--Ads--

ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಮೈಸೂರಿನಲ್ಲಿ ಕರ್ನಾಟಕ ವಿಭಾಗೀಯ ಪಂದ್ಯಗಳ ಸಮಾಪಣೆ

On: August 16, 2026 5:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಮೈಸೂರಿನಲ್ಲಿ ಕರ್ನಾಟಕ ವಿಭಾಗೀಯ ಪಂದ್ಯಗಳ ಸಮಾಪಣೆ

*ಆಗಸ್ಟ್ 16, 2026*: 18ನೇ ಆವೃತ್ತಿಯ ಈಶ ಗ್ರಾಮೋತ್ಸವ 2026ರ ಕರ್ನಾಟಕ ವಿಭಾಗೀಯ ಪಂದ್ಯಗಳು ಮೈಸೂರಿನ ಜಗದೀಶ್ ಪ್ರಸಾದ್ ಆಟದ ಮೈದಾನ ಜಯಲಕ್ಷ್ಮಿ ಪುರಂ ನಲ್ಲಿ ನಡೆದಿದ್ದು, ಈ ಭಾಗದ 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರು ಭಾಗವಹಿಸಿದ್ದರು. ಈಶ ಔಟ್‌ರೀಚ್ ಆಯೋಜಿಸಿದ್ದ ಈ ವಿಭಾಗೀಯ ಪಂದ್ಯಗಳಲ್ಲಿ 20 ಪುರುಷರ ವಾಲಿಬಾಲ್ ತಂಡಗಳು ಮತ್ತು 12 ಮಹಿಳೆಯರ ಥ್ರೋಬಾಲ್ ತಂಡಗಳು ಪಾಲ್ಗೊಂಡಿದ್ದವು. ರಾಷ್ಟ್ರೀಯ ಹಂತದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಹಂಬಲವಿರುವ ತಂಡಗಳಿಗೆ ಈ ಪಂದ್ಯಾವಳಿಯು ಪ್ರಮುಖ ಅರ್ಹತಾ ಸುತ್ತಾಗಿತ್ತು.

ತೀವ್ರ ಪೈಪೋಟಿಯಿಂದ ಕೂಡಿದ ಸರಣಿ ಪಂದ್ಯಗಳ ನಂತರ ಪುರುಷರ ವಾಲಿಬಾಲ್ ಪಂದ್ಯಾವಳಿಯು ಮುಕ್ತಾಯಗೊಂಡಿದ್ದು, ಚಾಮರಾಜನಗರದ ರಾಮಾಪುರದ ಬುದ್ಧ ಸೂಪರ್ ಟೀಂ ತಂಡ ವಿಭಾಗೀಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಂಜನಗೂಡಿನ ಕಡಕೋಳದ ಚಾಮುಂಡಿ ಬಾಯ್ಸ್ ತಂಡ ಅದ್ಭುತ ಪ್ರದರ್ಶನದೊಂದಿಗೆ ದ್ವಿತೀಯ ಸ್ಥಾನ ಪಡೆಯಿತು. ಚಿಕ್ಕಬಳ್ಳಾಪುರದ ಮಾಸ್ತೇನಹಳ್ಳಿಯ ಅಪ್ಪು ಬಾಯ್ಸ್ ತಂಡ ತೃತೀಯ ಸ್ಥಾನವನ್ನು ಕಾಯ್ದುಕೊಂಡರೆ, ಕೋಲಾರದ ಮಾರ್ಜೇನಹಳ್ಳಿಯ ಎಂ.ಆರ್.ಜೆ ಬ್ರೋಧೆರ್ಸ್ ತಂಡ ನಾಲ್ಕನೇ ಸ್ಥಾನ ಪಡೆಯಿತು.

ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ, ನಂಜನಗೂಡಿನ ಹೆಡತಲೆಯ ಚಾಮುಂಡಿ ಗರ್ಲ್ಸ್ ತಂಡ ವಿಭಾಗೀಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚಿಕ್ಕಬಳ್ಳಾಪುರದ ಬಲಿಗನಹಳ್ಳಿಯ ಸಿ.ಎಸ್.ಎ ತಂಡ ದ್ವಿತೀಯ ಸ್ಥಾನ ಪಡೆಯಿತು, ಹಾಗೂ ಶಿವೋಮೊಗ್ಗದ ಗುಡ್ಡೆಕೊಪ್ಪದ ಕೊಡಚಾದ್ರಿ ತಂಡ ಮತ್ತು ಬೆಟ್ಟದಪುರದ ಚಿಕ್ಕನೇರಳೆಯ ಜೈ ಶ್ರೀ ರಾಮ್ ತಂಡಗಳು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳನ್ನು ಪಡೆದುಕೊಂಡವು.

