--Ads--

ಜ್ಞಾನ ಹರಡುವಲ್ಲಿ ವಚನಗಳ ಕೊಡುಗೆ ಅನನ್ಯ: ಸಾಹಿತಿ ಪ್ರೊ.ಜಯಶ್ರೀ ಅಬ್ಬಿಗೇರಿ

On: July 17, 2026 11:23 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಅಮಾವಾಸ್ಯೆ ಅನುಭಾವ ಗೋಷ್ಠಿ

ಜ್ಞಾನ ಹರಡುವಲ್ಲಿ ವಚನಗಳ ಕೊಡುಗೆ ಅನನ್ಯ: ಸಾಹಿತಿ ಪ್ರೊ.ಜಯಶ್ರೀ ಅಬ್ಬಿಗೇರಿ

ಬೆಳಗಾವಿ: 12ನೇ ಶತಮಾನದ ಶರಣರ ವಚನಗಳು ಸಮಾಜಕ್ಕೆ ನೈತಿಕ ಶಿಕ್ಷಣ ನೀಡುತ್ತವೆ. ಮನದ ಕಲ್ಮಶವನ್ನು ನಿವಾರಿಸಿ ಜ್ಞಾನವನ್ನು ಹರಡುವಲ್ಲಿ ವಚನಗಳ ಕೊಡುಗೆ ಅನನ್ಯವಾಗಿದೆ’ ಎಂದು ಸಾಹಿತಿ ಪ್ರೊ. ಜಯಶ್ರೀ ಅಬ್ಬಿಗೇರಿ ಹೇಳಿದರು.

ಇಲ್ಲಿನ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಹಮ್ಮಿಕೊಂಡಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ವಚನಗಳಲ್ಲಿ ವ್ಯಕ್ತಿತ್ವ ವಿಕಸನ ಪರಿಕಲ್ಪನೆ’ ವಿಷಯ ಕುರಿತು ಅವರು ಮಾತನಾಡಿದರು.

‘ಶರಣರ ವಚನಗಳಲ್ಲಿ ಜೀವನ ಮೌಲ್ಯ ಅಡಗಿದೆ. ಅತ್ಯಂತ ಸರಳವಾಗಿ ಬದುಕಿನ ಸೂತ್ರಗಳನ್ನು ಸೂತ್ರೀಕರಿಸಿದವರು ಶರಣರು. ಬಸವಣ್ಣನವರ ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ… ಎಂಬ ವಚನವು ಮಾನವನ ಸುಂದರ ಬದುಕಿಗೆ ಬಹುದೊಡ್ಡ ವ್ಯಾಖ್ಯಾನವಾಗಿದೆ. ನಮ್ಮ ಅಂತರಂಗ ಶುದ್ದಿ ಹಾಗೂ ಬಹಿರಂಗ ಶುದ್ದಿಗೆ ಇನ್ನೇನು ಬೇಕು’ ಎಂದರು.

‘ಒತ್ತಡದ ಬದುಕಿನಲ್ಲಿ ನಡೆಯುತ್ತಿರುವ ನಮಗೆ ಮಾನಸಿಕ ನೆಮ್ಮದಿಯನ್ನು ಕಳೆದುಕೊಂಡಿದ್ದೇವೆ. ಸಂಯಮವನ್ನು ಕಳೆದುಕೊಂಡು ಬದುಕುವಂತಾಗಿರುವ ಈ ಸಮಯದಲ್ಲಿ ಸಮಾಧಾನ, ವ್ಯವಧಾನ, ಅವಧಾನಗಳನ್ನು ಅತ್ಯಂತ ಮಾರ್ಮಿಕವಾಗಿ ಶರಣರು ತಿಳಿಸಿಕೊಟ್ಟಿದ್ದಾರೆ. ಅವರು ಹೇಳಿರುವ ಕಾಯಕ ದಾಸೋಹ, ಪ್ರಸಾದ ಸೂತ್ರಗಳು ಜೀವನಕ್ಕೆ ಅಡಿಪಾಯವಾಗಿವೆ. ಕರ್ಮ ಸಿದ್ಧಾಂತದ ಕುರಿತು ಅವರು ಹೇಳಿದ ರೀತಿ ನಮ್ಮ ಜೀವನಕ್ಕೆ ಸೋಪಾನವಾಗಿದೆ. ವಚನಗಳನ್ನು ಅಭ್ಯಸಿಸಿ ನಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಬೆಳಗಾವಿಯ ಲಿಂಗಾಯತ ಭವನದಲ್ಲಿ ಹಮ್ಮಿಕೊಂಡಿದ್ದ ಅಮಾವಾಸ್ಯೆ ಅನುಭಾವ ಗೋಷ್ಠಿಯಲ್ಲಿ ಪ್ರೊ.ಜಯಶ್ರೀ ಅಬ್ಬಿಗೇರಿ ಅವರಿಗೆ ಸತ್ಕರಿಸಲಾಯಿತು

ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅವಿನಾಶ ಕವಿ ಇದೇ ವೇಳೆ, ವಚನೋತ್ಸವ ಸಂಘಟಿಸಿದವರ ಸತ್ಕರಿಸಲಾಯಿತು.

ಡಾ.ಎಚ್‌.ಬಿ. ರಾಜಶೇಕರ, ಪ್ರಸಾದ ಹಿರೇಮಠ, ಬಾಲಚಂದ್ರ ಬಾಗಿ, ವೈ.ಬಿ.ಮೆಣಸಿನಕಾಯಿ, ವಿ.ಕೆ. ಪಾಟೀಲ, ವಿದ್ಯಾ ಹುಂಡೇಕರ, ಸರೋಜನಿ ನಿಶಾನದಾರ, ಜ್ಯೋತಿ ಬಾದಾಮಿ, ಗುರುದೇವಿ ಹುಲೆಪ್ಪನವರಮಠ, ಶೈಲಜಾ ಭಿಂಗೆ, ಶೈಲಜಾ ಸಂಸುದ್ದಿ ಉಪಸ್ಥಿತರಿದ್ದರು.

ಮಹಾದೇವಿ ಪಾಟೀಲ ವಚನ ಪ್ರಾರ್ಥನೆ ಮಾಡಿದರು. ಸೋಮಲಿಂಗ ಮಾವಿನಕಟ್ಟಿ, ಸೋಮಲಿಂಗ ಮಾವಿನಕಟ್ಟಿ, ಪಾರ್ವತಿ ತುಪ್ಪದ ಅತಿಥಿ ಪರಿಚಯಿಸಿದರು.

ಸವಿತಾ ವಿರೂಪಾಕ್ಷಿ ವಚನ ವಿಶ್ಲೇಷಣೆ ಮಾಡಿದರು. ಮಹಾದೇವಿ ಅಜವಾನ ನಿರೂಪಿಸಿದರು. ಆರ್.ಪಿ.ಪಾಟೀಲ ವಂದಿಸಿದರು. ಎ.ಬಿ.ಮಡಿವಾಳರ ದಾಸೋಹ ಸೇವೆಗೈದರು.

 

WhatsApp

Join Now

Telegram

Join Now

Instagram

Join Now