಮ್ಮಲ್ಲಿ ಬಹಳಷ್ಟು ಜನ 1,000 ದಿಂದ 5,000 ಮತಗಳ ಅಂತರದಿಂದ ಗೆದ್ದವರು ಇದ್ದಾರೆ. ಇಂತಹ ಕಡೆ ನಾಲ್ಕೈದು ಸಾವಿರ ಮತಗಳನ್ನು ಕಿತ್ತು ಹಾಕಿದರೆ ನಮ್ಮವರ ಗೆಲುವು ಕಷ್ಟ. ಇದಕ್ಕಾಗಿ ಪಕ್ಷ ಇಷ್ಟು ದೊಡ್ಡ ಮಟ್ಟದಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಬಡವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾತರ ಮತಗಳನ್ನು ಡಿಲೀಟ್ ಮಾಡುತ್ತಾರೆ. ಈ ಜನರೇ ಬಿಜೆಪಿ ಪಕ್ಷದ ಟಾರ್ಗೆಟ್ ಎಂದು ಹೇಳಿದ ಅವರು
ದೇಶದಲ್ಲಿ ಬಿಜೆಪಿ ಪಕ್ಷ ಕೇವಲ 36% ಮತ ಪಡೆದಿದೆ. 64% ಜನ ಬಿಜೆಪಿ ವಿರುದ್ಧವಾಗಿ ಮತ ಹಾಕಿದ್ದಾರೆ. ಈ 64% ನಲ್ಲಿ 10% ಮತಗಳನ್ನು ಕೈಬಿಟ್ಟರೆ ಏನಾಗುತ್ತದೆ ಎಂದು ಊಹಿಸುವುದು ಕಷ್ಟ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಎಸ್‌ಐಆರ್ ಕಾರ್ಯ ನಡೆಯುವ ಜೂನ್ 30 ರಿಂದ ಜುಲೈ 29 ರ ವರೆಗೆ ಒಂದು ತಿಂಗಳ ಕಾಲ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಈಗ ದೇಶದಲ್ಲಿ‌ ಸಂವಿಧಾನಬದ್ಧವಾದ ಚುನಾವಣಾ ಆಯೋಗ ಇಲ್ಲ ಎನ್ನುವುದನ್ನು ಮರೆಯಬೇಡಿ. 2019ರಲ್ಲಿ ಬಿಜೆಪಿಯ 303 ಜನ ಗೆದ್ದಿದ್ದರು, ಈಗ 2024ರಲ್ಲಿ 240ಕ್ಕೆ ಇಳಿದಿದ್ದಾರೆ. ಇದಕ್ಕೆ ಬೆಲೆಯೇರಿಕೆ, ವಚನ ಭ್ರಷ್ಟತೆ, ನಿರುದ್ಯೋಗ ಕಾರಣ. ಈ ಫಲಿತಾಂಶವನ್ನು ಮುಂದಿನ ದಿನಗಳಲ್ಲಿ ಎಸ್‌ಐಆರ್ ಮೂಲಕ ಬದಲಾಯಿಸಲು ಹೊರಟಿದ್ದಾರೆ.

ಬಿಜೆಪಿಯವರು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿಗಳು. ಅವರಿಗೆ ಸರ್ವಾಧಿಕಾರದಲ್ಲಿ ಮಾತ್ರ ನಂಬಿಕೆ. ಅವರದ್ದು ಒನ್ ನೇಷನ್, ಒನ್ ಎಲೆಕ್ಷನ್ ನೀತಿ. ಹಿಂದುತ್ವದ ಮಾತಾಡುವವರು ಜಾತಿ, ವರ್ಣಾಶ್ರಮದ ಹೆಸರಲ್ಲಿ ಜನರನ್ನು ಶೋಷಣೆ ಮಾಡಿಲ್ಲವೇ? ಶೂದ್ರ ಸಮುದಾಯ ಬಿಜೆಪಿ ಜೊತೆ ಹೋಗಲೇಬಾರದು. ಸಾಮಾಜಿಕ ನ್ಯಾಯ ಬರಬಾರದು, ಬಂದರೆ ಶೋಷಣೆಗೆ ಅವಕಾಶ ಇಲ್ಲ ಎಂಬುದನ್ನು ಅವರು ಅರಿತಿದ್ದಾರೆ. ಬಿಜೆಪಿ ಪಕ್ಷದವರು ಸುಳ್ಳನ್ನು ಸೃಷ್ಟಿಸಿ, ಮಾರಾಟ ಮಾಡಿ, ಅದನ್ನೇ ಸತ್ಯ ಮಾಡುತ್ತಾರೆ.

