ವಿಜಯ ದರ್ಪಣ ನ್ಯೂಸ್…..
1432 ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥ

ಶಿಡ್ಲಘಟ್ಟ : ನಗರದ ನ್ಯಾಯಾಲಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ “ರಾಷ್ಟ್ರೀಯ ಲೋಕ್ ಅದಾಲತ್” ನಲ್ಲಿ ಒಟ್ಟು 1432 ಪ್ರಕರಣಗಳು ಇತ್ಯರ್ಥಗೊಂಡು 81ಲಕ್ಷ 26 ಸಾವಿರ 630 ರೂ.ಗಳು ಪಾವತಿಸಲಾಗಿದೆ.
ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾವನಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ವಿವಿಧ ರೀತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು.
ಈ ವೇಳೆ ವಕೀಲರಾದ ಆಂಜನೇಯರೆಡ್ಡಿ, ಗಗನ್ ಕುಮಾರ್ ಮತ್ತು ಸುನೀತಾ , ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.











