--Ads--

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ 

On: July 2, 2026 11:49 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ : ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ 

ತಾಂಡವಪುರ ಜುಲೈ 1 ಜುಲೈ.17ರಿಂದ ಚಾಮುಂಡೇಶ್ವರಿ ಬೆಟ್ಟದಲ್ಲಿ ಆಷಾಡ ಶುಕ್ರವಾರ ಸಂಭ್ರಮ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಭಕ್ತರ ದರ್ಶನಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ಸಚಿವ ಡಾ ಎಸ್ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರು ಜಿಲ್ಲೆಯಲ್ಲಿರುವ ಇತಿಹಾಸ ಪ್ರಶಸ್ತಿ ಉಳ್ಳ ಆಶಾಡ ಮಾಸ ಶುಕ್ರವಾರದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಜುಲೈ 17ರಂದು ಮೊದಲ ಆಷಾಡ ಶುಕ್ರವಾರ, ಜುಲೈ 24ರಂದು 2ನೇ ಆಷಾಡ ಶುಕ್ರವಾರ, ಜುಲೈ 31ರಂದು 3ನೇ ಆಷಾಡ ಶುಕ್ರವಾರ, ಆಗಸ್ಟ್ 4ರಂದು ಅಮ್ಮನವರ ಜನ್ಮೋತ್ಸವ, ಆಗಸ್ಟ್ 7 ರಂದು 4ನೇ ಆಷಾಡ ಶುಕ್ರವಾರಕ್ಕೆ ಚಾಮುಂಡಿ ಬೆಟ್ಟ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ. ಬರುವಂಥ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗುತ್ತೆ ಮುಂಜಾಗ್ತ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸುದ್ದಿ ಮಾಧ್ಯಮದವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರ ಅಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು ತಿಳಿಸಿದರು

ಈ ಸಂಬಂಧ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ ಶುಕ್ರವಾರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿದ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಸ್.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಆಷಾಡ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಷಾಡ ಮಾಸದಲ್ಲಿ ದರ್ಶನಕ್ಕೆ ಬರುವ ಭಕ್ತರ ಸುರಕ್ಷತೆ ಹೆಚ್ಚಿನ ಆಧ್ಯತೆ ನೀಡಬೇಕು. ಯಾವುದೇ ಕಾಲ್ತುಳಿತ ಆಗದಂತೆ ಎಚ್ಚರಿಕೆ ವಹಿಸಬೇಕು. ಪೋಲಿಸ್ ಇಲಾಖೆಯ ವತಿಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಆಷಾಡ ಶುಕ್ರವಾರ ದಿನಗಳಂದು ಬೆಳಗ್ಗೆ 5.30 ರಿಂದ ದೇವಾಲಯ ಮುಚ್ಚುವವರೆಗೆ ದರ್ಶನದ ವ್ಯವಸ್ಥೆ ಕಲ್ಪಿಸಬೇಕು. ಅಮ್ಮನವರ ಜನ್ಮೋತ್ಸವ ದಿವಸ ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಮಾಡಲಾಗುವುದು. ವಿಐಪಿ ದರ್ಶನಕ್ಕೆ ಪ್ರತ್ಯೇಕವಾಗಿ ಬೆಳಗ್ಗೆ 5.30 ರಿಂದ ಬೆಳಗ್ಗೆ 9.30ರವರಿಗೆ ಸಮಯವನ್ನು ನಿಗದಿ ಪಡಿಸಲಾಗುವುದು ಎಂದರು.

ಅಲ್ಲದೆ ಭಕ್ತಾದಿಗಳು ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವನ್ನು ಸಹ ಮಾಡುತ್ತಾರೆ ಅದನ್ನು ಬೆಟ್ಟದ ಮೇಲೆ ಹೊರತುಪಡಿಸಿ ಕೆಳಗಡೆ ಪ್ರಸಾದ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು

