ವಿಜಯ ದರ್ಪಣ ನ್ಯೂಸ್…
ಇಂದು ಕೃಷ್ಣಾದಲ್ಲಿ ನಡೆದ ಕಾವೇರಿ ಸರ್ವಪಕ್ಷ ಸಭೆ: ಸಿಎಂ ಪ್ರಾಸ್ತಾವಿಕ ನುಡಿ

ಬೆಂಗಳೂರು : ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಕಾವೇರಿ ವಿವಾದವನ್ನು ನಾವೆಲ್ಲ ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ.ರಾಜಕೀಯಕ್ಕಿಂತ ರಾಜ್ಯದ ರೈತರ, ಜನರ ಹಿತ ಮುಖ್ಯ.
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕಾರಣವನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳೂ ಒಟ್ಟಿಗೇ ನಿಂತಿರುವ ಚರಿತ್ರೆ ನಮ್ಮ ರಾಜ್ಯಕ್ಕೆ ಇದೆ.
ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವ ನಿಲುವು ನಮ್ಮದಾಗಿದೆ. ನಮ್ಮ ಈ ನಿಲುವಿಗೆ ತಾವೆಲ್ಲರೂ ಸಂಪೂರ್ಣ ಸಹಮತ ಹೊಂದಿದ್ದೀರಿ ಎನ್ನುವುದು ನನಗೆ ಗೊತ್ತಿದೆ.
ನಾನು CWRC, CWMA ಮೀಟಿಂಗ್ ಗೆ ಮೊದಲೇ ಕೇಂದ್ರ ಸಚಿವರಾದ ಸಿ ಆರ್ ಪಾಟೀಲ್, ಪ್ರಹ್ಲಾದ್ ಜೋಶಿ, ಸೋಮಣ್ಣ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ವಿಚಾರ ಮನವರಿಕೆ ಮಾಡಿಕೊಟ್ಟಿದ್ದೆ.
ಅವರು ಕೂಡ ಕೇಂದ್ರದಲ್ಲಿ ರಾಜ್ಯದ ಪರ ಮಾತಾಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ.
ದೆಹಲಿಯಲ್ಲಿ ನಡೆದ ಸಂಸತ್ ಸದಸ್ಯರ ಸಭೆಯಲ್ಲಿ ಪಕ್ಷಬೇಧ ಮರೆತು ಎಲ್ಲರೂ ರಾಜ್ಯದ ಪರ ನಿಲ್ಲುವ ಮಾತು ಕೊಟ್ಟಿದ್ದಾರೆ. ಅವರಿಗೂ ಧನ್ಯವಾದ ಹೇಳುತ್ತೇನೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾವೇರಿ ನದಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸತ್ ಸದಸ್ಯ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಅಶೋಕ್, ಚಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಕೆ.ಪಾಟೀಲ್, ಬಿ.ಕೆ.ಹರಿಪ್ರಸಾದ್, ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಯವರ ವಿಶೇಷ ಸಲಹೆಗಾರ ಜಿ.ಸಿ.ಚಂದ್ರಶೇಖರ್, ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.











