ವಿಜಯ ದರ್ಪಣ ನ್ಯೂಸ್…
ಆಗಸ್ಟ್ 28 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 27:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವತಿಯಿಂದ ಆಗಸ್ಟ್ 28 ರಂದು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಎಸ್. ತಂಗಡಗಿ, ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್. ರವಿ, ಎನ್. ನೆಲಮಂಗಲ ಶಾಸಕ ಶ್ರೀನಿವಾಸ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ. ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಾನೇಗೌಡ ಎಸ್ ಹೆಚ್, ಸರ್ಕಾರ ಕಾರ್ಯದರ್ಶಿ, ಆರ್ಥಿಕ ಇಲಾಖೆ ಹಾಗೂ ಆಡಳಿತಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಫಿ.ಸಿ ಜಾಫರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ದೇವನಹಳ್ಳಿ ಮಾಜಿ ಶಾಸಕ ಬಿ. ಚಂದ್ರಣ್ಣ, ದೇವನಹಳ್ಳಿ ತಾಲ್ಲೂಕಿನ ಕೊರುಮ ಜನಾಂಗದ ಅಧ್ಯಕ್ಷ ಕೆ ನಾಗೇಶ್ , ಮಾಜಿ ಪುರಸಭೆ ಸದಸ್ಯೆ ಲೀಲಾವತಿ ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ.ಎನ್.ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್.ಬಿ.ವಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್.ಎಂ.ವಿ,
ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕಲ್ಪನ ಆರ್. ದೇವನಹಳ್ಳಿ ತಾಲೂಕಿನ ತಹಶೀಲ್ದಾರ್ ಅನಿಲ್ ಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಎಲ್ಲಾ ನಾಮನಿರ್ದೇಶಿತ ಸದಸ್ಯರು ಎಲ್ಲಾ ಸಮುದಾಯದ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.









