ವಿಜಯ ದರ್ಪಣ ನ್ಯೂಸ್….
ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಎಸ್ಐಆರ್ ಖುದ್ದು ಪರಿಶೀಲನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.09:
ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಸಂಬಂಧ ಇಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 237 ಯರ್ತಿಗಾನಹಳ್ಳಿ ಹಾಗೂ ಮತಗಟ್ಟೆ ಸಂಖ್ಯೆ 179 ದೇವನಹಳ್ಳಿ ಟೌನ್ ಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು.
ಬಳಿಕ ಜಿಲ್ಲಾಡಳಿತ ಭವನದಲ್ಲಿ ಜಿಲ್ಲೆಯ ಎಲ್ಲಾ ಮತದಾರರ ನೋಂದಣಾಧಿಕಾರಿ ಗಳೊಂದಿಗೆ ಸಭೆ ನಡೆಸಿ ಪರಿಷ್ಕರಣೆ ವೇಳೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಮತದಾರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಸಲಹೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲೆಯ ತಾಲ್ಲೂಕು ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಉಪಸ್ಥಿತರಿದ್ದರು.









