ವಿಜಯ ದರ್ಪಣ ನ್ಯೂಸ್….
ಬೆಳೆ ವಿಮೆ ನೋಂದಣಿಗೆ ಜು.31 ಕೊನೆ ದಿನ

ಬೆಂಗಳೂರು ಗ್ರಾಮಾಂತರ ಜಿಲ್ಲೆ.ಜುಲೈ.27:
ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ದ್ರಾಕ್ಷಿ ಮತ್ತು ಮಾವು ಬೆಳೆಯುವ ರೈತರು ತಮ್ಮ ಬೆಳಗಳಿಗೆ ವಿಮೆ(ಇನ್ಶುರೆನ್ಸ್) ಮಾಡಿಸಲು ಜುಲೈ 31 ಕೊನೆಯ ದಿನ.
ಮಾವು, ದ್ರಾಕ್ಷಿ ಬೆಳೆಯುವ ರೈತರು ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಾದ ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80,000/- ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ ಹೆಕ್ಟೇರ್ ಗೆ 4,000/-, ಅಥವಾ ಒಂದು ಎಕರೆಗೆ 1600/- ರೂ ಮಾತ್ರ ವಿಮೆ(ಇನ್ಶುರೆನ್ಸ್) ಪಾವತಿ ಮಾಡಬೇಕು.
ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ 2,80,000 ರೂ ವಿಮಾ ಮೊತ್ತ ಸಿಗಲಿದ್ದು, ರೈತರು ಪ್ರತಿ ಹೆಕ್ಟೇರಿಗೆ ಶೇ. 5 ರಂತೆ 14,000/- ಅಥವಾ ಎಕರೆಗೆ 5600/- ರೂ. ವಿಮೆ ಪಾವತಿ ಮಾಡಬೇಕು. ಪ್ರಕೃತಿ ವಿಕೋಪದಿಂದ ಬೆಳೆಗಳು ನಷ್ಟವಾದಗ ವಿಮಾ ಮೊತ್ತ ಸಹಾಯವಾಗಲಿದೆ.
ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯ ರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.
ಹೆಚ್ಚಿನ ಮಾಹಿತಿಗ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ದೇವನಹಳ್ಳಿ- 9480461234, ದೊಡ್ಡಬಳ್ಳಾಪುರ-9482129648, ಹೊಸಕೋಟೆ-9880210892, ನೆಲಮಂಗಲ-9902581532 ಹಾಗೂ ಹತ್ತಿರದ ರೈತ ಸಂಪರ್ಕ ಕೇಂದ್ರ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











