--Ads--

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳ ಮಹಿಳೆಯರಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ.

On: September 1, 2026 4:47 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಸಹಾಯ ಸಂಘಗಳ ಮಹಿಳೆಯರಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಶಿಡ್ಲಘಟ್ಟ : ಮಹಿಳಾ ಸಬಲೀಕರಣದ ಜೊತೆಗೆ ಕುಟುಂಬದಲ್ಲಿ ಪ್ರೀತಿ, ಪರಸ್ಪರ ಗೌರವ ಮತ್ತು ಸಾಮರಸ್ಯವನ್ನು ಬೆಳೆಸುವ ಮೂಲಕ ಉತ್ತಮ ಕುಟುಂಬ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮಿಸುತ್ತಿದೆ ಎಂದು ಶ್ರೀ ಶ್ರೀ ಮಹದೇವ ಸ್ವಾಮಿಗಳು
ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಬಿ.ಸಿ.ಟ್ರಸ್ಟ್‌ ವತಿಯಿಂದ ನಗರದ ಶ್ರೀವಾಸವಿ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಶ್ರೀವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಜ್ಞಾನವಿಕಾಸ ಕೇಂದ್ರಗಳ ಮೂಲಕ ಮಹಿಳೆಯರಿಗೆ ಆರೋಗ್ಯ, ಶಿಕ್ಷಣ, ಕುಟುಂಬ ನಿರ್ವಹಣೆ, ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಯೋಜನಾಧಿಕಾರಿ ಪ್ರಕಾಶ್ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಸ್ವಸಹಾಯ ಸಂಘಗಳು ಹಾಗೂ ಜ್ಞಾನವಿಕಾಸ ಕೇಂದ್ರಗಳ ಮೂಲಕ ಗ್ರಾಮೀಣ ಮಹಿಳೆಯರನ್ನು ಒಗ್ಗೂಡಿಸಲಾಗುತ್ತಿದೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ
ಎಂದರು.

ಪೂಜ್ಯ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಗ್ರಾಮಾಭಿವೃದ್ಧಿಯ ಕನಸಿನ ಕೂಸಾಗಿ ಆರಂಭವಾದ ಯೋಜನೆ ಇಂದು ಕರ್ನಾಟಕದ ಹಳ್ಳಿ ಹಳ್ಳಿಯಲ್ಲೂ ತನ್ನ ಸೇವೆಯನ್ನು ವಿಸ್ತರಿಸಿದೆ ಗ್ರಾಮೀಣ ಪರಿವರ್ತನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸ ಭಾಷ್ಯ ಬರೆದಿದೆ ಎಂದು ಹೇಳಿದರು.

ಶಿಡ್ಲಘಟ್ಟದ ಜನರ ಪ್ರಮುಖ ಜೀವನಾಧಾರವಾಗಿರುವ ರೇಷ್ಮೆ ಕ್ಷೇತ್ರದ ಅಭಿವೃದ್ಧಿಗೂ ಯೋಜನೆಯ ವತಿಯಿಂದ ವಿವಿಧ ರೀತಿಯ ಆರ್ಥಿಕ ಸಹಾಯ ಹಾಗೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ಸಮತಿ ಸದಸ್ಯರಾದ ಹಿತ್ತಲಹಳ್ಳಿ ಕೆ.ಸುರೇಶ್, ತ್ಯಾಗರಾಜ್, ಲಿಯೋ ಕ್ಲಬ್ ಅಧ್ಯಕ್ಷ ಶ್ರೀಕಾಂತ್‌ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರಗಳ ಸದಸ್ಯರು ಹಾಗೂ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now