2004ರಲ್ಲಿ ಪ್ರಾರಂಭವಾದ ಈಶ ಗ್ರಾಮೋತ್ಸವವು ಸಾಂಪ್ರದಾಯಿಕ ಕ್ರೀಡೆಗಳನ್ನು ಪುನರುಜ್ಜೀವನಗೊಳಿಸಲು, ದೈಹಿಕ ಆರೋಗ್ಯವನ್ನು ಉತ್ತೇಜಿಸಲು, ಸಮುದಾಯಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸಲು ಮತ್ತು ಕ್ರೀಡೆಯ ಶಕ್ತಿಯ ಮೂಲಕ ಗ್ರಾಮೀಣ ಭಾರತದ ಪ್ರಮುಖ ಸಾಮಾಜಿಕ ಸವಾಲುಗಳನ್ನು ಎದುರಿಸಲು ಈಶ ಔಟ್‌ರೀಚ್ ಹಮ್ಮಿಕೊಳ್ಳುವ ವಾರ್ಷಿಕ ಗ್ರಾಮೀಣ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬವಾಗಿದೆ.

ಶಾಸಕ ಶ್ರೀ ಹರೀಶ್ ಗೌಡ, ‘ಖೇಲೋ ಇಂಡಿಯಾ’ದ ಕಾರ್ಯನಿರ್ವಾಹಕ ನಿರ್ದೇಶಕಿ ಕುಮಾರಿ ಅಮರ್ ಜ್ಯೋತಿ, ಪ್ರಶಸ್ತಿ ವಿಜೇತ ಜಾನಪದ ಗಾಯಕ ಅಮ್ಮಾ ರಾಮಚಂದ್ರ ಮತ್ತು ಟಿಬೆಟಿಯನ್ ಬೌದ್ಧ ಭಿಕ್ಷು ನವಾಂಗ್ ಲಾಮಾ ಅವರಂತಹ ಗಣ್ಯರ ಸಮ್ಮುಖದಲ್ಲಿ ಪಂದ್ಯಾವಳಿಗಳಿಗೆ ಚಾಲನೆ ನೀಡಲಾಯಿತು. ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಶ್ರೀ ಜಾವಗಲ್ ಶ್ರೀನಾಥ್ ಹಾಗೂ ಕರ್ನಾಟಕದ ಮೊದಲ ಚೆಸ್ ಗ್ರ್ಯಾಂಡ್‌ಮಾಸ್ಟರ್ ಶ್ರೀ ತೇಜ್‌ಕುಮಾರ್ ಎಂ.ಎಸ್. ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಶ್ರೀ ಹರೀಶ್ ಗೌಡ ಅವರು ಹೀಗೆ ಹೇಳಿದರು:

“ಸದ್ಗುರು ಮತ್ತು ಈಶಾ ಫೌಂಡೇಶನ್‌ನ ಕಾರ್ಯ ಹಾಗೂ ದೂರದೃಷ್ಟಿಯನ್ನು ಕಂಡು ನನಗೆ ಅತ್ಯಂತ ಸಂತೋಷವಾಗಿದೆ. ಸ್ವತಃ ಒಬ್ಬ ಕ್ರೀಡಾಪಟುವಾಗಿರುವುದರಿಂದ, ದೈನಂದಿನ ಜೀವನದಲ್ಲಿ ಹಾಗೂ ಸಮಾಜದ ಒಟ್ಟಾರೆ ಕ್ಷೇಮಾಭಿವೃದ್ಧಿಯಲ್ಲಿ ಇದರ ಮಹತ್ವವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇಲ್ಲಿ ನಡೆದ ಕ್ರೀಡಾಕೂಟದ ನಂತರ ಒಬ್ಬ ಮಹಿಳೆಯ ನರಗಳ ಉಬ್ಬುವಿಕೆ ಸಮಸ್ಯೆ ಗುಣವಾಗಿದೆ ಎಂಬ ವಿಷಯ ತಿಳಿದು ನನಗೆ ಹೆಮ್ಮೆ ಎನಿಸುತ್ತಿದೆ. ನಾನು ಸದ್ಗುರುಗಳ ವೀಡಿಯೊಗಳನ್ನು ವೀಕ್ಷಿಸುತ್ತೇನೆ; ಅವು ನನಗೆ ಉಪಯುಕ್ತವೆನಿಸಿವೆ ಮತ್ತು ಅವರಿಂದ ನಾನು ಅಪಾರ ಸ್ಫೂರ್ತಿಯನ್ನು ಪಡೆದಿದ್ದೇನೆ.” ಎಂದು ಮಾತನಾಡಿದರು.

ಈ ವರ್ಷದ 18ನೇ ಆವೃತ್ತಿಯು ಗ್ರಾಮೋತ್ಸವದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಸ್ತರಣೆಯಾಗಿದ್ದು, 10 ರಾಜ್ಯಗಳು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಕ್ಕೆ ವಿಸ್ತರಿಸಿದೆ. 40,000ಕ್ಕೂ ಹೆಚ್ಚು ಗ್ರಾಮಗಳನ್ನು ತಲುಪಿದ್ದು, ಅಂದಾಜು 7,000 ತಂಡಗಳ ಮೂಲಕ ಸುಮಾರು 15,000 ಮಹಿಳಾ ಆಟಗಾರರು ಸೇರಿದಂತೆ 80,000ಕ್ಕೂ ಹೆಚ್ಚು ಆಟಗಾರರನ್ನು ಒಳಗೊಂಡಿದೆ. ಮೊದಲ ಬಾರಿಗೆ, ಈ ಹಬ್ಬವು ತನ್ನ ಸಾಂಪ್ರದಾಯಿಕ ದಕ್ಷಿಣ ಭಾರತದ ಗಡಿಯಿಂದ ಹೊರತಾಗಿ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಪುದುಚೇರಿಗಳ ಜೊತೆಗೆ ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ, ಒಡಿಶಾ ಮತ್ತು ಮಹಾರಾಷ್ಟ್ರಗಳಿಗೂ ವಿಸ್ತರಿಸಿದೆ.

