--Ads--

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಸಂಜೀವಿನಿ ಸಂಭ್ರಮ

On: August 17, 2026 5:49 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಸಂಜೀವಿನಿ ಸಂಭ್ರಮ 

ಶಿಡ್ಲಘಟ್ಟ : ಉತ್ಪನ್ನಗಳು ಮಾರುಕಟ್ಟೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಅದರಲ್ಲಿ ವಿಭಿನ್ನತೆ ಇದ್ದು, ಉತ್ಪನ್ನದ ಗುಣಮಟ್ಟ ಮತ್ತು ಅದನ್ನು ಗ್ರಾಹಕರಿಗೆ ನೀಡುವಾಗ ಉತ್ತಮ ಪ್ಯಾಕೆಜಿಂಗ್ ಮಾಡಿಕೊಡಲಾಗಿದ್ದು, ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿನ ಸ್ವ-ಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳು ಸೇರಿದಂತೆ ವರಲಕ್ಷ್ಮಿ ಹಬ್ಬಕ್ಕೆ ಬೇಕಾದ ಸಾಮಗ್ರಿಗಳು ಖರೀದಿಸಲು ಅನುವು ಮಾಡಿಕೊಡಲಾಗಿದೆ ಎಂದು ತಾಲ್ಲೂಕು ಪಂಚಾಯತಿ ಇಒ ಆರ್.ಹೇಮಾವತಿ ತಿಳಿಸಿದರು.

ನಗರದ ಸೋಮವಾರದ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಗಸ್ಟ್ 17 ರಿಂದ ಆಗಸ್ಟ್ 18 ರವರೆಗೆ ಸೂಪರ್ ಮಾರ್ಕೆಟ್ ನ ಪರಿಕಲ್ಪನೆಯಂತೆ ಅಂಗಡಿಗಳನ್ನು ನಿರ್ಮಿಸಲಾಗಿದ್ದು, ಕಡಿಮೆ ವೆಚ್ಚದಲ್ಲಿ ಹಬ್ಬದ ಉತ್ಪನ್ನಗಳ ನೇರ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕ, ಶಿಡ್ಲಘಟ್ಟ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಸ್ವ-ಸಹಾಯ ಗುಂಪುಗಳ ಮಹಿಳಾ ಸದಸ್ಯರಿಂದ ನೇರ ಗ್ರಾಹಕರಿಗೆ ಎಲ್ಲಾ ಹಬ್ಬದ ಉತ್ಪನ್ನಗಳನ್ನು ಒಂದೇ ಕಡೆ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕರು (ಕೌಶಲ್ಯ) ಮುನಿರಾಜು, ಪೌರಾಯುಕ್ತ ಅಮೃತ, ಟಿ.ಪಿ.ಎಂ ವಿಜಯ್ ಕುಮಾರ್, ಬಾಲರಾಜು,ಮಜನಿರಾಜು, ನರಸಿಂಹ,ದ್ಯಾವಮ್ಮ, ಅಮರಾವತಿ, ನಾಗವೇಣಿ, ವಿವಿಧ ಗ್ರಾಮ ಪಂಚಾಯಿತಿಗಳ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now