ವಿಜಯ ದರ್ಪಣ ನ್ಯೂಸ್….
ಅಲ್ಲಯ್ಯನಪುರ ಗ್ರಾಮದಿಂದ ಕಾಟೂರು ಗ್ರಾಮದವರೆಗೆ ಮೂರುವರೆ ಕೋಟಿ ರೂವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ತಾಂಡವಪುರ ಜುಲೈ 4- ಅಲ್ಲಯ್ಯನಪುರ ಗ್ರಾಮದಿಂದ ಕಾಟೂರು ಗ್ರಾಮದವರೆಗೆ ಸುಮಾರು ಮೂರುವರೆ ಕೋಟಿ ರೂವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ನೆರವೇರಿಸಿದರು
ಬಳಿಕ ಸಾರ್ವಜನಿಕರಿಂದ ಸಮಸ್ಯೆಗಳು ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಶಾಸಕರು ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕಿನ ಕಾಟೂರು ಗ್ರಾಮದಿಂದ ಅಲ್ಲಯ್ಯನಪುರ ಗ್ರಾಮದವರಗೆ 3.50 ಕೋಟಿ ರೂ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಬದಕು ಕಟ್ಟಿಕೊಳ್ಳಲು ನೆರವಾಗಿದೆ.ವೈಯಕ್ತಿಕ ಅಭಿವೃದ್ಧಿ ಜೊತೆಗೆ ರಸ್ತೆ ಚರಂಡಿ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ.ಗ್ರಾಮೀಣ ಭಾಗದ ರಸ್ತೆ.ಚರಂಡಿ ಹೆಚ್ಚು ಒತ್ತು ನೀಡಲಾಗಿದೆ.ಸಿ ಎಂ ಸಿದ್ದರಾಮಯ್ಯ ಅವರು ನಮ್ಮ ಕ್ಷೇತ್ರಕ್ಕೆ ವಿಶೇಷ ಅನುದಾನದಡಿ 50 ಕೋಟಿ ಅನುದಾನ ನೀಡಿದರು.
ಅದರಲ್ಲಿ ಲೋಕೋಪಯೋಗಿ ಇಲಾಖೆಗೆ 20 ಕೋಟಿ ಅನುದಾನ ನೀಡಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ನೀಡಲಾಗಿದೆ.ಕ್ಷೇತ್ರದ ಜನರ ಮೂಲಸೌಕರ್ಯ ಕಲ್ಪಿಸುವುದೇ ನನ್ನ ಆದ್ಯ ಕರ್ತವ್ಯ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.
50 ಕೋಟಿ ಅನುದಾನದಲ್ಲಿ ಪ್ರತಿ ಗ್ರಾಮಗಳಿಗೆ ಸಮರ್ಪಕವಾಗಿ ಅನುದಾನ ನೀಡಲಾಗಿದೆ.ನಾನು ಶಾಸಕನಾದ ನಂತರ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಜನರ ಕಷ್ಟ ಸುಖಗಳಿಗೆ ಭಾಗಿಯಾಗಿದ್ದೆನೆ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ.ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೆನೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಹುಲ್ಲಹಳ್ಳಿ ಬ್ಲಾಕ್ ಅದ್ಯಕ್ಷ ಶ್ರೀಕಂಠನಾಯಕ, ಮುಖಂಡರುಗಳಾದ ಜಯರಾಂ, ಸಂಗರಾಜು, ಹರದನಹಳ್ಳಿ ಸೋಮೇಶ್,ಮಹೇಶ್, ಇಂಜಿನಿಯರ್ ಬಸವರಾಜ್ ಸೇರಿದಂತೆ ಪ್ರಮುಖರು ಹಾಜರಿದ್ದರು











