ವಿಜಯ ದರ್ಪಣ ನ್ಯೂಸ್….
ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಳಕೊಳ್ಳಿ : ಡಾಲ್ಫಿನ್ ಶಾಲೆಯ ಎಂ.ಡಿ. ಎನ್.ಅಶೋಕ್

ಶಿಡ್ಲಘಟ್ಟ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ಡಾಲ್ಫಿನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ಅಶೋಕ್ ತಿಳಿಸಿದರು.
ನಗರದ ಡಾಲ್ಫಿನ್ ಪಬ್ಲಿಕ್ ಶಾಲೆಯ ‘ವಿದ್ಯಾರ್ಥಿ ನಾಯಕತ್ವ ಪದಗ್ರಹಣ’ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಡಾಲ್ಫಿನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಚಂದನಾ ಅಶೋಕ್ ಮಾತನಾಡಿ, ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವದ ಅವಕಾಶ ಒದಗಿಸುವುದರಿಂದ ಅವರಲ್ಲಿ ಜವಾಬ್ದಾರಿಯುತ ನಡವಳಿಕೆ ಮತ್ತು ತಂಡ ಮನೋಭಾವ ಬೆಳೆಯುತ್ತದೆ ಎಂದರು.
ಪ್ರಾಂಶುಪಾಲ ಎಲ್.ಮುನಿಕೃಷ್ಣಪ್ಪ ಮಾತನಾಡಿ,ಪ್ರಸ್ತುತ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕೇವಲ ಪಾಠ ಪ್ರವಚನಗಳಷ್ಟೇ ಸಾಲದು, ಪಠ್ಯೇತರ ಚಟುವಟಿಕೆಗಳೂ ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವಂತದ್ದು, ನಾಯಕತ್ವ ಗುಣಗಳನ್ನು ಹೆಚ್ಚಿಸುವುದು, ಸ್ವಾಭಿಮಾನ ಹಾಗೂ ಆಂತರಿಕ ಪ್ರತಿಭೆಯನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದರು.
ಈ ವೇಳೆ ಶಾಲಾ ಸಂಸತ್ತನ್ನು ರಚಿಸಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪದಗ್ರಹಣ ಬಾಧ್ಯತೆ ಬೋಧಿಸಿ ಪದಗ್ರಹಣ ಸಮಾರಂಭ ನಡೆಸಲಾಯಿತು ,ಶಾಲೆಯ ಮುಖ್ಯ ವಿದ್ಯಾರ್ಥಿ ವಿಭಾಗ, ಸಾಂಸ್ಕೃತಿಕ ವಿಭಾಗ, ಕ್ರೀಡಾ ವಿಭಾಗ, ಆರೋಗ್ಯ ವಿಭಾಗ, ಶಿಸ್ತಿನ ವಿಭಾಗ, ಸಾಹಿತ್ಯ ವಿಭಾಗ, ಇಕೋ ಕ್ಲಬ್ (Eco Club) ಸೇರಿದಂತೆ ಒಟ್ಟು 25 ವಿಭಾಗಗಳಿಗೆ ಒಬ್ಬ ವಿದ್ಯಾರ್ಥಿ ಹಾಗೂ ಒಬ್ಬ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ಎಲ್ಲ ವಿದ್ಯಾರ್ಥಿ ಪ್ರತಿನಿಧಿಗಳು ಪದಗ್ರಹಣ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಡಾಲ್ಫಿನ್ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ನಾಗರಾಜ್, ಕಾರ್ಯದರ್ಶಿ ವಿ.ಕೃಷ್ಣಪ್ಪ, ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ (ASI) ನರಸಿಂಹಯ್ಯ, ಚಿಕ್ಕಬಳ್ಳಾಪುರದ ಎನ್ಸಿಸಿ (NCC) ಅಧಿಕಾರಿ ಸುಬೇದಾರ್ ಮಲ್ಲಿಕಾರ್ಜುನ್, ಡಾಲ್ಫಿನ್ ಪಿಯು ಕಾಲೇಜ್ ಪ್ರಾಂಶುಪಾಲ ಎನ್.ಶ್ರೀನಿವಾಸಮೂರ್ತಿ, ಶಿಕ್ಷಕರು, ಸಿಬ್ಬಂದಿವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









