ವಿಜಯ ದರ್ಪಣ ನ್ಯೂಸ್…..
” ಭದ್ರಕಾಳಿ ಶಕ್ತಿ ಪೀಠದಲ್ಲಿ ಭಕ್ತಿಭಾವದ ಭೀಮನ ಅಮಾವಾಸ್ಯೆ ಆಚರಣೆ “
ಹಿಂದೂ ಸಂಸ್ಕೃತಿಯಲ್ಲಿ ಭೀಮನ ಅಮಾವಾಸ್ಯೆಗೆ ತನ್ನದೇ ಆದ ಚರಿತ್ರೆ ಇದೆ :ನಾಗರಾಜ್ ಶಾಸ್ತ್ರಿ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿ ಗ್ರಾಮದ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ಭೀಮನ ಅಮಾವಾಸ್ಯೆ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಭೀಮನ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ದಶ ಪ್ರತ್ಯಂಗಿರಾ ಹೋಮ ಹಾಗೂ 4,008 ತೆಂಗಿನಕಾಯಿ ದೀಪಾರಾಧನೆ ಸೇರಿದಂತೆ ವಿವಿಧ ಹೋಮ, ಹವನ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮೂರು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಮಂಗಳವಾರದಂದು ವಿಶೇಷವಾಗಿ ಮಹಾ ಚಂಡಿ ಹೋಮ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವ ವನ್ನು ವೈಭವದಿಂದ ಆಯೋಜಿಸಲಾಗಿತ್ತು.
ವೇದಮಂತ್ರ ಘೋಷ, ಹೋಮ-ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳ ನಡುವೆ ನಡೆದ ಕಾರ್ಯಕ್ರಮವು ಭಕ್ತರ ಗಮನ ಸೆಳೆಯಿತು.ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಹೊರರಾಜ್ಯಗಳು ಹಾಗೂ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನಗಳಲ್ಲಿ ಪಾಲ್ಗೊಂಡ ಭಕ್ತರು ಕ್ಷೇತ್ರದ ಪ್ರಸಾದ ಸ್ವೀಕರಿಸಿ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಶ್ರೀ ನಾಗರಾಜ್ ಶಾಸ್ತ್ರಿಗಳು ಮಾತನಾಡಿ, ಭೀಮನ ಅಮಾವಾಸ್ಯೆಯ ಧಾರ್ಮಿಕ ಮಹತ್ವವನ್ನು ಭಕ್ತರಿಗೆ ವಿವರಿಸಿದರು.ಮುತ್ತೈದೆಯರು ತಮ್ಮ ಪತಿಯ ಆರೋಗ್ಯ, ಆಯುಸ್ಸು ಮತ್ತು ಯಶಸ್ಸಿಗಾಗಿ ಈ ವ್ರತವನ್ನು ಆಚರಿಸುತ್ತಾರೆ. ಭೀಮನ ಅಮಾವಾಸ್ಯೆಯಂದು ದೇವತಾ ಆರಾಧನೆ, ಹೋಮ-ಹವನ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಕುಟುಂಬದ ಸುಖ-ಶಾಂತಿ, ಆರೋಗ್ಯ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ಪ್ರಾರ್ಥಿಸುವುದು ಪರಂಪರೆಯಾಗಿದೆ ಎಂದು ತಿಳಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಸುಮಾರು ಸಾವಿರಾರು ಸಂಖ್ಯೆಯ ಭಕ್ತ ಸಮೂಹವೇ ಹಾಜರಿದ್ದು ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ತಿದ್ದ ಪಕ್ಷಕ್ಕೆ ನಿರಂತರ ಅನ್ನದಾಸಹ ವ್ಯವಸ್ಥೆ ಸಹ ದೇವಾಲಯದ ವತಿಯಿಂದ ಆಯೋಜಿಸಲಾಗಿತ್ತು.










