--Ads--

ದಲಿತರ ಧೋರಣೆ ,ಭ್ರಷ್ಟಾಚಾರ ಹಾಗೂ ಅಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ  ಜು-6ರಂದು ಧರಣಿ

On: July 5, 2026 12:16 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ದಲಿತರ ಧೋರಣೆ ,ಭ್ರಷ್ಟಾಚಾರ ಹಾಗೂ ಅಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ  ಜು-6ರಂದು ಧರಣಿ

ಶಿಡ್ಲಘಟ್ಟ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಸಂವಿಧಾನಬದ್ಧ ಹಕ್ಕುಗಳು ಹಾಗೂ ಮೀಸಲಾತಿ ಸೌಲಭ್ಯಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ತಾಲ್ಲೂಕು ಆಡಳಿತದ ದಲಿತ ವಿರೋಧಿ ಧೋರಣೆ, ಭ್ರಷ್ಟಾಚಾರ ಹಾಗೂ ಅಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ತಾಲೂಕು ಘಟಕದಿಂದ ಜು-6ರಂದು ತಾಲ್ಲೂಕು ಕಚೇರಿ ಎದುರು 1 ದಿನದ ಧರಣಿ ನಡೆಸಲಾಗುವುದು ಎಂದು ಹೇಳಿದರು.
ನಿವೇಶನ, ಮನೆ, ಕೃಷಿ ಭೂಮಿ ಮತ್ತು ಸ್ಮಶಾನದಂತಹ ಸೌಲಭ್ಯಗಳಿಗಾಗಿ ದಲಿತರು ಇನ್ನೂ ಹೋರಾಟ ನಡೆಸಬೇಕಾದ ಪರಿಸ್ಥಿತಿ ಸೇರಿ ಇದೆ ,ಫಾರ್ಮ್ ಸಂಖ್ಯೆ 50, 53 ಹಾಗೂ 57ರಡಿ ಸಲ್ಲಿಕೆಯಾಗಿರುವ ಸಾವಿರಾರು ಬಗರ್ ಹುಕುಂ ಅರ್ಜಿಗಳು ವರ್ಷಗಳಿಂದ ಬಾಕಿ ಉಳಿದಿದ್ದು, ದರಖಾಸ್ತು ಸಮಿತಿ ರಚನೆಯಾಗದ ಕಾರಣ ಭೂ ಮಂಜೂರಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಡ್ಲಘಟ್ಟ ವಿದಾಮಸಬಾ ಕ್ಷೇತ್ರದಲ್ಲಿ ಶೇ.36ರಷ್ಟು ಎಸ್.ಸಿಎಸ್.ಟಿ ಜನಸಂಖ್ಯೆ ಇದ್ದರೂ ರಾಜಕೀಯ ಪಕ್ಷಗಳು ಅವರನ್ನು ಮತ ಬ್ಯಾಂಕ್‌ನಂತೆ ಬಳಸಿಕೊಳ್ಳುತ್ತಿವೆ ಎಸ್.ಸಿ.ಪಿ, ಟಿ.ಎಸ್.ಪಿ.ಯೋಜನೆಗಳ ಅನುದಾನವನ್ನು ಮೂಲ ಉದ್ದೇಶಗಳಿಗೆ ಬಳಸದೆ ಬೇರೆ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿರುವುದರಿಂದ ದಲಿತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ದೂರಿದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯ ದೊರೆಯುತ್ತಿಲ್ಲ ದೂರುದಾರರ ಮೇಲೆಯೇ ದಾಖಲಿಸುವ ಪ್ರತಿದೂರು ಪ್ರವೃತ್ತಿ ಹೆಚ್ಚಾಗಿದೆ ,ತಹಸೀಲ್ದಾ‌ರ್ ಸಮಸ್ಯೆ ಪರಿಹಾರದ ಭರವಸೆ ನೀಡಿದ್ದರೂ 1 ವರ್ಷದಿಂದ ದಲಿತರ ಸಮಸ್ಯೆಗಳ ಕುರಿತು ಯಾವುದೇ ಸಭೆ ನಡೆಸಿಲ್ಲ ಎಂದು ಆರೋಪಿಸಿದರು.
ತೋಕಲಹಳ್ಳಿಯ ಸರ್ವೇ ನಂ.1ರಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ವಿತರಿಸುವುದು, ಬಾಕಿ ಇರುವ ಬಗರ್ ಹುಕುಂ ಅರ್ಜಿಗಳನ್ನು ಇತ್ಯರ್ಥಪಡಿಸುವುದು.
ತಾಲೂಕು ದರಕಾಸ್ತು ಸಮಿತಿ ರಚಿಸುವುದು, ದಲಿತರಿಗೆ ನಿವೇಶನ, ಮನೆ ಹಾಗೂ ಸ್ಮಶಾನ ಭೂಮಿ ಒದಗಿಸುವುದು, ಗ್ರಾಮ ಪಂಚಾಯಿತಿಗಳಲ್ಲಿ ಶೇ.22.5 ಮೀಸಲಾತಿ ತನಿಖೆ ಅನುದಾನದ ದುರುಪಯೋಗ ಕುರಿತು ನಡೆಸುವುದು. ಎಸ್.ಸಿ.ಪಿಟಿ.ಎಸ್.ಪಿ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ಮಾತ್ರ ಬಳಸುವುದು ವಿವಿಧ ಬೇಡಿಕೆಗಳನ್ನು ಮುಂದಿಡಲಾಗುವುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ದಡಂಘಟ್ಟ ತಿರುಮಲೇಶ್‌, ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ, ಸಂಘಟನಾ ಸಂಚಾಲಕ ಯಣ್ಣಂಗೂರು ಸುಭ್ರಮಣಿ ಮತ್ತೀತರರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕಾಂಗ್ರೆಸ್ ಮುಖಂಡ ಆಂಜಿನಪ್ಪ (ಪುಟ್ಟು ಅವರ) ಹುಟ್ಟು ಹಬ್ಬ ಆಚರಣೆಯ ಪ್ರಯುಕ್ತ  ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು ವಿಚರಣೆ 

ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎರಡನೇ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ 

“ಕಲಾ ನ್ಯಾಚುರಲ್ ಫುಡ್ ಜ್ಯೂಸ್ ಫ್ಯಾಕ್ಟರಿ”ಗೆ ಗುದ್ದಲಿ ಪೂಜೆ : ಕೊತ್ತನೂರು ಪಂಚಾಕ್ಷರಿರೆಡ್ಡಿ

ಸೆಪ್ಟೆಂಬ‌ರ್-4ರಂದು ತಾಲ್ಲೂಕಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅದ್ಧೂರಿ ಕಾರ್ಯಕ್ರಮ

ನಮ್ಮ ಊರು, ನಮ್ಮ ಸುತ್ತ ಮುತ್ತಲಿನ ಇತಿಹಾಸ, ನಾಡಿನ ಇತಿಹಾಸ ಪರಂಪರೆಯನ್ನು ತಿಳಿದುಕೊಳ್ಳುವ ಕೆಲಸ ಆಗಬೇಕಿದೆ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ

ಕಂದಾಯ ಗ್ರಾಮದ ಅಭಿಯಾನದ ಪ್ರಯುಕ್ತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜಿ.ಪ್ರಭು.