ವಿಜಯ ದರ್ಪಣ ನ್ಯೂಸ್ …..
ಆ. 20 ರಂದು ದೇವರಾಜ ಅರಸು ಅವರ 111ನೇ ಜಯಂತಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.12:
ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 111 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111 ನೇ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೇವನಹಳ್ಳಿ ಟೌನ್ ನ ದೇವರಾಜ ಅರಸು ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ಅಲಂಕಾರ, ಕಲಾ ತಂಡಗಳು, ಪಲ್ಲಕ್ಕಿ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಸನ್ಮಾನ, ಉಪನ್ಯಾಸ, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಂತಿ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಜೊತೆಗೆ ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಅಪರ ಜಿಲ್ಲಾಧಿಕಾರಿ ಕೋರಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇ ಗಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.










