--Ads--

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

On: September 2, 2026 4:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನ

 

ತಾಂಡವಪುರ ಸೆಪ್ಟೆಂಬರ್ ಎರಡು ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ದೊಡ್ಡ ಕವಲೊಂದೆ ಹೋಬಳಿ ವ್ಯಾಪ್ತಿಗೆ ಸೇರಿದ ರೈತರು ಮುಂಗಾರು ಮಳೆಯಲ್ಲಿ ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಸೂರ್ಯಕಾಂತಿ ಜೋಳ ಅತ್ತಿ ಇನ್ನು ಮುಂತಾದ ಬೆಳೆಗಳು ಈ ಬಾರಿಯ ವರುಣನ ಕೃಪೆ ಇಲ್ಲದೆ ರೈತರು ಬೆಳೆದಿರುವ ಬೆಳೆಗಳಿಗೆ ಸಂಪೂರ್ಣವಾಗಿ ನಾಸವಾಗಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ
ಬರಗಾಲದ ಹಿನ್ನೆಲೆಯಲ್ಲಿ ರೈತರ ನೆರವಿಗೆ ಸರ್ಕಾರ ರೈತರಿಗೆ ನೆರವಾಗುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬರಹ ಪರಿಶೀಲನೆ ಕಾರ್ಯಕ್ರಮಗಳನ್ನು ಆಯಾಯ ಜಿಲ್ಲಾ ಮಂತ್ರಿಗಳು ಉಸ್ತುವಾರಿ ಮಂತ್ರಿಗಳು ಹಾಗೂ ಶಾಸಕರುಗಳು ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಬೇಕು ಎಂಬ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಇಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಆದ ಡಾ ಜಿ ಪರಮೇಶ್ವರ್ ಹಾಗೂ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಖುದ್ದು ರೈತರ ಜಮೀನುಗಳಿಗೆ ಭೇಟಿ ನೀಡಿ  ಬರ ಪರಿಸ್ಥಿತಿಯನ್ನು ಅವಲೋಕನ ಮಾಡಿ ರೈತರಿಂದ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ರೈತರು ನಾವು ಮುಂಗಾರಿನಲ್ಲಿ ಸುಮಾರು 15 ಸಾವಿರದಿಂದ ಸುಮಾರು 50 ಸಾವಿರದವರೆಗೂ ಸಹ ಸಾಲ ಸೌಲಭ ಮಾಡಿ ಬಿತ್ತನೆ ಮಾಡಿದ್ದೇವೆ ಮಳೆಯಿಲ್ಲದೆ ಬೆಳೆಗಳೆಲ್ಲ ಸಂಪೂರ್ಣವಾಗಿ ನಾಸವಾಗಿ ನಮಗೆ ತುಂಬಾ ನಷ್ಟವಾಗಿದೆ ಜೀವನ ಮಾಡುವುದು ಕಷ್ಟ ಎಂದು ರೈತರು ಕಂದಾಯ ಸಚಿವರ ಮುಂದೆ ತಮ್ಮ ನೋವನ್ನು ಹೇಳಿಕೊಂಡರು.

ಬಳಿಕ ಚಾಮರಾಜನಗರ ಜಿಲ್ಲೆಗೆ ಸೇರಿದ ಗ್ರಾಮಗಳಿಗೆ ಪ್ರವಾಸ ಕೈಗೊಂಡರು ಈ ಸಂದರ್ಭದಲ್ಲಿ ಪಸು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಶಾಸಕ ದರ್ಶನ್ ದ್ರುವ ನಾರಾಯಣ್ ,ಜೆಲ್ಲೆಯ ಶಾಸಕರು, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಉಪಮುಖ್ಯಮಂತ್ರಿಗಳು ಬೆಳೆ ,ಕುಡಿಯುವ ನೀರಿನ ಅಭಾವ ಪರಿಸ್ಥಿತಿ ಯನ್ನು ವೀಕ್ಷಣೆ ಮಾಡಿದರು.

▪️ಗುಂಡ್ಲುಪೇಟೆ ತಾಲೂಕಿನ ಬೇಗೂರಿಗೆ ಆಗಮಿಸುತ್ತಿದ್ದಂತೆ ರೈತ ಮುಖಂಡರಿಂದ ಅಹವಾಲುಗಳನ್ನು ಆಲಿಸಿದರು. ಸೋಮಹಳ್ಳಿ ಗ್ರಾಮದಲ್ಲಿ ಒಣಗಿದ ಸೂರ್ಯಕಾಂತಿ ಬೆಳೆಯನ್ನು ವೀಕ್ಷಣೆ ಮಾಡಿದರು. ಬೆಳೆ ಬೆಳೆದ ರೈತರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿಗಳು ಬೆಳೆಗಾಗಿ ಎಷ್ಟು ವೆಚ್ಚವಾಗಿದೆ? ಬೆಳೆ ಬೆಳೆಯಲು ಸಾಲ ತೆಗೆದುಕೊಂಡಿದ್ದೀರ? ಜಾನುವಾರುಗಳು ಇವೆಯೇ ಎಂದು ಪ್ರಶ್ನಿಸಿದರು. ಇದೇ ವೇಳೆ ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳಿಂದಲೂ ಸಹ ಮಾಹಿತಿ ಪಡೆದರು. ಪ್ರತಿ ಗ್ರಾಮ ಪಂಚಾಯಿತಿವಾರು ಮೇವು ವಿತರಣೆಯಾಗಬೇಕು. ಈ ಭಾಗದಲ್ಲಿ ನೀರಾವರಿ ಸೌಲಭ್ಯವಿಲ್ಲ. ಹೀಗಾಗಿ ನೀರಾವರಿ ಯೋಜನೆಗಳಿಗೆ ಹೆಚ್ಚು ಆದ್ಯತೆ ಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

