ವಿಜಯ ದರ್ಪಣ ನ್ಯೂಸ್…..
ಬೈಕ್‌ಗೆ ಕಾರ್ ಡಿಕ್ಕಿ, ವಾಹನ ಸವಾರ ಸಾವು

ಶಿಡ್ಲಘಟ್ಟ : ರಾಷ್ಟ್ರೀಯ ಹೆದ್ದಾರಿ-234ರ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಬೊಮ್ಮನಹಳ್ಳಿ ಗೇಟ್ ಬಳಿ ಬೈಕ್ ಹಾಗೂ ಕಾರು ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತಾಲ್ಲೂಕಿನ ಕುಂದಲಗುರ್ಕಿಯ ರಾಮಚಂದ್ರಪ್ಪ(61) ಮೃತ ವ್ಯಕ್ತಿ ,ಚಿಂತಾಮಣಿಯಿಂದ ಶಿಡ್ಲಘಟ್ಟದ ಕಡೆ ಬರುತ್ತಿದ್ದ ಕಾರು ಬೊಮ್ಮನಹಳ್ಳಿ ಗೇಟ್ ಸಮೀಪ ಬೈಕ್‌ಗೆ ಡಿಕ್ಕಿ ಹೊಡೆದಿದೆ ,ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಾಮಚಂದ್ರಪ್ಪ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ,ಶಿಡ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
&&&&&&&&&&&&&&&&&&&&
ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.25 :
ಕರ್ನಾಟಕ ಕ್ರಿಶ್ಷಿಯನ್ ಸಮುದಾಯ ಅಭಿವೃದ್ಧಿ ನಿಗಮ (ನಿ) ವತಿಯಿಂದ 2026-27 ನೇ ಸಾಲಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಫಾಸ್ಟ್ ಫುಡ್ ಟ್ರಕ್/ಟ್ರೈಲರ್/ಮೊಬೈಲ್ ಅಡುಗೆ ಮನೆ/ಆಹಾರದ ಮಳಿಗೆ ಯೋಜನೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ನಂ.19-14-143, 1ನೇ ಮಹಡಿ, ಡಿ.ಎನ್. ಮಂಜುನಾಥ ಕಾಂಪ್ಲೆಕ್ಸ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ080-27681786, ಸಹಾಯವಾಣಿ ಸಂಖ್ಯೆ 82777999990, 6360753075 ಮತ್ತು ಜಿಮೇಲ್ kmdcbrural@gmail.com, ವೆಬ್ ಸೈಟ್ www.kccdclonline.karnataka.gov.in ಸಂಪರ್ಕಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







