ವಿಜಯ ದರ್ಪಣ ನ್ಯೂಸ್….
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ 20 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ತಾಂಡವಪುರ ಆಗಸ್ಟ್ 31 ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕ ಸಂಘದ ಕಟ್ಟಡ ನಿರ್ಮಾಣಕ್ಕೆ ನನ್ನ ವಿಧಾನ ಪರಿಷತ್ ಅನುದಾನದಲ್ಲಿ 20 ಲಕ್ಷ ರೂಗಳನ್ನು ನೀಡುವುದಾಗಿ ಹಿರಿಯ ಪತ್ರಕರ್ತರು ಹಾಗೂ ವಿಧಾನಪರಿಷತ್ ಸದಸ್ಯ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದರು
ಅವರು ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಆವರಣದಲ್ಲಿರುವ ತಮ್ಮ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟಿಸಿದರು ಇದೇ ವೇಳೆ ಮಾತನಾಡಿದ ಶಿವಕುಮಾರ್ ಅವರು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂಗಳ ಅನುದಾನವನ್ನು ನೀಡಿದ್ದಾರೆ ಅದರ ಜೊತೆಗೆ ನನ್ನ ವಿಧಾನಪರಿಷತ್ ಅನುದಾನದಲ್ಲಿ ಸುಮಾರು 20 ಲಕ್ಷ ರೂಗಳನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಅಲ್ಲದೆ ನನ್ನನ್ನು ವಿಧಾನ ಪರಿಷತ್ತಿನ ಸದಸ್ಯನಾಗಿ ನಾಮನಿರ್ದೇಶನ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ನಮ್ಮ ನಾಯಕ ರಾಹುಲ್ ಗಾಂಧಿ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಅಂದಿನ ಕೆಪಿಸಿಸಿ ಅಧ್ಯಕ್ಷರು ಹಾಗೂ ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಕೃತಜ್ಞತೆ ಗಳನ್ನು ತಿಳಿಸಿದರು .
ಅವರು ವಿಧಾನ ಪರಿಷತ್ತಿನ ಸದಸ್ಯನಾಗಿ ಜನರ ಕುಂದುಕೊರತೆಗಳನ್ನು ಆಲಿಸಲು ಹಾಗೂ ಸರ್ಕಾರದ ಜನರಪ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಎಂದು ಹೇಳಿದರು
ಅಧಿಕಾರ ಎಂಬುದು ಚಲಾಯಿಸುವುದಕ್ಕೆ ಮಾತ್ರವಲ್ಲ, ಬದಲಿಗೆ ಜನಸಾಮಾನ್ಯರ ಸೇವೆಗೆ ಸಿಕ್ಕಿರುವ ಸದಾವಕಾಶ ಎಂದು ಭಾವಿಸಿದ್ದೇನೆ. ಈ ಕಚೇರಿ ಪ್ರತಿಯೊಬ್ಬರಿಗೂ ಬಾಗಿಲು ತೆರೆದ ಮನೆ. ಎಂದು ಅವರು ತಿಳಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ಷೇಮನಿಧಿಗೆ ವೈಯಕ್ತಿಕವಾಗಿ 2 ಲಕ್ಷ ರೂ., ಪ್ಯಾರಾ ಅಥ್ಲೀಟ್ ಶಿಲ್ಪ ಕೆ.ಎಸ್ ಮತ್ತು ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಕ್ಕೆ ಸಹಾಯ ಧನ ಹಾಗೂ ವಿಶೇಷ ಚೇತನರಿಗೆ ತ್ರಿಚಕ್ರ ವಾಹನವನ್ನು ಸಿದ್ದರಾಮಯ್ಯ ಅವರಿಂದ ವಿತರಿಸಲಾಯಿತು.
ಈ ಸಮಾರಂಭಕ್ಕೆ ಆಗಮಿಸಿದ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ಶಾಸಕರಾದ ಕೆ.ಹರೀಶ್ ಗೌಡ , ಹೆಚ್.ಎಂ.ಗಣೇಶ್ ಪ್ರಸಾದ್ , ದರ್ಶನ್ ಧ್ರುವನಾರಾಯಣ್ ಡಿ.ರವಿಶಂಕರ್ , ಮಾಜಿ ಶಾಸಕರಾದ ಹೆಚ್.ಪಿ.ಮಂಜುನಾಥ್ , ಎಂ.ಕೆ.ಸೋಮಶೇಖರ್ , ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮ, ಗ್ಯಾರಂಟಿ ಯೋಜನೆಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಜಿಲ್ಲಾಧ್ಯಕ್ಷ ಡಾ. ಬಿ ಜೆ ವಿಜಯ್ ಕುಮಾರ್ ಅರುಣ್ ಕುಮಾರ್ , ಮಾಜಿ ಮೇಯರ್ ಪುರುಷೋತ್ತಮ್ ಅವರು, ನಾರಾಯಣ್ ಅವರು, ಭೈರಪ್ಪ ಅವರು, ಮುಡಾ ಮಾಜಿ ಅಧ್ಯಕ್ಷರ ಹೆಚ್.ವಿ.ರಾಜೀವ್ , ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಸಿ ಹುಂಡಿ ಶಿವು ಪ್ರಸಾದ್, ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯದರ್ಶಿಗಳಾದ ಸಕಳ್ಳಿ ಬಸವರಾಜು ಸಿದ್ದರಾಜು ಅವರು ಸೇರಿದಂತೆ ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಗತಿಪರ ಚಿಂತಕರು, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಯ ನಾಯಕರು, ಹಲವು ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಮುಂತಾದವರು ಹಾಜರಿದ್ದರು










