--Ads--

ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ದೇಶವು ಪ್ರಗತಪತದತ್ತ ಸಾಗಲಿದೆ : ಶಾಸಕ ಬಿ.ಎನ್.ರವಿಕುಮಾ‌ರ್

On: August 15, 2026 3:12 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ದೇಶವು ಪ್ರಗತಪತದತ್ತ ಸಾಗಲಿದೆ : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪಬೇಕಾದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು.

ತಾಲ್ಲೂಕು ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಸಂವಿಧಾನದ ಆಶಯದಂತೆ ರಾಜಕಾರಣಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಭಾರತವು ವಿಶ್ವದಲ್ಲೇ ಉನ್ನತ ಸ್ಥಾನಕ್ಕೇರಲಿದೆ ಎಂದು ಹೇಳಿದರು.
1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆತಾಗ ಭಾರತದ ಜನಸಂಖ್ಯೆ ಸುಮಾರು 34 ಕೋಟಿಯಷ್ಟಿದ್ದು, ಸಾಕ್ಷರತಾ ಪ್ರಮಾಣ ಕೇವಲ ಶೇ 18ರಷ್ಟಿತ್ತು ಎಂದ ಅವರು 80 ವರ್ಷಗಳ ಬಳಿಕ ದೇಶದ ಸಾಕ್ಷರತಾ ಪ್ರಮಾಣ ಶೇ 83ಕ್ಕೆ ಏರಿಕೆಯಾಗಿರುವುದು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸಾಧನೆಯನ್ನು ಸಾಧಿಸಿ ಮಹತ್ವದ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಡಾ.ಬಿ.ಆ‌ರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶ ಹಾಗೂ ಹಕ್ಕುಗಳನ್ನು ಕಲ್ಪಿಸಿದೆ ,ಸಂವಿಧಾನ ನೀಡಿರುವ ಸಮಾನತೆಯ ಹಕ್ಕಿನ ಫಲವಾಗಿ ಬುಡಕಟ್ಟು ಸಮುದಾಯದ ಮಹಿಳೆ ದೌಪದಿ ಮುರ್ಮು ಅವರು ದೇಶದ ರಾಷ್ಟ್ರಪತಿಯಾಗಿ ಅತ್ಯುನ್ನತ ಸ್ಥಾನ ಅಲಂಕರಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಅವಕಾಶ ದೊರೆತಿರುವುದು ಸಂವಿಧಾನದ ಶಕ್ತಿಯಿಂದ ಎಂದ ಅವರು, ಸಂವಿಧಾನದ ಬಲದಿಂದಲೇ ಸಾಮಾನ್ಯ ವ್ಯಕ್ತಿಯಾದ ತಾವು ನಮ್ಮ ಕ್ಷೇತ್ರದ ಶಾಸಕನಾಗಿ ಜನಸೇವೆ ಮಾಡಲು ಸಾಧ್ಯವಾಗಿದೆ ಎಂದರು.

ತಹಶೀಲ್ದಾರ್ ಎನ್.ಗಗನಸಿಂಧು ಮಾತನಾಡಿ,
ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಅವಕಾಶಗಳನ್ನು ಕಲ್ಪಿಸಿದ್ದು, ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತುಕೊಂಡು ನಡೆದುಕೊಳ್ಳಬೇಕು ಎಂದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಆದರ್ಶಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಈ ವೇಳೆ ಶಾಲಾ ವಿದ್ಯಾರ್ಥಿಗಳಿಂದ ಧ್ವಜವಂದನೆ ,
ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಎನ್.ಸಿ.ಸಿ. ವಿದ್ಯಾರ್ಥಿಗಳ ತಂಡ, ಪೊಲೀಸ್ ಇಲಾಖೆ ಹಾಗೂ ಗೃಹ ರಕ್ಷಣದಳ ಇಲಾಖೆಯ ಸಿಬ್ಬಂದಿ ಧ್ವಜವಂದನೆ ಸಲ್ಲಿಸಿದರು,ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು, ಸ್ವಾತಂತ್ರ್ಯ ದಿನಾಚರಣೆ ಭಾಗವಹಿಸಿದ್ದ ಶಾಲಾ ಮಕ್ಕಳು, ಸಾರ್ವಜನಿಕರಿಗೆ ಲಡ್ಡು ಸಿಹಿ ಹಂಚಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಆರ್.ಹೇಮಾವತಿ, ನಗರಸಭೆ ಪೌರಾಯುಕ್ತ ಜಿ.ಅಮೃತ, ಬಿಇಒ ಪಿ.ಸ್ವಾಮಿ,ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಗ್ರಾಮಾಂತರ ಪಿಎಸ್ಐ ಸುನೀಲ್ ಕುಮಾರ್, ಚೀಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜುಗೂರು ರಾಮಣ್ಣ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಸುರೇಶ್, ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷ ಬಿ.ಜಿ.ಗಣೇಶ್‌, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಸಾಪ ಅದ್ಯಕ್ಷ ಪಟೇಲ್ ನಾರಾಯಣಸ್ವಾಮಿ, ರೈತ ಸಂಘದ ರಾಜ್ಯ ಕಾರ್ಯಾದ್ಯಕ್ಷ ಭಕ್ತರಹಳ್ಳಿ ಭೈರೇಗೌಡ,ಬೆಳ್ಳೂಟಿ ಮುನಿಕೆಂಪಣ್ಣ‌, ಕರವೇ ಅದ್ಯಕ್ಷ ಮುನಿರಾಜು(ಕುಟ್ಟಿ ) ಹಾಗು ಕನ್ನಡ ಪರ ,ರೈತ ಪರ ಸಂಘನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now