ವಿಜಯ ದರ್ಪಣ ನ್ಯೂಸ್…
ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ

ತಾಂಡವಪುರ ಜುಲೈ 1 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು
ಶ್ರೀ ಗುರುಮಲ್ಲೇಶ್ವರರ ರಥೋತ್ಸವ ಹಾಗೂ ತೆಪ್ಪೋತ್ಸವ ಹಿನ್ನೆಲೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾರಂಭ ದಲ್ಲಿ ಶ್ರೀಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ವಂದಿಸಿ ಮಾತಾಡುತ್ತಾ ದೇವನೂರು ಮಠಕ್ಕೆ ಕಳೆದ ಬಾರಿ ಮುಖ್ಯಮಂತ್ರಿಗಳಾಗಿದ್ದವು ಸಹ ಬಂದಿದ್ದೆ ಈಗಲೂ ಸಹ ಇದ್ದೇನೆ ದೇವನೂರು ಮಠವು ಈ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಹೆಸರುವಾಸಿ ಆಗಿರುವಂತಹ ಮಠ ದೇವನೂರು ಮಠ ಇತಿಹಾಸ ಪ್ರಸಿದ್ಧ ಮಠವಾಗಿದ್ದು ಈ ಗ್ರಾಮವು ಹಲವಾರು ಚಿಂತಕರು ಸಾಹಿತಿಗಳನ್ನು ಸಹ ರಾಜ್ಯಕ್ಕೆ ಕೊಡುಗೆಯಾಗಿ ನೀಡಿದೆ ಎಂದು ದೇವನೂರು ಮಠದ ಸೇವೆಯನ್ನು ಸ್ಮರಿಸಿಕೊಂಡರು
ದೇವನೂರು ಮಠದ ಪೀಠಾಧಿಪತಿಗಳಾದ ಶ್ರೀ ಮಹಾಂತ ಸ್ವಾಮೀಜಿ, ಸೋಮಹಳ್ಳಿ ಮಠದ ಸಿದ್ದಮಲ್ಲ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸುತ್ತೂರು ಮಠದಿಶರಾದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ. ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠವು ತನ್ನದೇ ಆದ ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಪವಿತ್ರ ಕ್ಷೇತ್ರವಾಗಿದೆ.

ಇಂತಹ ಪುಣ್ಯಭೂಮಿ ಇರುವ ನಂಜನಗೂಡು ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಭಾಗ್ಯ. ಶ್ರೀ ಮಠವು ಬಸವಣ್ಣನವರ ಆಶಯದಂತೆ ಕಾಯಕ, ದಾಸೋಹ ಮತ್ತು ಸಮಾನತೆ ಎಂಬ ಸಂದೇಶಗಳನ್ನು ಸಮಾಜಕ್ಕೆ ಸಾರುತ್ತಾ, ರಾಜ್ಯದಾದ್ಯಂತ ಲಕ್ಷಾಂತರ ಭಕ್ತರ ನಂಬಿಕೆಯ ಕೇಂದ್ರವಾಗಿ ಬೆಳೆದಿದೆ. ಅನ್ನದಾಸೋಹದ ಜೊತೆಗೆ ಶಿಕ್ಷಣದ ದಾಸೋಹವನ್ನು ನೀಡುವ ಮೂಲಕ ಸಮ ಸಮಾಜ ನಿರ್ಮಾಣದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದೆ. ಎಂದು ಶಾಸಕ ದರ್ಶನ್ ದ್ರುವ ನಾರಾಯಣ್ ಮಠದ ಕೊಡುಗೆಯನ್ನು ಸ್ಮರಿಸಿಕೊಂಡರು
ಈ ಭಾಗದ ರೈತರ ಹಾಗೂ ಜನರ ಹಿತದೃಷ್ಟಿಯಿಂದ ದೇವನೂರು ಏತ ನೀರಾವರಿ ಯೋಜನೆಗೆ ರೂಪುರೇಷೆ ನೀಡಿ, ಯೋಜನೆ ನೀಡುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಯೋಜನೆಯು ಈ ಭಾಗದ ಕೃಷಿ ಹಾಗೂ ಜನಜೀವನಕ್ಕೆ ಹೊಸ ಆಶಾಕಿರಣವಾಗಲಿದೆ. ಎಂದು ದರ್ಶನ್ ರವರು ತಿಳಿಸಿದರು
ಈ ವೇಳೆ ಮಾಜಿ ಸಚಿವ ಎಚ್. ಸಿ ಮಹದೇವಪ್ಪ ಮಾತನಾಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ನಾನು ಸಚಿವನಾಗಿದ್ದಾಗ ಸಿದ್ದರಾಮಯ್ಯನವರು ಮಠಗಳಿಗೆ ಹಲವಾರು ಅನುದಾನವನ್ನು ನೀಡಿ ಮಠಗಳ ಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡಿದ್ದಾರೆ ಎಂದು ಹೇಳಿದರು
ಸಮಾರಂಭದಲ್ಲಿ, ಶಾಸಕ ಗಣೇಶ್ ಪ್ರಸಾದ್ , ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ಕಾಡ ಅಧ್ಯಕ್ಷ ಮರಿಸ್ವಾಮಿ , ಮೃಗಲಾಯ ಪ್ರಾಧಿಕಾರ ಅಧ್ಯಕ್ಷ ರಂಗಸ್ವಾಮಿ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಸಿ ಬಸವರಾಜ್ ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನೆ ಸಮಿತಿಯ ಮಾಜಿ ಅಧ್ಯಕ್ಷ ಹೆಜ್ಜೆಗೆ ಆರ್ ಇಂದನ್ ಬಾಬು ಮಹದೇವಪ್ಪ ರವರು, ಶಿವಪ್ಪ ದೇವರು ರವರು ವಿವಿಧ ಮಠಗಳ ಹರಗುರು ಚರಮೂರ್ತಿಗಳು ಸೇರಿದಂತೆ ಹಲವು ಮುಖಂಡರು ಗ್ರಾಮಸ್ಥರು ಹಾಜರಿದ್ದರು.









