--Ads--

ಸೆಪ್ಟೆಂಬ‌ರ್-4ರಂದು ತಾಲ್ಲೂಕಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅದ್ಧೂರಿ ಕಾರ್ಯಕ್ರಮ

On: August 20, 2026 4:57 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಸೆಪ್ಟೆಂಬ‌ರ್-4ರಂದು ತಾಲ್ಲೂಕಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಅದ್ಧೂರಿ ಕಾರ್ಯಕ್ರಮ 

ಶಿಡ್ಲಘಟ್ಟ : ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ
ಸೆಪ್ಟೆಂಬ‌ರ್ 4ರಂದು ತಾಲ್ಲೂಕಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ಗೊಲ್ಲ (ಯಾದವ) ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ.
ನಗರದ ಟಿ.ಬಿ. ರಸ್ತೆಯ ಶ್ರೀಕೃಷ್ಣ ದೇವಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಸಮುದಾಯದ ಅಧ್ಯಕ್ಷ ಲಕ್ಷ್ಮಣ್, ತಾಲ್ಲೂಕಿನ ವಿವಿಧ ಗ್ರಾಮಗಳಿಂದ 40ಕ್ಕೂ ಹೆಚ್ಚು ಪಲ್ಲಕ್ಕಿಗಳನ್ನು ನಗರಕ್ಕೆ ಕರೆತಂದು ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು.

ಕೆ.ಎಸ್‌.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಆರಂಭವಾಗುವ ಮೆರವಣಿಗೆ ಶ್ರೀಕೃಷ್ಣ ದೇವಾಲಯ, ಕೋಟೆ ವೃತ್ತ, ಮಾರಮ್ಮ ವೃತ್ತದ ಮೂಲಕ ಮಯೂರ ವೃತ್ತ ತಲುಪಲಿದೆ, ವಿವಿಧ ಕಲಾ ತಂಡಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ಗೌರವಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಪೂಜಾ, ಸಾಂಸ್ಕೃತಿಕ ಹಾಗೂ ಇತರ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದ್ದು ಪ್ರತಿ ಗ್ರಾಮದಿಂದ ಯಾದವ ಸಮುದಾಯದವರು ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಿ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯಾದವ ಸಂಘದ ಉಪಾಧ್ಯಕ್ಷ ಕರಿಯಪ್ಪನವರ ಮೂರ್ತಿ,ಖಜಾಂಚಿ ನವೀನ್ ಕುಮಾ‌ರ್, ಮಾಜಿ ಅಧ್ಯಕ್ಷ ಅಶ್ವತ್ಥಪ್ಪ, ಯುವ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಾಗಚಂದ್ರ ಹಾಗು ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