--Ads--

ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಇಂದು ಮಾದಕ ವಸ್ತು ಬಳಕೆ ವಿರೋಧಿ ಅಭಿಯಾನ

On: July 24, 2026 5:10 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಇಂದು ಮಾದಕ ವಸ್ತು ಬಳಕೆ ವಿರೋಧಿ ಅಭಿಯಾನ

ಶಿಡ್ಲಘಟ್ಟ : ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಅಭಿಯಾನ ನಡೆಯಲಿದೆ. ವಿದ್ಯಾರ್ಥಿ, ಯುವಜನರು ಹಾಗೂ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಲು ತಾಲ್ಲೂಕು ಆಡಳಿತ ಸನ್ನದ್ಧವಾಗಿದೆ.

ನಗರದ ನೆಹರೂ ಕ್ರೀಡಾಂಗಣದಲ್ಲಿ ಅಭಿಯಾನಕ್ಕೆ ಪೂರ್ವ ಸಿದ್ದತೆಗಳು ನಡೆಯುತ್ತಿದ್ದು ಸಿದ್ದತೆಗಳನ್ನು ಪರಿಶೀಲಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಆನಂದ್ ಕುಮಾರ್, ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾದಕ ವಸ್ತುಗಳ ವಿರೋಧಿ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ.
ಶಾಸಕ ಬಿ.ಎನ್.ರವಿಕುಮಾರ್, ಎಸ್ಪಿ ಕುಶಾಲ್ ಚೌಕ್ಸೆ ಸೇರಿದಂತೆ ಇತರೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

ವಾಲೀಬಾಲ್, ಕ್ರಿಕೇಟ್ ಪಂದ್ಯಾವಳಿಗಳನ್ನು ಹಮ್ಮಿಕೊಂಡಿದ್ದು ಪೊಲೀಸರು, ಪತ್ರಕರ್ತರು ಹಾಗೂ ಸಾರ್ವಜನಿಕರ ಆಟಗಾರರ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

WhatsApp

Join Now

Telegram

Join Now

Instagram

Join Now