13 ರಾಜ್ಯಗಳಲ್ಲಿ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆಗಿದೆ, ಹರಿಯಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಫಲಿತಾಂಶ ಏನಾಗಿದೆ? ಕೇರಳದಲ್ಲಿ ಇವರ ಆಟ ನಡೆಯಲಿಲ್ಲ ಅಷ್ಟೆ. ಬಿಜೆಪಿ ಎರಡು ಬಾರಿಯೂ ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು. ಅವರು ಅಧಿಕಾರದಲ್ಲಿ ಉಳಿಯಲು ಏನು ಮಾಡಲು ಹೇಸದವರು. ಆರ್‌ಎಸ್‌ಎಸ್ ನ ಸಂಸ್ಥಾಪಕ ಹೆಡ್ಗೆವಾರ್ ಅವರು ತಮ್ಮ ಆಪ್ತರನ್ನು ಇಟಲಿ, ಜರ್ಮನಿಗೆ ಕಳಿಸಿ ಅಲ್ಲಿ ಸರ್ವಾಧಿಕಾರಿ ಹೇಗೆ ನಡೆಯುತ್ತದೆ ಎಂದು ಅಧ್ಯಯನ ಮಾಡಲು ಬಿಟ್ಟಿದ್ದರು.

ಅಲ್ಲಿಂದಲೇ ಇವರ ಸರ್ವಾಧಿಕಾರದ ವ್ಯಾಮೋಹ ಹುಟ್ಟಿದ್ದು. ನೀವು ಎಚ್ಚರ ತಪ್ಪಿದರೆ ನಿಮ್ಮನ್ನು ಮುಗಿಸ್ತಾರೆ. ಅದಕ್ಕಾಗಿ ನಮ್ಮ ಎಲ್ಲಾ ಹಾಲಿ, ಮಾಜಿ ಶಾಸಕರು, ಸಂಸದರು, ಸೋತ ಅಭ್ಯರ್ಥಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು.

ಜುಲೈ ತಿಂಗಳು ಬಹಳ ಮಹತ್ವದ ತಿಂಗಳು. ನೀವು ಬಿಎಲ್‌ಒ ಗಳ ಜೊತೆ ಸಮನ್ವಯ ಮಾಡಿಕೊಂಡು ಅವರ ಜೊತೆ ಮನೆ ಮನೆಗೆ ತೆರಳಬೇಕು. ಜೊತೆಗೆ ಕನಿಷ್ಠ ಪಕ್ಷ ಇಬ್ಬರು ಸ್ಥಳೀಯ ಮತದಾರರನ್ನು ಪ್ರತಿ ಬೂತ್‌ಗೆ ಆಯ್ಕೆ ಮಾಡಬೇಕು. ಯಾರಿಗೆಲ್ಲಾ ಶಾಸಕರಾಗುವ, ಸಂಸದರಾಗುವ ಆಸೆ ಇದೆ, ಅವರು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ದೇಶವನ್ನು ಉಳಿಸಲು ಈ ಪ್ರಯತ್ನ ಮಾಡಬೇಕು. ಬಿಜೆಪಿಯ, ಮೋದಿಯವರ ಕುತಂತ್ರವನ್ನು ಬಯಲು ಮಾಡಲು ಕೆಲಸ ಮಾಡಬೇಕು. ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ.

