--Ads--

ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ

On: August 15, 2026 2:23 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು  ವಿವಿಧ ಸಂಘಟನೆಗಳಿಂದ ಸನ್ಮಾನ

ಶಿಡ್ಲಘಟ್ಟ : ದೇಶದ ಗಡಿಯನ್ನು ಕಾಯುವ ಯೋಧರು ಪ್ರತಿಕೂಲ ಹವಾಮಾನದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಸೇವೆಯಿಂದ ದೇಶದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದು‌
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧ ಶಿವಕುಮಾರ್ ತಿಳಿಸಿದರು.

ನಗರದ ಕದಿರಿಪಾಳ್ಯ ಮತ್ತು ಗಾಂಧಿನಗರದ ಬಳಿ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಹೋರಾಡಿದ್ದಾರೆ ಅವರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯದ ಬದುಕನ್ನು ನಡೆಸುತ್ತಿದ್ದೇವೆ ಎಂದರು.

ದೇಶದ ಗಡಿಯಲ್ಲಿ ಹಗಲು-ರಾತ್ರಿ ಎನ್ನದೆ ಕರ್ತವ್ಯ
ನಿರ್ವಹಿಸುತ್ತಿರುವ ಯೋಧರ ಸೇವೆ ಹಾಗೂ ತ್ಯಾಗವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹೇಳಿದರು.
ಈ ವೇಳೆ ಸುಂಡ್ರಹಳ್ಳಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರನ್ನು ಸನ್ಮಾನಿಸಿ , ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ನಗರ ಘಟಕ ಅಧ್ಯಕ್ಷ ಬಿ.ನಾರಾಯಣಸ್ವಾಮಿ , ಪಿ.ವಿ.ಶ್ರೀನಿವಾಸ್,
ಶಿವಕುಮಾರ್ ,ಮಂಜುನಾಥ್, ಶಿಡ್ಲಘಟ್ಟ ತಾಲ್ಲೂಕು
ಟೈಲರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮಣ, ಜೈಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ವಿ.ವೆಂಕಟೇಶ್ ,ಭಾಸ್ಕರ್ ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸ್ಥಳೀಯರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now