--Ads--

ಮತದಾರರ ಜಾಗೃತಿಗೆ ಬೈಕ್ ಮೆರವಣಿ

On: July 11, 2026 3:27 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮತದಾರರ ಜಾಗೃತಿಗೆ ಬೈಕ್ ರ‌್ಯಾಲಿ

ಶಿಡ್ಲಘಟ್ಟ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‌ಐಆರ್ ಪ್ರಕ್ರಿಯೆಯು ಎಲ್ಲ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗೊಳಿಸುವುದು ಆಗಿದೆ ಈ ವಿಶೇಷ ಸಮಗ್ರ ಪರಿಷ್ಕರಣೆಯ ಅವಧಿಯಲ್ಲಿ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವ ಮೂಲಕ ಬಿಎಲ್‌ಒ ಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಆಡಳಿತಾಧಿಕಾರಿ ಎಸ್.ಎಸ್.ಆಬಿದ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಕೈಗೊಳ್ಳಲು ಅಧಿಸೂಚನೆ ಹೊರಡಿಸಿ ವೇಳಾಪಟ್ಟಿ ಪ್ರಕಟಿಸಿದ್ದು ಈ ಸಂಬಂಧ ಸ್ವೀಪ್ ಜಾಗೃತಿ ಅಭಿಯಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದು, ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ತಾಲ್ಲೂಕು ಪಂಚಾಯತಿ ಇಒ ಹೇಮಾವತಿ ಮಾತನಾಡಿ ,
ನಿಖರ ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಭದ್ರ ಅಡಿಪಾಯ, ಪ್ರತಿಯೊಬ್ಬ ಅರ್ಹ ನಾಗರಿಕರು ಬಿಎಲ್ ಒ ಗಳಿಗೆ ಅಗತ್ಯ ಮಾಹಿತಿ ನೀಡಿ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಹಕರಿಸಬೇಕು ,ತಾಲ್ಲೂಕಿನಾದ್ಯಂತ ಎಸ್.ಐ.ಆರ್. ಜಾಗೃತಿ ಮೂಡಿಸಲಾಗುತಿದ್ದು ಶಾಲಾ ಕಾಲೇಜುಗಳು, ಗ್ರಾಮೀಣ ಪ್ರದೇಶದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದೇ ವೇಳೆ ನಗರದ ತಾಲ್ಲೂಕು ಆಡಳಿತ ಭವನದಿಂದ ಹೊರಟ ಬೈಕ್ ರ‌್ಯಾಲಿ ದಿಬ್ಬೂರಹಳ್ಳಿ ಜೋಡಿ ರಸ್ತೆ ಮೂಲಕ ಕೋಟೆ ಸರ್ಕಲ್ ಗೆ ತೆರಳಿ ಅಲ್ಲಿಂದ ಮಯೂರ ಸರ್ಕಲ್, ಚಿಂತಾಮಣಿ-ಚಿಕ್ಕಬಳ್ಳಾಪುರ ಜೋಡಿ ರಸ್ತೆಯಿಂದ ಸರ್ಕಲ್ ಮೂಲಕ ಬೈಪಾಸ್ ರಸ್ತೆಯಿಂದ ತಾಲ್ಲೂಕು ಆಡಳಿತ ಭವನದಲ್ಲಿ ಮುಕ್ತಾಯವಾಯಿತು.

ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ,
ಗ್ರಾಮಾಂತರ ಠಾಣೆಯ ಪಿಎಸ್ಐ ಸುನೀಲ್ ಕುಮಾರ್, ದಿಬ್ಬೂರಹಳ್ಳಿ ಪೋಲಿಸ್ ಠಾಣೆಯ ಪಿಎಸ್ಐ ನಾಗರಾಜ್, ವಿವಿಧ ಇಲಾಖೆಗಳ ತಾಲ್ಲೂಕು ಅಧಿಕಾರಿಯವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು, ತಾಲ್ಲೂಕು ಕಚೇರಿ ಸಿಬ್ಬಂದಿ, ನರೇಗಾ ಮತ್ತು ಎನ್.ಆರ್.ಎಲ್.ಎಂ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತಿತರರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now