ವಿಜಯ ದರ್ಪಣ ನ್ಯೂಸ್…..
ಜಿಲ್ಲಾಡಳಿತ ಭವನದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಜನ್ಮದಿನ ಆಚರಣೆ
ಜಿಲ್ಲಾಧಿಕಾರಿ ಅವರಿಂದ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ
ಜೈ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ. 15 :
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸಂಗೊಳ್ಳಿ ರಾಯಣ್ಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ವೀರಸೇನಾನೆ, ದೇಶಪ್ರೇಮ, ಶೌರ್ಯ, ತ್ಯಾಗ ಹಾಗೂ ಸ್ವಾಭಿಮಾನದ ಪ್ರತೀಕವಾಗಿರುವ ಜೀವನ ಇಂದಿನ ಯುವಜನತೆಗೆ ಸ್ಪೂರ್ತಿಯಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ರಾಯಣ್ಣ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು
ಈ ವೇಳೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.










