--Ads--

ಬೋವಿ ಸಮಾಜದ ಫಲಾನುಭವಿಗಳಿಗೆ ನಿಗಮದಿಂದ ಹೊಲಿಗೆ ಯಂತ್ರ ವಿತರಿಸಿದ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ

On: August 17, 2026 5:14 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಬೋವಿ ಸಮಾಜದ ಫಲಾನುಭವಿಗಳಿಗೆ ನಿಗಮದಿಂದ ಹೊಲಿಗೆ ಯಂತ್ರ ವಿತರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಆಗಸ್ಟ್ 17 ಮೈಸೂರಿನ ಬಾಬು ಜಗಜೀವನ ರಾಂ ಸಭಾಂಗಣದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಮತ್ತು ಇನ್ನಿತರಸವಲತ್ತು ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ವಿತರಿಸಿ ಕಾರ್ಯಕ್ರಮ ಉದ್ಘಾಟಿಸಿದರು

ಸಚಿವರು ಅರ್ಹ ಯುವತಿಯರಿಗೆ ಉಚಿತ ಟೈಲರಿಂಗ್ ಯಂತ್ರೋಪಕರಣಗಳನ್ನು ವಿತರಿಸಿ. ಮಾತನಾಡಿದ ಸಚಿವರು ಸ್ವಾವಲಂಬನೆ ಹಾಗೂ ಸ್ವಯಂ ಉದ್ಯೋಗಕ್ಕೆ ನಿಗಮದ ವತಿಯಿಂದ ಉತ್ತೇಜನ ನೀಡುವ ಇಂತಹ ಜನಪರ ಕಾರ್ಯಕ್ರಮಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮತ್ತಷ್ಟು ಬಲ ನೀಡಲಿದ್ದು ನಿಗಮದಿಂದ ದೊರೆಯುವ ಸೌಲಭ್ಯಗಳನ್ನು ಸಮಾಜದ ಫಲಾನುಭವಿಗಳು ಪಡೆದುಕೊಳ್ಳುವ ಮೂಲಕ ತಮ್ಮ ಜೀವನಮಟ್ಟ ಸುಧಾರಿಸುವ ಇಂತ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಹೇಳಿದರು

ಸಮಾರಂಭದಲ್ಲಿ ಶಾಸಕ ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ರಾಜ್ಯಮೃಗಾಲಯ ಅಭಿವೃದ್ಧಿಪ್ರಾಧಿಕಾರದ ಅಧ್ಯಕ್ಷ ಕೆ. ರಂಗಸ್ವಾಮಿ, ಕಾಡಾ ಅಧ್ಯಕ್ಷ ಮರಿಸ್ವಾಮಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು, ಮೈಸೂರು ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ವಿಜಯ ಕುಮಾರ್, ಸಮಾಜದ ಮುಖಂಡ ನಾಗರಾಜು ಸೇರಿದಂತೆ ಹಲವು ಗಣ್ಯರು ಸಮಾಜದವರು ಸಮಾರಂಭದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now