--Ads--

ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಕ್ರಮದ ಭರವಸೆ : ಶಾಸಕ ಬಿ.ಎನ್.ರವಿಕುಮಾ‌ರ್

On: August 12, 2026 3:12 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಕ್ರಮದ ಭರವಸೆ : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಅಲೆಮಾರಿ ಹಾಗೂ ಬುಡಕಟ್ಟು ಸಮುದಾಯದವರು ಶಿಕ್ಷಣ, ವಸತಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳ ಲಭ್ಯತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಸಮುದಾಯದ ಜನರಿಗೆ ತಲುಪುವಂತೆ ಕ್ರಮ ವಹಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು.

ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ (ರಿ) ಹಾಗೂ ಕರ್ನಾಟಕ ರಾಜ್ಯ ಪಂಚ ಬುಡಕಟ್ಟು ಸಂರಕ್ಷಣಾ ಸಮಿತಿ (ರಿ) ವತಿಯಿಂದ ಆಯೋಜಿಸಿದ್ದ
ಬೆಂಗಳೂರಿಗೆ ತೆರಳುವ ಬಸ್ ಗಳಿಗೆ ಚಾಲನೆ ನೀಡಿ
ಮಾತನಾಡಿದ ಅವರು ಸಮುದಾಯದವರು ಹಲವು ವರ್ಷಗಳಿಂದ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ,ಅವರ ಹಕ್ಕುಗಳು, ಮೂಲಭೂತ ಸೌಲಭ್ಯಗಳು ಹಾಗೂ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ತಂದು, ಸೂಕ್ತ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.

ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ,ಈ ಹಿಂದೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆಯವರ ಭೇಟಿಯ ಸಂದರ್ಭದಲ್ಲಿಯೂ ಹಕ್ಕಿಪಿಕ್ಕಿ ಕಾಲೋನಿಯ ದಾಖಲಾತಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪವಾಗಿತ್ತು ಎಂದರು.
‘ವಿಶ್ವ ಆದಿವಾಸಿ ದಿನಾಚರಣೆಯ’ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮವು ಅಲೆಮಾರಿ ಹಾಗೂ ಬುಡಕಟ್ಟು ಸಮುದಾಯದ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ವೇದಿಕೆಯಾಗಲಿದೆ.

ಬೆಂಗಳೂರಿನ ಅಂಬೇಡ್ಕ‌ರ್ ಭವನದಲ್ಲಿ ನಡೆಯಲಿರುವ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಾಲ್ಲೂಕಿನ ಬಾಳೇಗೌಡನಹಳ್ಳಿ ಹಾಗೂ ಹಕ್ಕಿಪಿಕ್ಕಿ ಗ್ರಾಮಗಳಿಂದ ನೂರಾರು ಮಂದಿ ಎರಡು ಬಸ್‌ಗಳಲ್ಲಿ ಬೆಂಗಳೂರಿಗೆ ತೆರಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ತಾದೂರು ರಘು, ಗಂಜಿಗುಂಟೆ ನರಸಿಂಹಮೂರ್ತಿ, ಎಸ್‌.ಎಂ.ಶ್ರೀನಿವಾಸ್ ಹಾಗು ಬಾಳೇಗೌಡನಹಳ್ಳಿ ,ಹಕ್ಕಿಪಿಕ್ಕಿ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now