ಜನರು ಮತ್ತು ಸಮುದಾಯಗಳನ್ನು ರೂಪಿಸುವಲ್ಲಿ ಕ್ರೀಡೆಯ ಆಳವಾದ ಪಾತ್ರದ ಕುರಿತು ಮಾತನಾಡುತ್ತಾ ಸದ್ಗುರುಗಳು:

“ಜೀವಿಸಲು ಅತ್ಯಂತ ಜವಾಬ್ದಾರಿಯುತ ಮಾರ್ಗವೆಂದರೆ ಜೀವನದೊಂದಿಗೆ ಸದಾ ಉಲ್ಲಾಸದಿಂದ ಇರುವುದು. ಜೋಲು ಮುಖ ಮಾಡಿಕೊಂಡು ಬದುಕುವುದು ಅತ್ಯಂತ ಬೇಜವಾಬ್ದಾರಿತನ. ಲವಲವಿಕೆಯಿಂದ ಇರುವುದು ಎಂದರೆ ಜೀವನದೊಂದಿಗೆ ಅತ್ಯಂತ ಜವಾಬ್ದಾರಿಯುತವಾದ ಮತ್ತು ಸ್ಪಂದಿಸುವ ಗುಣ ಹೊಂದಿರುವುದು ಎಂದರ್ಥ. ನೀವು ಲವಲವಿಕೆಯಿಂದ ಇದ್ದಾಗ ಮಾತ್ರ ಎಲ್ಲದರ ಕಡೆಗೂ ಗಮನ ಹರಿಸಲು ಸಾಧ್ಯ. ನೀವು ಲವಲವಿಕೆಯಿಂದ ಇದ್ದರೆ ಮಾತ್ರ ಜಗತ್ತಿನ ಎಲ್ಲದಕ್ಕೂ ನಿಜವಾಗಿಯೂ ಸ್ಪಂದಿಸಬಹುದು, ಇಲ್ಲದಿದ್ದರೆ ಸಾಧ್ಯವಿಲ್ಲ – ಅದರ ಹೊರೆಯೇ ನಿಮ್ಮನ್ನು ಮುಗಿಸಿಬಿಡುತ್ತದೆ.” ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ‘ರಾಷ್ಟ್ರೀಯ ಕ್ರೀಡಾ ಪ್ರೋತ್ಸಾಹ ಸಂಸ್ಥೆ’ ಎಂದು ಗುರುತಿಸಲ್ಪಟ್ಟಿರುವ ಈಶ ಗ್ರಾಮೋತ್ಸವವು ಕಳೆದ ಎರಡು ದಶಕಗಳಲ್ಲಿ 35,000ಕ್ಕೂ ಹೆಚ್ಚು ಗ್ರಾಮಗಳ 2.6 ಲಕ್ಷಕ್ಕೂ ಹೆಚ್ಚು ಗ್ರಾಮೀಣ ಆಟಗಾರರನ್ನು ಒಳಗೊಂಡಿದೆ. ವೃತ್ತಿಪರ ಕ್ರೀಡಾಪಟುಗಳನ್ನು ಉದ್ದೇಶಪೂರ್ವಕವಾಗಿ ಹೊರತುಪಡಿಸುವ ಮೂಲಕ, ಈ ಪಂದ್ಯಾವಳಿಯು ಗ್ರಾಮೀಣ ಆಟಗಾರರಿಗೆ ವ್ಯವಸ್ಥಿತ ಸ್ಪರ್ಧೆಯನ್ನು ಅನುಭವಿಸಲು ಮತ್ತು ರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಲು ಅಪರೂಪದ ಅವಕಾಶವನ್ನು ಕಲ್ಪಿಸುತ್ತದೆ.

*ಈಶ ಔಟ್‌ರೀಚ್ ಕುರಿತು:* ಈಶ ಔಟ್‌ರೀಚ್ ಎಂಬುದು ಈಶ ಸಂಸ್ಥೆಯ ಸಾಮಾಜಿಕ ಉಪಕ್ರಮಗಳ ವಿಭಾಗವಾಗಿದ್ದು, ಗ್ರಾಮೀಣ ಪುನಶ್ಚೇತನ, ಶಿಕ್ಷಣ, ಪರಿಸರ ಸುಸ್ಥಿರತೆ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬೃಹತ್ ಪ್ರಮಾಣದ ಮಾನವ ಕ್ಷೇಮಾಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:* 9945125510, media.karnataka@sadhguru.org

WhatsApp

Join Now

Telegram

Join Now

Instagram

Join Now