ವಿಜಯ ದರ್ಪಣ ನ್ಯೂಸ್….
ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್

ತಾಂಡವಪುರ ಸೆಪ್ಟೆಂಬರ್ 1 ವರುಣಾ ವ್ಯಾಪ್ತಿಯಲ್ಲಿ ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಸ್ ಯತಿಂದ್ರ ಸಿದ್ರಾಮಯ್ಯ ರವರು ಬರೆ ಪೀಡಿತ ಪ್ರದೇಶದ ರೈತರ ಜಮೀನು ಒಳಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದುಕೊಂಡರು.
ಕಾನೂನಿನಡಿಯಲ್ಲಿ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರ್ಕಾರದ ನಿಯಮಗಳಡಿಯಲ್ಲೇ ಮಾಡಬೇಕು. ಹಾಗಾಗಿ ೧೦೧ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇನ್ನೊಂದು ವಾರ ಬಿಟ್ಟು ಪರಿಶೀಲನೆ ನಡೆಸಿ, ಅರ್ಹ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.
ಮಂಗಳವಾರ ವರುಣಾ ವಿಧಾನಸಭಾ ಕ್ಷೇತ್ರ (ಹೋಬಳಿ) ವ್ಯಾಪ್ತಿಯ ದೇವಲಾಪುರ, ಮೋಸಂಮಾನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಆಯರಹಳ್ಳಿ.. ಮತ್ತು ರಾಯಣ್ಣ ಹುಂಡಿ ಗ್ರಾಮದಲ್ಲಿನ ಬರ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ಅಗತ್ಯ ಮಾಹಿತಿ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಅಗತ್ಯ ನೆರವು ಒದಗಿಸಲಿದೆ ಎಂದು ಅವರು ಭರವಸೆ ನೀಡಿದರು. ಬೆಳೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎನ್ಡಿಆರ್ಎಫ್ ಅಡಿಯಲ್ಲಿ ಹೆಚ್ಚಿನ ಪರಿಹಾರ ದೊರೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪ್ರಸ್ತುತ ಇರುವ ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಗೊಳಿಸಿ, ಬರದಿಂದ ತೀವ್ರವಾಗಿ ಬಾಧಿತವಾಗಿರುವ ಹೆಚ್ಚಿನ ತಾಲೂಕುಗಳಿಗೂ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಇನ್ನೂ ಬರ ಪರಿಸ್ಥಿತಿಯಿಂದ ರೈತರು ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ರೈತರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು. ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿ ಸುವ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.
ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರವನ್ನು ಬರೆದಿದ್ದೇವೆ. ಬರಪೀಡಿತ ಘೋಷಣೆಗೆ ಇರುವ ನಿಯಮಗಳನ್ನು ಸಡಿಲಿಸುವಂತೆ ಕೋರಿದ್ದೇವೆ. ನಿಯಮ ಸಡಿಲಿಸಿದರೆ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿ ಸಬಹುದು. ಆದರೆ ಕೇಂದ್ರದಿಂದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ವಿಸ್ತೃತ ಮೆಮೊರಾಂಡಮ್ ಅನ್ನು ಸದ್ಯದಲ್ಲೇ ಸಲ್ಲಿಸುತ್ತೇವೆ. ಅವರ ತಂಡ ಇಲ್ಲಿಗೆ ಬಂದು ಪರಿಶೀಲನೆ ನಡೆಸಿದ ಬಳಿಕ ಹಣ ಬಿಡುಗಡೆಯಾಗುತ್ತದೆ ಎಂದು ಡಿಸಿಎಂ ವಿವರಿಸಿದರು.
ಮುಖ್ಯಮಂತ್ರಿಗಳು ಇಂದು ಗದಗ ಜಿಲ್ಲೆಗೆ ಬರಪೀಡಿತ ಪ್ರದೇಶದ ವೀಕ್ಷಣೆಗೆ ತೆರಳಿದ್ದಾರೆ. ನಾನು ಇಂದು ಮತ್ತು ನಾಳೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಬರ ವೀಕ್ಷಣೆ ಮಾಡುತ್ತೇನೆ. ಅಂತಿಮವಾಗಿ ನಮ್ಮ ಸರ್ಕಾರ ಚರ್ಚಿಸಿ ರೈತರ ಸಮಸ್ಯೆ ಪರಿಹಾರಕ್ಕೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ವಿವರಿಸಿದರು.