ಈ ಸಂಘ ಪರಿವಾರದವರು ಸ್ವಾತಂತ್ರ್ಯ ಪೂರ್ವದಲ್ಲಿ ಯಾರ ಸಂಪರ್ಕದಲ್ಲಿದ್ದರು ಗೊತ್ತಾ? ಹೆಡ್ಗೆವಾರ್, ಗೋಲ್ವಾಲ್ಕರ್ ಇವರೆಲ್ಲ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರ? ಸಾವರ್ಕರ್ ಅನ್ನು ವೈಭವೀಕರಿಸುತ್ತಾರೆ, ಅವರು ಕ್ಷಮಾಪಣೆ ಕೇಳಿ ಜೈಲಿಂದ ಹೊರಬಂದವರು. ಇವರ ಹಿಂಬಾಲಕರು ದೇಶ ಉಳಿಸ್ತಾರ? ನೀವು ಜಾಗೃತರಾಗದೆ ಹೋದರೆ ನಿಮ್ಮ ರಾಜಕೀಯ ಬದುಕಿನ ಮಾರಣಹೋಮ ನಿಶ್ಚಿತ. ನನ್ನ ರಾಜಕೀಯ ಮುಗಿಯುತ್ತಾ ಬಂದಿದೆ, ಆದರೆ ನೀವು ಇನ್ನೂ ರಾಜಕೀಯ ಮಾಡಬೇಕಾದವರು. ಹಾಗಾಗಿ ನೀವು ಮುಂದಿನ ಒಂದು ತಿಂಗಳು ಎಚ್ಚರಿಕೆ ವಹಿಸಲೇಬೇಕು.
ನಿಮಗೆ ಅವಕಾಶ ಇದೆ, ಈ ಅವಕಾಶದಿಂದ ವಂಚಿತರಾದರೆ ಅಪಾಯ ಕಟ್ಟಿಟ್ಟಬುತ್ತಿ. ಎನಮರೇಷನ್ ಫಾರ್ಮ್ ನಿಮಗೆ ಕೊಡುತ್ತಾರೆ, ಅದನ್ನು ಸರಿಯಾಗಿ ಭರ್ತಿ ಮಾಡಿ, ಸ್ವೀಕೃತಿ ದೃಢೀಕರಣ ಪಡೆಯಿರಿ. ಇದೇ ಬಹಳಾ ಮುಖ್ಯವಾದುದ್ದು. ಇದಕ್ಕಾಗಿ ಸುದರ್ಶನ್ ಅವರು ಇಡೀ ರಾಜ್ಯ ಸುತ್ತಿ ಜನಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ಸಂವಿಧಾನ, ದೇಶ ಉಳಿಸುವುದು ಕಾಂಗ್ರೆಸ್ ಮಾತ್ರ. ಮುಂದಿನ ಒಂದು ತಿಂಗಳು ಎಲ್ಲ ಕೆಲಸ ಬಿಟ್ಟು ಎಸ್‌ಐಆರ್ ಮೇಲೆ ನಿಗಾ ಇಡುವ ಕೆಲಸ ಮಾಡಬೇಕು ಎಂದು ತಮ್ಮಲ್ಲಿ ಕೈಮುಗಿದು ಪ್ರಾರ್ಥಿಸುತ್ತೇನೆ. ಒಬ್ಬನೇ ಒಬ್ಬ ಅರ್ಹ ಮತದಾರ ಪಟ್ಟಿಯಿಂದ ಬಿಟ್ಟುಹೋಗಬಾರದು. ಹಾಗೆ ನೀವು ಕೆಲಸ ಮಾಡಬೇಕು. ಎಂದು ತಿಳಿಸಿದರು

ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿ ಚುನಾವಣಾ ಆಯೋಗವು ಎಸ್ಐಆರ್ ಅಂದರೆ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯಕ್ರಮ ನಡೆಯಲಿದ್ದು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಆಯಾಯ ಕ್ಷೇತ್ರದ ಶಾಸಕರು ಹಾಗೂ ಮುಖಂಡರುಗಳು ನಮ್ಮ ಪಕ್ಷದ ಬೂತ್ ಮಠದ ಕಾರ್ಯಕರ್ತರು ಚುನಾವಣಾ ಆಯೋಗದವರು ಮತದಾರರ ಪಟ್ಟಿ ಪರಿಷ್ರಣೆಗೆ ನೇಮಕ ಮಾಡಿರುವ ಅಧಿಕಾರಗಳ ಜೊತೆ ತಾವು ಕೂಡ ಸೇರಿಕೊಂಡು ಮತದಾರರ ಪಟ್ಟಿಯಲ್ಲಿ ಅವರು ಯಾವುದೇ ಪಕ್ಷದವರು ಆಗಿರಲಿ ಅವರ ಹೆಸರು ಕೈಬಿಡದಂತೆ ನೋಡಿಕೊಳ್ಳುವ ಮೂಲಕ ಅವರು ಯಾವ ರೀತಿ ಚುನಾವಣಾ ಆಯೋಗದ ಎಸ್ಐಆರ್ ಫಾರಂ ಯಾವ ರೀತಿ ಭರ್ತಿ ಮಾಡಬೇಕು ಎಂಬುದನ್ನು ಅವರ ಜೊತೆಯಲ್ಲಿ ಇದ್ದುಕೊಂಡು ಅವರು ಭರ್ತಿ ಮಾಡಿದ ಮೇಲೆ ಸರಿಯಾಗಿದೆಯಾ ಇಲ್ವಾ ಎಂಬುದನ್ನು ತಿಳಿದುಕೊಳ್ಳಬೇಕು ಯಾವುದೇ ಕಾರಣಕ್ಕೂ ಮಸ್ದಾರರ ಪಟ್ಟಿಯಲ್ಲಿ ಮತದಾರರ ಹೆಸರು ಕೈಬಿಡದಂತೆ ನೋಡಿಕೊಳ್ಳಿ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಚುನಾವಣಾ ಆಯೋಗವು ಬಿಜೆಪಿ ಪರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋ ಮೂಲಕ ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಆಸೆಗಳನ್ನು ಗಾಳಿಗೆ ತೂರುವಂತಹ ಕೆಲಸವನ್ನು ಮಾಡುತ್ತಿವೆ ಆದರಿಂದ ನಾವು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಎಚ್ಚರವಹಿಸಿ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಸ್ದರಲ್ಲಿ ಜಾಗೃತಿ ಮೂಡಿಸುವ ಮೂಲಕ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಕೈಬಿಡದಂತೆ ಎಚ್ಚರವಹಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಿ ಆರ್ ಸುದರ್ಶನ್ ಸೇರಿದಂತೆ ಇನ್ನೂ ಅನೇಕ ಮುಖಂಡರುಗಳು ಈ ವಿಚಾರವಾಗಿ ಮಾತನಾಡಿ ವಿವರವಾಗಿ ತಿಳಿಸಿ ಪಕ್ಷದ ಕಾರ್ಯಕರ್ತರು ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು

