--Ads--

ಸಾಮಾಜಿಕ ಸೇವೆಯ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ  ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು 

On: July 15, 2026 4:59 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…

ಸಾಮಾಜಿಕ ಸೇವೆಯ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ  ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು 

ತಾಂಡವಪುರ ಜುಲೈ15ಸಾಮಾಜಿಕ ಸೇವೆಯ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ ಕಾಂಗ್ರೆಸ್ ಮುಖಂಡ ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು ಇನ್ನೂ ಹೆಚ್ಚಿನ ರೀತಿಯಲ್ಲಿ ಜನಸೇವೆ ಮಾಡುವಂತಾಗಲು ರಾಜಕೀಯ ಸ್ಥಾನಮಾನ ದೊರಕಲಿ ಬಸವರಾಜುರವರು ನಾವು ನೋಡಿದ ಮಟ್ಟಿಗೆ ಕಳೆದ 15 20 ವರ್ಷಗಳಿಂದ ಜನಪರವಾದ ಸಮಾಜಮುಖಿ ಕೆಲಸಗಳನ್ನು ತಮ್ಮ ಹುಟ್ಟು ಹಬ್ಬದಂದು ಮಾಡುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ.

ಅವರಿಗೆ ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ರಾಜಕೀಯ ಸ್ಥಾನಮಾನಗಳು ತುರುಕು ಅಂತಾಗಲಿ ಎಂದು ತಾಯಿ ಆಶೀರ್ವಾದ ಮಾಡಲಿ ಎಂದು ನಾವು ಕೂಡ ದೇವಿಯಲ್ಲಿ ಪ್ರಾರ್ಥಿಸುತ್ತೇವೆ ಎಂದು ಶಾಸಕ ಕೆ ಹರೀಶ್ ಗೌಡ ಎಂಕೆ ಸೋಮಶೇಖರ್ ರವರು ಅವರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು

ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡ ಬಸವರಾಜು ಅವರು ತಮ್ಮ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು.

ಹುಟ್ಟುಹಬ್ಬದ ಅಂಗವಾಗಿ ಸುಮಾರು 75 ಆಟೋ ಚಾಲಕರಿಗೆ ಆಟೋ , ಮಹಿಳೆಯರಿಗೆ ಉಚಿತ ಸೀರೆ ವಿತರಣೆ, ಬಡ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಪುಸ್ತಕಗಳ ವಿತರಣೆ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸಮಾಜದ ವಿವಿಧ ವರ್ಗದ ಜನರಿಗೆ ನೆರವಾಗುವ ಮೂಲಕ ಬಸವರಾಜು ಅವರು ತಮ್ಮ ಜನಪರ ಕಾಳಜಿಯನ್ನು ಮತ್ತೊಮ್ಮೆ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಸವರಾಜು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಬಸವರಾಜು ಅವರು ಸಾಮಾಜಿಕ ಸೇವೆಗೆ ಸದಾ ಆದ್ಯತೆ ನೀಡುತ್ತಾ ಜನರೊಂದಿಗೆ ಬೆರೆತು ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಪ್ರಶಂಸಿಸಿದರು. ಕಾರ್ಯಕ್ರಮವು ಆತ್ಮೀಯ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಚಾಮುಂಡಿ ಬೆಟ್ಟದ ಆಷಾಢ ಶುಕ್ರವಾರಕ್ಕೆ ಭಕ್ತರ ದರ್ಶನಕ್ಕೆ ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ.

ಮುಳ್ಳೇಗುಡ್ಡದಲ್ಲಿರುವ ಶ್ರೀ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಪರಿಶೀಲನೆ

ಕೃಷ್ಣರಾಜ ಸಾಗರ (KRS) ಜಲಾಶಯದ ಅಚ್ಚುಕಟ್ಟು ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಮಹತ್ವದ ಅವಲೋಕನ ಸಭೆ

ಮೈಸೂರು ದಸರಾ ದೃಶ್ಯ ಕಲಾವಿದರ ಸಂಘ ಅಸ್ತಿತ್ವಕ್ಕೆ

ಮೈಸೂರು ವಿ ವಿ ಎಸ್ಸಿ ಮತ್ತು ಎಸ್ ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ: ಅಧಿಕಾರಿಗಳೊಂದಿಗೆ  ಸಚಿವ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ 

ಧರ್ಮಸ್ಥಳ ಸಂಸ್ಥೆ ಯಿಂದ  ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದ ಜೀರ್ಣೋದ್ಧಾರ ಅಭಿವೃದ್ಧಿ ಕಾಮಗಾರಿಗೆ ಒಂದು ಲಕ್ಷ ರೂ ಕೊಡುಗೆ