ಯತೀಂದ್ರ ಭವಿಷ್ಯದ ನಾಯಕ: ಇದೇ ವೇಳೆ ನಗರಾಭಿವೃದ್ದಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಎಂ ಪರಮೇಶ್ವರ್ ಅವರು, ಮುಂದಿನ ಭವಿಷ್ಯದ ನಾಯಕರಾಗಿ ಯತೀಂದ್ರ ಹೊರಹೊಮ್ಮಲಿದ್ದಾರೆ ಎಂಬ ಆತ್ಮ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ. ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ. ಡಾ. ಎಸ್ ಯತೀಂದ್ರ ಸಿದ್ದರಾಮಯ್ಯ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ. ಹಾಡ್ಯ ರಂಗಸ್ವಾಮಿ, ರಾಯಣ್ಣ ಹುಂಡಿ ರವಿ, ಮಾದೇವಣ್ಣ, ಕೀಳನಪುರ ಗ್ರಾಮ ಪಂಚಾಯತಿ ಅಧ್ಯಕ್ಷ ನಂಜುಂಡಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಭುಗುತಗಳ್ಳಿ ಮಣಿ, ಜ್ವರಪ್ಪ, ಬಾಬು, ಮಂಜುಳಾ, ತಾಲೂಕು ಪಂಚಾಯತಿ ಸದಸ್ಯ ಮುದ್ದರಾಮೇಗೌಡ, ಗಂಗನ ತಿಮ್ಮಯ್ಯ, ಹೆಬ್ಬೆರಾಜು, ಸುರೇಶ್ ಬಾಬು, ಸೋಮಸುಂದರ್, ಶಿವಣ್ಣ ಇನ್ನಿತರರು ಉಪಸ್ಥಿತರಿದ್ದರು.
ಈ ವೇಳೆ ವರುಣಾ ಕ್ಷೇತ್ರದ ಎಲ್ಲಾ ಗ್ರಾಮಗಳ ಮುಖಂಡರಿಂದ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಮಂತ್ರಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬೃಹತ್ ಸೇಬಿನ ಹಾರ ಹಾಗೂ ಹೂವಿನ ಹಾರ ಹಾಕಿ ಸ್ವಾಗತಿಸಿ ಬರಮಾಡಿ ಕೊಳ್ಳ ಲಾಯಿತು. ಬಳಿಕ ಉಪ ಮುಖ್ಯಮಂತ್ರಿಗಳು ಕಂದಾಯ ಸಚಿವರು ಆದ ಡಾಕ್ಟರ್ ಜಿ ಪರಮೇಶ್ವರ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಮೈಸೂರು ಜಿಲ್ಲಾ ಪ್ರವಾಸದ ವೇಳೆ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿ, ಜನರನ್ನುದ್ದೇಶಿಸಿ ಮಾತನಾಡಿ ಮಾಹಿತಿ ಪಡೆದುಕೊಂಡಿದೆ
ಇಂದು ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಮಳೆಯ ಪ್ರಮಾಣ ಬಹಳ ಕಡಿಮೆಯಾಗಿ ಇಡೀ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ನೂರಾರು ಹಳ್ಳಿಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದೇವೆ. ಜಾನುವಾರುಗಳಿಗೆ ಕೇವಲ 30 ವಾರಗಳಿಗೆ ಸಾಕಾಗುವಷ್ಟು ಮೇವು ಇದೆ. ಇಂತಹ ಪರಿಸ್ಥಿತಿಯಲ್ಲಿ ನಾವು ರಾಜ್ಯದ ಪ್ರವಾಸ ಮಾಡಿ ಎಲ್ಲೆಲ್ಲಿ ಬರ ಇದೆ ಎಂದು ಪರಿಶೀಲನೆ ಮಾಡಿ, ಈಗಾಗಲೇ 101 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ.
