ವಿಜಯ ದರ್ಪಣ ನ್ಯೂಸ್….
ಮುಳ್ಳೇಗುಡ್ಡದಲ್ಲಿರುವ ಶ್ರೀ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಪರಿಶೀಲನೆ

ತಾಂಡವಪುರ ಜುಲೈ 13 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮಹದೇವ ನಗರದ ಮುಳ್ಳೇಗುಡ್ಡದಲ್ಲಿರುವ ಶ್ರೀ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಪರಿಶೀಲನೆ ನಡೆಸಿದರು
ಶಾಲೆಯ ಪರಿಸ್ಥಿತಿಯನ್ನು ವೀಕ್ಷಿಸಿದ ಬಳಿಕ ಸಂಬಂಧಿತ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯಶಿಕ್ಷಕರು ಮತ್ತು ಸಿಬ್ಬಂದಿಯೊಂದಿಗೆ ಸಭೆ ನಡೆಸಿ, ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ತರಗತಿ ಕೊಠಡಿಗಳು ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಶಾಲೆ ಮತ್ತು ಹಾಸ್ಟೆಲ್ನಲ್ಲಿರುವ ಸಮಸ್ಯೆಗಳು ಹಾಗೂ ಅವರ ಅಗತ್ಯತೆಗಳ ಕುರಿತು ಮಾಹಿತಿ ಪಡೆದು ವಿದ್ಯಾರ್ಥಿಗಳಿಂದ ಬಂದ ಪ್ರತಿಯೊಂದು ಮನವಿಯನ್ನು ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ, ಸ್ವಚ್ಛ ಮತ್ತು ಅಗತ್ಯ ಮೂಲಸೌಲಭ್ಯಗಳಿರುವ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರದ ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಅಧಿಕಾರಿಗಳಿಗೆ ಖಡಕ್ ಸಚನೆ ನೀಡಿದರು











