--Ads--

ಶಾಸಕ ಬಿ.ಎನ್.ರವಿಕುಮಾ‌ರ್ ಅವರ ವೇತನದಿಂದ 9,600 ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಬುಕ್, ಲೇಖನ ಸಾಮಗ್ರಿ ವಿತರಣೆ

On: July 4, 2026 4:43 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್….

ಶಾಸಕ ಬಿ.ಎನ್.ರವಿಕುಮಾ‌ರ್ ಅವರ ವೇತನದಿಂದ 9,600 ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಬುಕ್, ಲೇಖನ ಸಾಮಗ್ರಿ ವಿತರಣೆ

ಶಿಡ್ಲಘಟ್ಟ : ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಸದಾ ಸಿದ್ಧನಿದ್ದೇನೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ
ಈ ಮಹತ್ಕಾರ್ಯವನ್ನು ಮುಂದುವರಿಸುತ್ತೇನೆ ಎಂದು
ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಸಾದಲಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶಾಸಕರ ವೇತನದ ಹಣವನ್ನು ಬಳಸಿ ಸರ್ಕಾರಿ ಪ್ರಾಥಮಿಕ,ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳ ಒಟ್ಟು 9,600 ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ನಾನು ಹೆಚ್ಚು ಓದಿಲ್ಲ ಆದರೆ ಯಾವೊಬ್ಬ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬುದು ನನ್ನ ದ್ಯೈಯೋದ್ದೇಶ ಸರ್ಕಾರಿ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ ಮಾತನಾಡಿ, ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಶಿಕ್ಷಣ ಇಲಾಖೆ ಎಲ್ಲ ರೀತಿಯ ಪ್ರಯತ್ನಗಳನ್ನು ಕೈಗೊಳ್ಳಲಿದೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವ ಶಾಸಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪ್ರಸನ್ನ ಕುಮಾರ್, ಸಾದಲಿ ಪಿಯು ಕಾಲೇಜಿನ ಪ್ರಾಂಶುಪಾಲ ಶಿವಮೂರ್ತಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀನಿವಾಸ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನರಸಪ್ಪ, ಇಲಾಖೆ ಅಧಿಕಾರಿಗಳಾದ ಇಸಿಒ ಮಂಜುನಾಥ್, ವೆಂಕಟರೆಡ್ಡಿ, ಬಿ.ಆರ್‌.ಪಿ ಮಂಜುನಾಥ್, ಸಿ.ಆರ್‌.ಪಿ ಸುರೇಶ್ ಬಾಬು ಮುಖಂಡರಾದ ಶಿವಾರೆಡ್ಡಿ, ಕೆ.ಎನ್.ಸುಬ್ಬಾರೆಡ್ಡಿ, ಮೇಲೂರು ಮಂಜುನಾಥ್, ತ್ಯಾಗರಾಜು ಅಶ್ವತಪ್ಪ,ನರಸಿಂಹರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವಥ್ ರೆಡ್ಡಿ, ಕೃಷ್ಣಾರೆಡ್ಡಿ, ಮಾಜಿ ಕೆಇಬಿ ಇಂಜಿನಿಯರ್ ಅಶ್ವಥ್ ನಾರಾಯಣ, ಎಸ್.ವೇಣು ,ಗಣ್ಯರು ಹಾಗು ನಾಗರಿಕರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ದಲಿತರ ಧೋರಣೆ ,ಭ್ರಷ್ಟಾಚಾರ ಹಾಗೂ ಅಡಳಿತ ವೈಫಲ್ಯಗಳನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ  ಜು-6ರಂದು ಧರಣಿ

ಚಿಕ್ಕತೇಕಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಶಂಕೆಯಿಂದ ಸುಮಾರು 20 ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥ: ಆರೋಗ್ಯ ಅಧಿಕಾರಿಗಳ ಭೇಟಿ 

ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ

ಪ್ರತಿಯೊಬ್ಬರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾಗವಹಿಸಿ :ಆರ್ ಎಂ ಉಮೇಶ್ 

ವೀರಾಪುರ ರೈಲ್ವೆ ಅಂಡರ್‌ಪಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಸೂಚನೆ : ಶಾಸಕ ಬಿ.ಎನ್.ರವಿಕುಮಾ‌ರ್

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಅಭಿಯಾನಕ್ಕೆ ತಹಶಿಲ್ದಾರ್ ಗಗನಸಿಂಧು ಚಾಲನೆ