▪️ಮರಳಾಪುರ-ಬೊಗ್ಗನಪುರದಲ್ಲಿ ಒಣಗಿ ಹೋಗಿದ್ದ ಹತ್ತಿ, ಚೆಂಡು ಹೂವು ಬೆಳೆಯನ್ನು ಪರಿಶೀಲಿಸಿದರು. ಅಲ್ಲಿಯೂ ಸಹ ಜಮೀನಿನ ರೈತರೊಂದಿಗೆ ಮಾತನಾಡಿ ಎಷ್ಟು ಪ್ರಮಾಣದಲ್ಲಿ ಬೆಳೆಗಾಗಿ ವೆಚ್ಚ ಮಾಡಿದ್ದೀರಿ ಎಂದು ಪ್ರಶ್ನಿಸಿ, ಕುಟುಂಬದ ಮಾಹಿತಿ ಪಡೆದ ಉಪಮುಖ್ಯಮಂತ್ರಿಗಳು ಸೂಕ್ತ ಕ್ರಮ ವಹಿಸಲಿದ್ದೇವೆ ಎಂದರು.

▪️ನಿಟ್ರೆ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಕಾರ್ಮಿಕರು ನಿರ್ವಹಿಸುತ್ತಿದ್ದ ಕೆರೆ ಕಾಮಗಾರಿ ವೀಕ್ಷಣೆ ಮಾಡಿದರು. ಇದೇ ವೇಳೆ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿಗಳು ನಿಮಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಸೌಲಭ್ಯ ತಲುಪುತ್ತಿದ್ದೆಯೇ ಎಂದು ಕೇಳಿದರು. ವಿಬಿ ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ನಿಗದಿತ ಅವಧಿಯೊಳಗೆ ಕೂಲಿ ಹಣ ಪಾವತಿಸಲು ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ಸೂಚಿಸಿದರು.

▪️ಚಾಮರಾಜನಗರ ತಾಲೂಕಿನ ಮಲೆಯೂರು ಗ್ರಾಮದಲ್ಲಿ ಒಣಗಿದ ಕಬ್ಬು, ಜೋಳ ಬೆಳೆಯನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಕಬ್ಬು ಬೆಳೆಯನ್ನು ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಗಮನಹರಿಸುವುದಾಗಿ ತಿಳಿಸಿದರು. ಮುಕ್ಕಡಹಳ್ಳಿಯಲ್ಲಿ ಗ್ರಾಮದಲ್ಲಿ ರೈತ ಮುಖಂಡರಿಂದ ಮನವಿ ಸ್ವೀಕರಿಸಿದರು. ಹೆಗ್ಗೋಠಾರ ಗ್ರಾಮದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿಗೆ ತೊಂದರೆಯಾಗಿದೆ. ಕೆರೆಗಳಿಗೆ ನೀರು ತುಂಬಿಸುವ ಮೂಲಕ ತಮ್ಮ ನೆರವಿಗೆ ಬರಬೇಕೆಂದು ಗ್ರಾಮಸ್ಥರು, ರೈತರು ಮನವಿ ಮಾಡಿದರು.

▪️ಹನೂರು ತಾಲೂಕಿನ ಅಜ್ಜೀಪುರ ಗ್ರಾಮಕ್ಕೆ ಭೇಟಿ ನೀಡಿ ಒಣಗಿದ ಬೆಳೆಗಳನ್ನು ಉಪಮುಖ್ಯಮಂತ್ರಿಗಳು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ರೈತ ಮುಖಂಡರು ಮಾತನಾಡಿ ಈ ಭಾಗದಲ್ಲಿ ನೀರಿಲ್ಲದೆ ಈರುಳ್ಳಿ, ಬಾಳೆ, ಬೆಳ್ಳುಳ್ಳಿ ಸೇರಿದಂತೆ ನಾನಾ ಬೆಳೆಗಳು ನಷ್ಟವಾಗಿದೆ. ತಮ್ಮ ಮನವಿಗೆ ಸ್ಪಂದಿಸಿ ಸೂಕ್ತ ನೆರವು ನೀಡಬೇಕು. ಉಡುತೊರೆಹಳ್ಳಕ್ಕೆ ನೀರು ತುಂಬಿಸಬೇಕು. ಹೂಳೆತ್ತಿಸಿ ನಮ್ಮ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಗ್ರಾಮಸ್ಥರ ಅಹವಾಲು ಆಲಿಸಿದ ವೇಳೆ ಕುಡಿಯುವ ನೀರಿಗೆ ಜನರು ಮನವಿ ಮಾಡಿದರು. ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಂದ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಕುರಿತು ಉಪಮುಖ್ಯಮಂತ್ರಿಗಳು ಮಾಹಿತಿ ಪಡೆದರು.

▪️ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ದರ್ಶನ್ ದ್ರುವನಾರಾಯಣ ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ್ ರೆಡ್ಡಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು,ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣೆ ಅಧಿಕಾರಿಗಳು ಸೇರಿದಂತೆ ರೈತರು ಹಾಜರಿದ್ದರು

-ಟಿ.ಕೆ.ಬಸವರಾಜು

WhatsApp

Join Now

Telegram

Join Now

Instagram

Join Now