--Ads--

ಶ್ರದ್ದೆಯಿಂದ ಓದಿದ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ: ಶ್ರೀ ಶ್ರೀ ಶಂಭುನಾಥಸ್ವಾಮೀಜಿ 

On: August 3, 2026 4:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಶ್ರದ್ದೆಯಿಂದ ಓದಿದ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ: ಶ್ರೀ ಶ್ರೀ ಶಂಭುನಾಥಸ್ವಾಮೀಜಿ 

 

ಚನ್ನರಾಯಪಟ್ಟಣ: ಶ್ರದ್ದೆಯಿಂದ ಓದಿದ ವಿದ್ಯಾರ್ಥಿಗಳ ಬದುಕು ಹಸನಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾಮಠಾಧೀಶ ಶಂಭುನಾಥಸ್ವಾಮೀಜಿ ಹೇಳಿದರು.

ತಾಲ್ಲೂಕು ಒಕ್ಕಲಿಗರ ಸಂಘದವತಿಯಿಂದ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು, ಪೋಷಕರು ಬಡತನದಲ್ಲಿದ್ದರೂ ಎಷ್ಟೇ ಕಷ್ಟಪಟ್ಟರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತಾರೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಬಯಸುತ್ತಾರೆ. ಪೋಷಕರ ಕನಸನ್ನು ನನಸು ಮಾಡುವ ಸಲುವಾಗಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಬೇಕು ಎಂದರು.

ವಿದ್ಯೆ ಜತೆ ಸಂಸ್ಕಾರ ರೂಢಿಸಿ ಕೊಂಡರೆ ಜೀವನದಲ್ಲಿ ಎಂದಿಗೂ ಕೆಡಕಾಗದು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠದಿಂದ ಬೆಂಗಳೂರು ಮತ್ತು ನವದೆಹಲಿಯ-ಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ಸಿ.ಎನ್‌. ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಬೇಕು, ಕೆಟ್ಟ ಹವ್ಯಾಸಕ್ಕೆ ಜೋತು ಬೀಳದೆ ಜಾಗೃತರಾಗಿರಬೇಕು ಎಂದ ಅವರು ತಾಲ್ಲೂಕು ಒಕ್ಕಲಿಗರ ಸಂಘಕ್ಕೆ ಪಟ್ಟಣದಲ್ಲಿ ಸೂಕ್ತ ಜಾಗ ಗುರುತಿಸಲಾಗಿದ್ದು, ಶೀಘ್ರದಲ್ಲಿ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್‌.ಎನ್‌. ಲೋಕೇಶ್, ಪೀಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ৯০. ಶಂಕರ್ ಮಾತನಾಡಿದರು. ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ ಎಚ್.ಸಿ. ದೀಪು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘುಗೌಡ, ಪೀಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಎನ್. ಮಂಜುನಾಥ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮೂರ್ತಿ, ಜಿಲ್ಲಾ ಒಕ್ಕಲಿಗರ ಸಂಘದ ಜಿ.ಆರ್. ನಿರ್ದೇಶಕ ಬಿ.ಎನ್. ಮಂಜುನಾಥ್‌, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ವಿ. ಜಯಪಾಲ್, ರಾಜ್ಯಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿ.ಎನ್. ಅಶೋಕ್, ಕುವೆಂಪು ವೇದಿಕೆ ಅದ್ಯಕ್ಷ ರಮೇಶ್ ಕುಮಾಬರಹಳ್ಳಿ, ಸಮಾಜಸೇವಕ ಹೇಮಾವತಿ ದೇವರಾಜು, ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕೆ. ಜಯರಾಂ ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now