--Ads--

ಕೌಶಲ್ಯ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಸಹಕಾರಿ:  ಸಿಇಒ ಡಾ. ವಾಸಂತಿ ಅಮರ್

On: July 16, 2026 9:51 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೌಶಲ್ಯ ಅಭಿವೃದ್ಧಿಗೆ ವಿಶ್ವಕರ್ಮ ಯೋಜನೆ ಸಹಕಾರಿ:  ಸಿಇಒ ಡಾ. ವಾಸಂತಿ ಅಮರ್

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 15: ನಾವು ನಮ್ಮ ಕೌಶಲ್ಯಗಳನ್ನು ಪಾರಂಪರಿಕ ವಿದ್ಯೆಯನ್ನು ಅಭಿವೃದ್ಧಿಪಡಿಸಿಕೊಳ್ಳದಿದ್ದರೆ ಮುಂದೆ ನಮಗೆ ಜೀವನ ಕಷ್ಟವಾಗಲಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಬೆಂಗಳೂರಿನ ಎಂ.ಎಸ್.ಎಂ.ಇ. ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಸಾಂಪ್ರದಾಯಿಕ ಕರಕುಶಲ ವಸ್ತುಗಳ ಉತ್ಪಾದನೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಆರ್ಥಿಕ ಬೆಂಬಲ ನೀಡುವ ಯೋಜನೆ. ನಶಿಸಿ ಹೋಗುತ್ತಿರುವ ಕೈಗಾರಿಕೆಗಳಿಗೆ ಪುನಶ್ಚೇತನ ನೀಡುವ ಸಲುವಾಗಿ ಉದ್ಯಮಕ್ಕೆ ಶಕ್ತಿ ಕೊಟ್ಟು ಸ್ವಂತ ಉದ್ಯೋಗ ಮಾಡಲು 18 ಕುಲಕಸುಬುಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ಜಾರಿಗೊಳಿಸಲಾಗಿದೆ.

ಈ ಯೋಜನೆಯು ಬಡಗಿ, ಕಮ್ಮಾರ. ಶಿಲ್ಪಿಗಳು. ಕುಶಲಕರ್ಮಿಗಳು ಸೇರಿದಂತೆ ೧೮ ಬಗೆಯ ಸಾಂಪ್ರದಾಯಿಕ ವೃತ್ತಿಯನ್ನು ಒಳಗೊಂಡಿದೆ. ಈ ವೃತ್ತಿಯಲ್ಲಿ ತೊಡಗಿರುವವರು ಯೋಜನೆಯಡಿ ವಿವಿಧ ಪ್ರಯೋಜನ ಪಡೆಯಬಹುದು. ಸ್ವಯಂ ಬದುಕು ಕಟ್ಟಿಕೊಳ್ಳುವ ಇಚ್ಛೆ ಇದ್ದವರಿಗೆ ತರಬೇತಿ ಜೊತೆಗೆ ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಿ, ಸ್ವಂತ ಕಸುಬು ಸೃಷ್ಟಿ ಮಾಡಿಕೊಳ್ಳ್ಳುವ ಯೋಜನೆ ಇದಾಗಿದೆ ಎಂದು ಹೇಳಿದರು.

ಕುಂಬಾರರು ತಮ್ಮದೇ ಆದ ಸಂಘಗಳನ್ನು ರಚಿಸಿಕೊಂಡು ನಿತ್ಯ ಉಪಯೋಗಿ ಮಡಿಕೆಗಳನ್ನು ಬಿಟ್ಟು ಆಲಂಕಾರಿಕ ಮಡಿಕೆಗಳನ್ನು ತಯಾರು ಮಾಡುತ್ತಿದ್ದಾರೆ. ನಮ್ಮ ಊರಿನಲ್ಲಿ ಮಾಡಿರುವ ಕುಂಬಾರರ ಆಲಂಕಾರಿಕ ಮಡಿಕೆ ಭಾರತ ಮಾತ್ರವಲ್ಲ ವಿದೇಶದಲ್ಲಿ ಸಹ ಅತ್ಯಂತ ಬೇಡಿಕೆ ಹೊಂದಿದೆ. ಕುಂಬಾರರು, ಚಮ್ಮಾರರಿಗೆ ತರಬೇತಿ ನೀಡಿ ಅವರಿಗೆ ಆರ್ಥಿಕ ಶಕ್ತಿ ನೀಡಿ ಉತ್ತೇಜಿಸಿ ಇತರೆ ಕಾರ್ಮಿಕರಿಗೆ ಕೆಲಸ ಕೊಡುವ ಉದ್ಯಮವನ್ನಾಗಿ ಮಾರ್ಪಾಡು ಮಾಡುವುದೇ ವಿಶ್ವ ಕರ್ಮ ಯೋಜನೆಯ ಉದ್ದೇಶ ಎಂದು ತಿಳಿಸಿದರು.

ವಿಶ್ವ ಕರ್ಮ ಯೋಜನೆಯ ಫಲಾನುಭವಿಗಳು ಬ್ಯಾಂಕ್ ಸಾಲದ ಬದಲು ಕಿಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ ಈ ಕಿಟ್ ವಿತರಣೆಯಲ್ಲಿ ಕೆಲವೊಂದು ಲೋಪದೋಷಗಳು ಕಂಡು ಬಂದವು. ಈ ಹಿನ್ನೆಲೆಯಲ್ಲಿ ಆಂಚೆ ಇಲಾಖೆ ತುಂಬಾ ವ್ಯವಸ್ಥಿತವಾಗಿ ಪಾರದರ್ಶಕತೆಯಿಂದ ಕೆಲಸ ನಿರ್ವಹಿಸುತ್ತಿದೆ. ಕಿಟ್ ವಿತರಣೆ ಸಂದರ್ಭದಲ್ಲಿ ವಸ್ತುಗಳ ಗುಣಮಟ್ಟವನ್ನು ಫಲಾನುಭವಿಗಳ ಮುಂದೆಯೇ ಪರಿಶೀಲಿಸಿ ನಂತರ ಅದನ್ನು ಅವರಿಗೆ ನೀಡಲಾಗುತ್ತದೆ. ಕಿಟ್ನಲ್ಲಿ ಗುಣಮಟ್ಟದ ಕೊರತೆ ಕಂಡು ಬಂದರೆ ಅದನ್ನು ತಕ್ಷಣವೇ ವಾಪಸ್ಸು ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿ ಜಗನಾಥ್, ಎಂ.ಎಸ್.ಎಂ.ಇ. ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now