--Ads--

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್

On: August 13, 2026 1:58 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ : ಎಸ್.ಎಸ್.ಅಬೀದ್

ಶಿಡ್ಲಘಟ್ಟ : ವಯಸ್ಸಿನ ವ್ಯತ್ಯಾಸ ಹಾಗೂ ತಪ್ಪಾಗಿ ಮ್ಯಾಪಿಂಗ್ ಆಗಿದ್ದ ದತ್ತಾಂಶವನ್ನು ಗುರುತಿಸಿ ಅನ್‌ಮ್ಯಾಪಿಂಗ್ ಮಾಡುವ ಮೂಲಕ ಸರಿಪಡಿಸಲಾಗಿದೆ ದಾಖಲೆಗಳಲ್ಲಿನ ವ್ಯತ್ಯಾಸಗಳ ನೈಜತೆಯನ್ನು ಪರಿಶೀಲಿಸಿ, ಸಂಬಂಧಪಟ್ಟವರಿಂದ ಅಗತ್ಯ ದಾಖಲೆಗಳನ್ನು ಪಡೆದು ತಿದ್ದುಪಡಿ ಮಾಡಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಎಸ್.ಎಸ್.ಅಬೀದ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯಲ್ಲಿದ್ದ ದತ್ತಾಂಶದ ವ್ಯತ್ಯಾಸಗಳನ್ನು ಸರಿಪಡಿಸುವ ಕಾರ್ಯ ಚುರುಕುಗೊಂಡಿದ್ದು, ಕಳೆದ 15 ದಿನಗಳಲ್ಲಿ ಸುಮಾರು 36 ಸಾವಿರದಷ್ಟಿದ್ದ ವ್ಯತ್ಯಾಸಗಳ ಸಂಖ್ಯೆ 13,900ಕ್ಕೆ ಇಳಿಕೆಯಾಗಿದೆ ಎಂದು ಹೇಳಿದರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಡಿ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ ,ತಾಲ್ಲೂಕು ಆಡಳಿತ, ಬೂತ್ ಮಟ್ಟದ ಅಧಿಕಾರಿಗಳು ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದರಿಂದ ಈ ಪ್ರಗತಿ ಸಾಧ್ಯವಾಗಿದೆ
ಎಂದು ವಿವರಿಸಿದರು.

ಕಳೆದ ಏಳೆಂಟು ತಿಂಗಳಿಂದ ಮ್ಯಾಪಿಂಗ್ ಹಾಗೂ ಎನ್ಯುಮರೇಷನ್ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಲ್‌ಒಗಳೇ ಈ ಕಾರ್ಯದ ಪ್ರಮುಖ ಆಧಾರಸ್ತಂಭಗಳಾಗಿದ್ದಾರೆ ,ಬಿಸಿಲು ಹಾಗೂ ರಜಾದಿನಗಳನ್ನು ಲೆಕ್ಕಿಸದೆ ನಿಖರ ಮಾಹಿತಿ ಸಂಗ್ರಹಿಸಲು ಹಲವು ಬಾರಿ ಮನೆಗಳಿಗೆ ಭೇಟಿ ನೀಡಿದ ಬಿಎಲ್‌ಒಗಳ ಸೇವೆಗೆ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಪರವಾಗಿ ಅವರು ಕೃತಜ್ಞತೆ ಸಲ್ಲಿಸಿದರು.

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗುತ್ತದೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದ ಬಳಿಕ ಸಹಾಯಕ ಚುನಾವಣಾ ನೋಂದಣಾಧಿಕಾರಿ ಅಧಿಕಾರಿಗಳು ವಿಚಾರಣೆ ನಡೆಸಿ, ನಿಯಮಾನುಸಾರ ಅರ್ಹರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಿದ್ದಾರೆ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳುವುದೇ ಪರಿಷ್ಕರಣಾ ಪ್ರಕ್ರಿಯೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಪ್ರಸ್ತುತ ಈವರೆಗೆ 1,85,173 ದಾಖಲೆಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ಶೇ.88.28ರಷ್ಟು ಪ್ರಕ್ರಿಯೆ ಮುಕ್ತಾಯವಾಗಿದೆ, ಗೈರುಹಾಜರಿ, ಸ್ಥಳಾಂತರ, ಮರಣ, ನಕಲಿ ನೋಂದಣಿ ಸೇರಿದಂತೆ ವಿವಿಧ ಕಾರಣಗಳಡಿ ಒಟ್ಟು 24,579 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದರು.

ಈ ಪಟ್ಟಿಯಲ್ಲಿರುವವರು ತಾವು ವಾಸ್ತವವಾಗಿ ಸಂಬಂಧಪಟ್ಟ ಸ್ಥಳದಲ್ಲಿ ವಾಸಿಸುತ್ತಿರುವುದನ್ನು ದೃಢಪಡಿಸುವ ಸೂಕ್ತ ದಾಖಲೆಗಳನ್ನು ಆಗಸ್ಟ್ 17ರೊಳಗೆ ಸಲ್ಲಿಸಬಹುದು ,ದಾಖಲೆಗಳ ಪರಿಶೀಲನೆಯ ಬಳಿಕ ಅರ್ಹತೆ ದೃಢಪಟ್ಟಲ್ಲಿ ಅಂತಹವರ ಹೆಸರನ್ನು ಮರು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು ಎಂದು ನುಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎನ್.ಗಗನಸಿಂಧು ಹಾಗೂ ನಗರಸಭೆ ಪೌರಾಯುಕ್ತ ಅಮೃತ ಹಾಜರಿದ್ದರು.

WhatsApp

Join Now

Telegram

Join Now

Instagram

Join Now