--Ads--

ಮೈಸೂರು ನಾಡ ಹಬ್ಬ ದಸರಾ ಆನೆಗಳ ತಂಡಕ್ಕೆ ಮೈಸೂರು ಅರಮನೆಯಲ್ಲಿ ಅದ್ದೂರಿಯಾಗಿ ಸ್ವಾಗತ

On: August 28, 2026 3:13 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮೈಸೂರು ನಾಡ ಹಬ್ಬ ದಸರಾ ಆನೆಗಳ ತಂಡಕ್ಕೆ ಮೈಸೂರು ಅರಮನೆಯಲ್ಲಿ ಅದ್ದೂರಿಯಾಗಿ ಸ್ವಾಗತ

ತಾಂಡವಪುರ ಆಗಸ್ಟ್ 28: ವಿಶ್ವವಿಖ್ಯಾತ ಮೈಸೂರು ದಸರಾ ನಾಡಹಬ್ಬಮಹೋತ್ಸವ-ದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಅರಣ್ಯ ಸಚಿವ ರಾಮಲಿಂಗ ರೆಡ್ಡಿ ರವರ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು

ಇಂದು ಮೈಸೂರು ಅರಮನೆಗೆ ಆಗಮಿಸಿದ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು.

ಇದೇ ವೇಳೆ ಮಾತನಾಡಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಳಿದ್ದು ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ಈ ಮಹೋಸವ ಜರುಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ಸಂಪ್ರದಾಯಿಕವಾಗಿ ಸಂಪ್ರದಾಯಬದ್ಧವಾಗಿ ದಸರಾ ಆನೆಗಳಿಗೆ ಪೂಜಿ ಸಲ್ಲಿಸಿ ಪರ ಪುಷ್ಪನೆ ಇಡೀ ಗೌರವ ಸಲ್ಲಿಸಿದ್ದೇವೆ ಎಂದು ಅಲ್ಲದೆ ಆನೆಯ ಮಾವುತರು ಹಾಗೂ ಪಾಲಕರ ಗಳಿಗೆ ಹಾಗೂ ಅಧಿಕಾರಿ ವರ್ಗದವರಿಗೂ ಸಹ ನಾವು ಈ ಸಂದರ್ಭದಲ್ಲಿ ಈ ದಸರಾ ಮಹೋತ್ಸವ ಬಹಳ ಯಶಸ್ವಿಯಾಗಿ ನಡೆಯಲು ಶ್ರಮಿಸುವಂತೆ ತಿಳಿಸಿದ್ದೇವೆ ಎಂದರು

ಈ ಸಂದರ್ಭದಲ್ಲಿ ಸಚಿವ ರಾಮಲಿಂಗ ರೆಡ್ಡಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಟಿ.ಎಸ್. ಶ್ರೀವತ್ಸ, ಜಿ.ಟಿ.ದೇವೇಗೌಡ, ಕೆ. ಹರೀಶ್ ಗೌಡ, ಎಂಎಲ್ಸಿಗಳಾದ ರಘು ಕೌಟಿಲ್ಯ, ಸಿ.ಎನ್. ಮಂಜೇಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ ರಶ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ ಮಂಜುನಾಥ ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿಪಾಳ್ಯ ಬಸವರಾಜ್ ಜಿಲ್ಲಾ ಪಂಚಾಯತಿ ತಾಲೂಕು ಪಂಚಾಯಿತಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ಮುಂತಾದವರು  ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಾಡಹಬ್ಬ ಜಂಬುಸವಾರಿಯಲ್ಲಿ  ಅಂಬಾರಿ ಹೊರುವ ಆನೆ ಪ್ರಶಾಂತ್ ಆಯ್ಕೆಯಾಗಿದ್ದಾನೆ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರಿನ ಜಿ. ಪಂ. ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ

ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ  ಪತ್ರಕರ್ತ ಟಿಕೆ ಬಸವರಾಜು ರವರಿಗೆ ರೈತ ಸಂಘದಿಂದ ಸನ್ಮಾನ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರುಗಳು

ಗ್ರಾಮೀಣ ಪತ್ರಕರ್ತ ತಾಂಡವಪುರ ಟಿಕೆ ಬಸವರಾಜು ಅವರಿಗೆ 2025 ನೇ ಸಾಲಿನ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪ್ರಧಾನ