ಚಾಮುಂಡಿ ಬೆಟ್ಟದಲ್ಲಿ ಪಾಸ್ಟಿಕ್ ಬ್ಯಾನ್ ಮಾಡಬೇಕು. ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಬೆಟ್ಟದಲ್ಲಿ ವಾಸಿಸುತ್ತಿರುವ ಸ್ಥಳೀಯರಿಗೆ ತೆಂದರೆ ಆಗದಂತೆ ಅವರ ಆಧಾರ್ ಕಾರ್ಡ್ ನೋಡಿ ಪ್ರವೇಶ ನೀಡಬೇಕು. ಬೆಟ್ಟದಲ್ಲಿ ಇರುವ ನಮ್ಮ ಕ್ಲಿನಿಕ್ ನಲ್ಲಿ ದಿನದ 24 ಗಂಟೆ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿಗಳು ಇರಬೇಕು. ದೇವಸ್ಥಾನದ ಬಳಿಯಲ್ಲಿ 3 ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ಚೆಸ್ಕಾ ವತಿಯಿಂದ ಪಾರ್ಕಿಂಗ್ ಸ್ಥಳ ಹಾಗೂ ಬೆಟ್ಟಕ್ಕೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ನಗರಪಾಲಿಕೆಯ ವತಿಯಿಂದ ಅಗತ್ಯ ಸಂಖ್ಯೆಯ ಪೌರ ಕಾರ್ಮಿಕರನ್ನು ನಿಯೋಜನೆ ಮಾಡಬೇಕು. ಸಂಚಾರಿ ಶೌಚಾಲಯಗಳನ್ನು ಪಾರ್ಕಿಂಗ್ ಮತ್ತು ಬೆಟ್ಟದ ಮೇಲೆ ಮಾಡಬೇಕು. ಭಕ್ತಾದಿಗಳ ಅನುಕೂಲಕ್ಕಾಗಿ 6 ಬ್ಯಾಟರಿ ವಾಹನಗಳ ವ್ಯವಸ್ಥೆ ಮಾಡಬೇಕು. ಅಗತ್ಯ ಸಂಖ್ಯೆಯ ಸಿ ಸಿ ಟಿ ವಿ ಗಳನ್ನು ಅಳವಡಿಸಬೇಕು. ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ ಲಲಿತ ಮಹಲ್ ಮೈದಾನದಿಂದ ಶುಕ್ರವಾರ ಶನಿವಾರ ಮತ್ತು ಭಾನುವಾರ ದಿನಗಳಂದು ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಪಾದರಕ್ಷೆಗಳನ್ನು ಬಿಡಲು ಲಲಿತ ಮಹಲ್ ಬಸ್ ಪಾರ್ಕಿಂಗ್ ಆವರಣದಲ್ಲಿ ವ್ಯವಸ್ಥೆ ಮಾಡಲಾಗುವುದು. ಸಿಟಿ ಬಸ್ ನಿಲ್ದಾಣದಿಂದ ಬರುವ ಭಕ್ತಾದಿಗಳಿಗೆ ಪಾದರಕ್ಷೆಗಳನ್ನು ಬಿಡಲು ಸಿಟಿ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾದಿಕಾರದ ಕಾರ್ಯದರ್ಶಿ ರೂಪ ಕಾಂಗ್ರೆಸ್ ಮುಖಂಡ ಕಿರಾಳು ಸಂತೋಷ್ ಸೇರಿದಂತೆ ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ನೀಡಲಾದ ರೈನ್ ಕೋಟನ್ನು ಸಚಿವ ಡಾ ಎಸ್ ಯತೀಂದ್ರ ಸಿದ್ರಾಮಯ್ಯ ವಿತರಣೆ 

ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಬಸವ ಮಹಾದ್ವಾರ ಮತ್ತು ಕಲ್ಯಾಣಿ ಲೋಕಾರ್ಪಣೆ

ಹಿಂದಿನಂತೆ ಚುನಾವಣಾ ಆಯೋಗ ಈಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ : ಮಾಜಿ ಸಿ ಎಂ ಸಿದ್ದರಾಮಯ್ಯ ಆಕ್ರೋಶ

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ತವರು ಜಿಲ್ಲೆ ಮೈಸೂರಿಗೆ ಆಗಮಿಸಿದ ಮಾಜಿ ಸಿ ಎಂ ಸಿದ್ದರಾಮಯ್ಯನವರಿಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