ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಸಾವು.

ವಿಜಯ ದರ್ಪಣ ನ್ಯೂಸ್, ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾ ಜಿಲ್ಲೆ. ಜುಲೈ 31

 ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಮೃತಪಟ್ಟಿದ್ದಾರೆ.

 ದೇವನಹಳ್ಳಿ ತಾಲೂಕಿನ ಬಿಜ್ಜವರ ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತರು.

ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಐದು ದಿನಗಳ ಹಿಂದೆ ಬಿಜ್ಜವರದ ಸಂಬಂಧಿಕರ ಮನೆಗೆ ಬಂದಿದ್ದರು.

ಭಾನುವಾರ ಬಿಜ್ಜವರದ ಅಶ್ವಥನಾರಾಯಣ ಎಂಬುವವರ ತೋಟದ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಸೋಮವಾರ ಬೆಳಿಗ್ಗೆ ಮೃತದೇಹಗಳು ಪತ್ತೆಯಾಗಿದ್ದು, ತಕ್ಷಣ ತೋಟದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ವಿಜಯಪುರ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.