ಈ ಜಾಗೃತಿ ಸಮಾವೇಶದಲ್ಲಿ ಮಾಜಿ ಸಿ ಎಂ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಾದ ಬಿಕೆ ಹರಿಪಸಾದ್ ವಿ ಆರ್ ಸುದರ್ಶನ್ ನಗರಾಭಿವೃದ್ಧಿ ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ ಶಾಸಕರಾದ ಕೆ ವೆಂಕಟೇಶ್ ಡಾಕ್ಟರ್ ಎಚ್ ಸಿ ಮಹದೇವಪ್ಪ ಕೆ ಹರೀಶ್ ಗೌಡ ತನ್ವೀರ್ ಸೆಟ್ ಡಿ ರವಿಶಂಕರ್ ಗಣೇಶ್ ಪ್ರಸಾದ್ ದರ್ಶನ್ ಧ್ರುವನಾರಾಯಣ್ ಶಿವಲಿಂಗೇಗೌಡ ಸಂಸದ ಸುನಿಲ್ ಬೋಸ್ ಚಂದ್ರಶೇಖರ್ ಡಾ. ಡಿ ತಿಮಯ್ಯ ಗ್ಯಾರಂಟಿ ಯೋಜನೆಗಳ ಸಮಿತಿಯ ರಾಜ್ಯಾಧ್ಯಕ್ಷ ಎಚ್ ಎಮ್ ರೇವಣ್ಣ ಉಪಾಧ್ಯಕ್ಷೆ ಡಾ ಪುಷ್ಪ ಅಮರನಾಥ್ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ ಬಿಜೆ ವಿಜಯಕುಮಾರ್ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಆರ್ ಮೂರ್ತಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಬಿಎಮ್ ರಾಮು ಎಸ್ಸಿ ಬಸವರಾಜು ಕೆ ಮರಿಗೌಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಸಿ ಉಂಡಿ ಶಿವಪ್ರಸಾದ್ ಸಕಳ್ಳಿ ಬಸವರಾಜು ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಡ್ಡಿಪಾಳ್ಯ ಬಸವರಾಜು ಮಂಜುಳಾ ಮಂಜುನಾಥ್ ಲತಾ ಸಿದ್ದಶೆಟ್ಟಿ ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಬಗರ್ ಹುಕುಂ ಸಮಿತಿಯ ಸದಸ್ಯರಾದ ರಾಜಣ್ಣ ಮೆಲ್ಲಹಳ್ಳಿ ಪ್ರಸಾದ್ ರಾಕೇಶ್ ಪಾಪಣ್ಣ ಹಾಗೂ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಇದ್ದರು.

ಈ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದು ಇದರ ಜೊತೆಯಲ್ಲಿ ಮಾಜಿ ಸಿ ಎಂ ಸಿದ್ದರಾಮಯ್ಯನವರು ತಮ್ಮ ನಿವಾಸದಲ್ಲಿ ಸಂಸದರು, ಶಾಸಕರು, ಸಚಿವರುಗಳಿಗೆ ಭರ್ಜರಿ ಬಾಡೂಟದ ವ್ಯವಸ್ಥೆಯನ್ನು ಮಾಡುವ ಮೂಲಕ ಅವರ ಜೊತೆಯಲ್ಲಿ ಸಿದ್ದರಾಮಯ್ಯನವರು ಬಾಡೂಟ ಸವಿದಿರುವುದು ವಿಶೇಷವಾಗಿತ್ತು

WhatsApp

Join Now

Telegram

Join Now

Instagram

Join Now