ಇನ್ನೊಂದು ವಾರದಲ್ಲಿ ಇನ್ನೂ 50 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬಹುದು. ಇಂದು ಮೈಸೂರು ಜಿಲ್ಲೆಯಲ್ಲಿ ನಾಳೆ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಬರಗಾಲ ಪೀಡಿತ ತಾಲ್ಲೂಕುಗಳಿಗೆ ಭೇಟಿ ನೀಡುತ್ತಿದ್ದೇನೆ. ಪರಿಸ್ಥಿತಿಯನ್ನು ಅವಲೋಕನ ಮಾಡಿ ಮುಂದಿನ ದಿನಗಳಲ್ಲಿ ಸಾಮಾನ್ಯ ಜನರ ಪರವಾಗಿ, ರೈತರ ಪರವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತೇವೆ. ಹೀಗಾಗಿ ವಸ್ತುಸ್ಥಿತಿಯನ್ನು ನಾನೇ ಕಣ್ಣಾರೆ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರಕ್ಕೆ ಬಂದಿದ್ದೇನೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಕಲಬುರಗಿ, ಬೆಳಗಾವಿ, ಬೆಂಗಳೂರು ವಿಭಾಗಗಳಲ್ಲಿ ಬರ ಪರಿಶೀಲನೆಯನ್ನು ಮಾಡಿದ್ದೇವೆ. ಪರಿಸ್ಥಿತಿ ಬಹಳ ಗಂಭೀರವಾಗಿದೆ. ಇಂದು ಕೆ.ಆರ್ ಪೇಟೆ, ಕೆ. ಆರ್ ನಗರ ಮತ್ತು ಹುಣಸೂರಿಗೆ ಭೇಟಿ ನೀಡಿದ್ದೇನೆ. ಬರ ಪರಿಸ್ಥಿತಿಯ ಬಗ್ಗೆ ರೈತರಿಂದ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ.
ಈ ಸಂದರ್ಭದಲ್ಲಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಹಾಗೂ ಮೈಸೂರು ತಾಲೂಕು: ವರುಣ ವಿಧಾನಸಭಾ ಕ್ಷೇತ್ರದ ದೇವಲಾಪುರ ಗ್ರಾಮ. ರಾಯನ ಹುಂಡಿ ಗ್ರಾಮ. ಬರ ಪೀಡಿತ ಪ್ರದೇಶಗಳಿಗೆ. ಡಾ ಯತೀಂದ್ರ ಸಿದ್ರಾಮಯ್ಯನವರು ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿಪಾಳ್ಯ ಬಸವರಾಜು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ತಾಲೂಕು ದಾಂಡಾಧಿಕಾರಿ ಮಹೇಶ್ ಕುಮಾರ್ ಯೋಗೇಶ್ ಕುಮಾರ್ ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷ ಪ್ರಧಾನ ಕಾರ್ಯದರ್ಶಿ ಎಮ್ ಸಿ ಹುಂಡಿ ಶಿವಪ್ರಸಾದ್ ಸಕಳ್ಳಿ ಬಸವರಾಜು ಬಗರ್ ಹುಕುಂ ಸಮಿತಿಯ ಸದಸ್ಯ ರಾಜು ಕೆಎಸ್ ಹುಂಡಿ ಮಹಾದೇವ ಮುಖಂಡರು ರವಿ ಬ್ಲಾಕ್ ಉಪಾಧ್ಯಕ್ಷ. ಡಿಸಿಸಿ ಕಾರ್ಯದರ್ಶಿ ಪಾಪಣ್ಣ. ಮಾದಪ್ಪ. ಶಶಿ. ನಾಗರಾಜ. ಮಾದೇವ. ಶಿವು.PLD ಮಾದೇವಣ್ಣ, ಅನಿಲ್..ಮಹೇಶ್. ಶ್ರೀಕಂಠ. ರಾಮ ನಂಜಯ್ಯ. ಕಾಂತ. ಸಜ್ಜೆಹುಂಡಿ ರವಿ. ಇನ್ನು ಮುಂತಾದವರು ಅಕ್ಕಪಕ್ಕದ ಗ್ರಾಮಸ್ಥರು ವರುಣ ಕ್ಷೇತ್ರದ ಜನತೆ ಹಾಗೂ ಸುತ್ತಮುತ್ತಲ ಗ್ರಾಮಗಳ ರೈತರು ಮುಖಂಡರುಗಳು ಹಾಜರಿದ್ದರು









